Last Updated:
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸುದ್ದಿಗೋಷ್ಟಿ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಜೊತೆಗೆ ಮೂರು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ.
ದೆಹಲಿ: ನೀಟ್ ಪರೀಕ್ಷೆ (NEET Exam) ಅಕ್ರಮ ಮತ್ತು ಸಿಜೆಪಿ (CJP) ಕಾರ್ಯಕರ್ತರ ಮೇಲೆ ಲಾಠಿಚಾರ್ಜ್ ಹಾಗೂ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ರಾಜೀನಾಮೆಗೆ ಒತ್ತಾಯಿಸಿ ನಿನ್ನೆ ದೆಹಲಿಯಲ್ಲಿ ಕಾಂಗ್ರೆಸ್ ನಾಯಕರು (Congress Leaders) ಪ್ರತಿಭಟನೆ ನಡೆಸಿದ್ರು. ಪ್ರತಿಭಟನೆ ವೇಳೆ ರಾಹುಲ್ ಗಾಂಧಿ (Rahul Gandhi), ಪ್ರಿಯಾಂಕಾ ಗಾಂಧಿ ಹಾಗೂ ಕಾಂಗ್ರೆಸ್ ನಾಯಕರನ್ನ ಬಲವಂತವಾಗಿ ಪೊಲೀಸರು (Police) ವಶಕ್ಕೆ ಪಡೆದಿದ್ರು. ಇದನ್ನ ಖಂಡಿಸಿ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸುದ್ದಿಗೋಷ್ಟಿ ನಡೆಸಿ ಕೇಂದ್ರ ಸರ್ಕಾರದ (Central Government) ವಿರುದ್ಧ ಕಿಡಿಕಾರಿದ್ದಾರೆ. ಜೊತೆಗೆ ಮೂರು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ.
ದೆಹಲಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿರುವ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಪ್ರತಿ ತಿಂಗಳು ಸರಿಸುಮಾರು ಒಂದಲ್ಲ ಒಂದು ಪತ್ರಿಕೆ ಸೋರಿಕೆಯಾಗುತ್ತಲೇ ಇದೆ. ಪೇಪರ್ ಲೀಕ್ ಘಟನೆ ಸುಮಾರು 7.5 ಕೋಟಿ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರಿದೆ. ಆದ್ರೆ, ಕಳೆದ ದಶಕದಲ್ಲಿ ಯಾವುದೇ ಶಿಕ್ಷೆ ಇಲ್ಲ. ಒಂದು ಗುಂಪಿನ ಜನರು ನಮ್ಮ ಶಿಕ್ಷಣ ವ್ಯವಸ್ಥೆಯನ್ನು ನಾಶಪಡಿಸುತ್ತಿದ್ದಾರೆ. ನಮ್ಮ ಯುವಕರು ಪ್ರತಿಭಟಿಸುತ್ತಿರುವುದಕ್ಕೆ ಇದೇ ಕಾರಣ. ಕಳೆದ ದಶಕದಲ್ಲಿ ಕನಿಷ್ಠ 152 ಪತ್ರಿಕೆ ಸೋರಿಕೆಯಾಗಿದೆ ಎಂದು ರಾಹುಲ್ ಗಾಂಧಿ ಆರೋಪ ಮಾಡಿದ್ರು.
ಕೇಂದ್ರಕ್ಕೆ ರಾಹುಲ್ ಗಾಂಧಿ ಮೂರು ಡಿಮ್ಯಾಂಡ್!
- ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
- ಪ್ರಧಾನಿ ಮೋದಿ ವಿದ್ಯಾರ್ಥಿಗಳ ಬಳಿ ಕ್ಷಮೆ ಕೇಳಬೇಕು
- ಹಲ್ಲೆ ಮಾಡಿದವರ ವಿರುದ್ಧ ಕ್ರಮ ಆಗಬೇಕು
ಸಂಸತ್ ಅಧಿವೇಶನದ 3ನೇ ದಿನದ ಕಲಾಪವೂ ನೀಟ್ ಅಕ್ರಮಕ್ಕೆ ಬಲಿಯಾಗಿದೆ. ನೀಟ್ ಪರೀಕ್ಷೆಗೆ ವಿಪಕ್ಷಗಳು ಪಟ್ಟು ಹಿಡಿದ ಹಿನ್ನೆಲೆ ಲೋಕಸಭೆಯಲ್ಲಿ ಭಾರೀ ಗದ್ದಲ ಉಂಟಾಯ್ತು. ಈ ವೇಳೆ ಕೇಂದ್ರ ಸಚಿವ ಕಿರಣ್ ರಿಜಿಜು ನೀಟ್ ಅಕ್ರಮ ಉತ್ತರ ಕೊಡಲು ಸರ್ಕಾರ ಸಿದ್ಧವಿದೆ ಎಂದ್ರು. ವಿಪಕ್ಷಗಳು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿದ್ವು. ಈ ವೇಳೆ ಗದ್ದಲ ಹೆಚ್ಚಾದ ಹಿನ್ನೆಲೆ ಲೋಕಸಭೆ ಕಲಾಪವನ್ನ ನಾಳೆಗೆ ಮುಂದೂಡಲಾಯ್ತು.














