The Scam Leaked: ಪೇಪರ್ ಲೀಕ್ ಹಗರಣ ಈಗ ವೆಬ್ ಸಿರೀಸ್; ವೈರಲ್ ಆಯ್ತು ಟೀಸರ್ | | ACTPnews

ದಿ ಸ್ಕ್ಯಾಮ್: ಲೀಕ್ಡ್


Last Updated:

ದೇಶಾದ್ಯಂತ ಭಾರೀ ವಿವಾದಕ್ಕೆ ಕಾರಣವಾಗಿದ್ದ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಇದೀಗ ವೆಬ್ ಸಿರೀಸ್ ರೂಪದಲ್ಲಿ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ.

ದಿ ಸ್ಕ್ಯಾಮ್: ಲೀಕ್ಡ್
ದಿ ಸ್ಕ್ಯಾಮ್: ಲೀಕ್ಡ್

ದೇಶಾದ್ಯಂತ ಭಾರೀ ವಿವಾದಕ್ಕೆ ಕಾರಣವಾಗಿದ್ದ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ (NEET Question Paper Leak Case) ಇದೀಗ ವೆಬ್ ಸಿರೀಸ್ ರೂಪದಲ್ಲಿ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ. ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಹೊಡೆತ ನೀಡಿದ ಈ ಪ್ರಕರಣ ಹಲವು ತಿಂಗಳುಗಳಿಂದ ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿತ್ತು. ಈಗ ಇದೇ ಘಟನೆಗಳಿಂದ ಪ್ರೇರಿತವಾಗಿರುವ ‘ದಿ ಸ್ಕ್ಯಾಮ್: ಲೀಕ್ಡ್’ (The Scam: Leaked) ಎಂಬ ವೆಬ್ ಸಿರೀಸ್ (Web Series) ಅನ್ನು ZEE5 ಒಟಿಟಿ ವೇದಿಕೆಯಲ್ಲಿ ಬಿಡುಗಡೆ ಮಾಡಲು ಮುಂದಾಗಿದೆ. ಈಗಾಗಲೇ ಬಿಡುಗಡೆಯಾಗಿರುವ ಟೀಸರ್ ಸಾಮಾಜಿಕ ಜಾಲತಾಣಗಳಲ್ಲಿ (Social Media) ಸಾಕಷ್ಟು ಗಮನ ಸೆಳೆದಿದೆ.

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಬಹಿರಂಗವಾದ ನಂತರ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದಿತ್ತು. ರಾಜಧಾನಿ ದೆಹಲಿಯಲ್ಲಿ ಜಂತರ್ ಮಂತರ್‌ನಿಂದ ಸಂಸತ್ತಿನವರೆಗೆ ಪ್ರತಿಭಟನಾ ಮೆರವಣಿಗೆ ನಡೆದಿದ್ದು, ವಿವಿಧ ವಿದ್ಯಾರ್ಥಿ ಸಂಘಟನೆಗಳು ಹಾಗೂ ಸಾರ್ವಜನಿಕರು ಈ ಹೋರಾಟಕ್ಕೆ ಬೆಂಬಲ ಸೂಚಿಸಿದ್ದರು. ಕೆಲವೆಡೆ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡು ಉದ್ವಿಗ್ನ ಪರಿಸ್ಥಿತಿಯೂ ನಿರ್ಮಾಣವಾಗಿತ್ತು.

ಈ ಘಟನೆಯೇ ಈಗ ವೆಬ್ ಸಿರೀಸ್

ಸಾಮಾಜಿಕ ಮತ್ತು ರಾಜಕೀಯ ಮಟ್ಟದಲ್ಲಿ ದೊಡ್ಡ ಚರ್ಚೆಗೆ ಕಾರಣವಾದ ಘಟನೆಗಳನ್ನು ಸಿನಿಮಾ ಅಥವಾ ವೆಬ್ ಸಿರೀಸ್ ರೂಪದಲ್ಲಿ ತೆರೆಗೆ ತರುವುದು ಹೊಸ ವಿಷಯವಲ್ಲ. ಇದೇ ಸಾಲಿಗೆ ಈಗ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವೂ ಸೇರಿದೆ.

ಟೀಸರ್‌ನಲ್ಲಿ ಏನಿದೆ?

ಸುಮಾರು ಒಂದು ನಿಮಿಷ ಹತ್ತು ಸೆಕೆಂಡುಗಳ ಟೀಸರ್ ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆಪತ್ರಿಕೆ ಮುದ್ರಣದಿಂದ ಆರಂಭವಾಗುತ್ತದೆ. ನಂತರ ಪ್ರಶ್ನೆಪತ್ರಿಕೆಗಳನ್ನು ಕಾರ್ಖಾನೆಯಿಂದ ರಹಸ್ಯವಾಗಿ ಹೊರಗೆ ಸಾಗಿಸುವ ದೃಶ್ಯಗಳನ್ನು ತೋರಿಸಲಾಗಿದೆ.

ಅದಾದ ಬಳಿಕ ಪ್ರಶ್ನೆಪತ್ರಿಕೆ ಹೇಗೆ ಸೋರಿಕೆಯಾಗುತ್ತದೆ, ಅದರ ಹಿಂದೆ ನಡೆಯುವ ಅಕ್ರಮ ಜಾಲ ಹೇಗಿರಬಹುದು ಎಂಬುದನ್ನು ಥ್ರಿಲ್ಲರ್ ಶೈಲಿಯಲ್ಲಿ ನಿರೂಪಿಸಲಾಗಿದೆ. ದೃಶ್ಯಗಳ ಮೂಲಕ ಪ್ರಶ್ನೆಪತ್ರಿಕೆ ಸೋರಿಕೆಯ ಗಂಭೀರತೆಯನ್ನು ಪ್ರೇಕ್ಷಕರಿಗೆ ಮನವರಿಕೆ ಮಾಡುವ ಪ್ರಯತ್ನ ಮಾಡಲಾಗಿದೆ.

ಟೀಸರ್‌ನ ಕೊನೆಯ ಭಾಗದಲ್ಲಿ ಒಬ್ಬ ವಿದ್ಯಾರ್ಥಿಯ ತಂದೆ ನಿರಂತರವಾಗಿ ಕರೆ ಮಾಡುತ್ತಿದ್ದರೂ ಯಾವುದೇ ಪ್ರತಿಕ್ರಿಯೆ ಸಿಗುವುದಿಲ್ಲ. ಕೊನೆಗೆ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ದೃಶ್ಯವನ್ನು ತೋರಿಸಲಾಗಿದ್ದು, ಪ್ರಶ್ನೆಪತ್ರಿಕೆ ಸೋರಿಕೆಯಂತಹ ಘಟನೆಗಳು ವಿದ್ಯಾರ್ಥಿಗಳ ಮಾನಸಿಕ ಆರೋಗ್ಯದ ಮೇಲೆ ಎಷ್ಟು ಗಂಭೀರ ಪರಿಣಾಮ ಬೀರುತ್ತವೆ ಎಂಬ ಸಂದೇಶವನ್ನು ನೀಡಲಾಗಿದೆ.

ಒಟ್ಟಿನಲ್ಲಿ ‘ದಿ ಸ್ಕ್ಯಾಮ್: ಲೀಕ್ಡ್’ ಕೇವಲ ಮನರಂಜನೆಯ ಸರಣಿಯಾಗಿರದೆ, ಪರೀಕ್ಷಾ ವ್ಯವಸ್ಥೆಯ ಪಾರದರ್ಶಕತೆ, ಭ್ರಷ್ಟಾಚಾರ ಮತ್ತು ವಿದ್ಯಾರ್ಥಿಗಳ ಭವಿಷ್ಯದ ಕುರಿತು ಚರ್ಚೆಗೆ ಕಾರಣವಾಗುವ ಸಾಧ್ಯತೆಯಿದೆ ಎಂದು ಸಿನಿ ವಲಯದಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed