Delhi Protest: ವಿದ್ಯಾರ್ಥಿಗಳನ್ನು ಬೆಂಬಲಿಸಿ ಅಣ್ಣಾ ಹಜಾರೆ ‘ಮೌನ ಪ್ರತಿಭಟನೆ’! ಪ್ರಧಾನಿ ಮೋದಿಗೆ ಪತ್ರ ಬರೆದು ಹೇಳಿದ್ದೇನು? | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

ಅಣ್ಣಾ ಹಜಾರೆ


Last Updated:

ಅನಾರೋಗ್ಯದ ಹೊರತಾಗಿಯೂ, ಅಣ್ಣಾ ಹಜಾರೆ ವಿದ್ಯಾರ್ಥಿಗಳಿಗೆ ನೈತಿಕ ಬೆಂಬಲ ನೀಡಲು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.

ಅಣ್ಣಾ ಹಜಾರೆ
ಅಣ್ಣಾ ಹಜಾರೆ

ಮಹಾರಾಷ್ಟ್ರ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Delhi Protest) ಕಳೆದ ಕೆಲ ದಿನಗಳಿಂದ ಶುರುವಾಗಿರುವ ನೀಟ್ (NEET) ಹೋರಾಟ ಕ್ಷಣ ಕ್ಷಣಕ್ಕೂ ಉಗ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ದೆಹಲಿ ಮಾತ್ರವಲ್ಲ ಇಡೀ ದೇಶಾದ್ಯಂತ ನೀಟ್​ ಅಕ್ರಮದ ಕಿಚ್ಚು ಹಬ್ಬಿದೆ. ಸಂಸತ್ ಒಳಗೆ ವಿಪಕ್ಷಗಳು ಹೋರಾಟ ನಡೆಸುತ್ತಿದ್ದರೆ, ಹೊರಗೆ ವಿದ್ಯಾರ್ಥಿಗಳು (Students) ಹಾಗೂ ರಾಜಕೀಯ ಪಕ್ಷಗಳ ಕಾರ್ಯಕರ್ತರು ಹಂಗಾಮಾ ಸೃಷ್ಟಿಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan)​ ರಾಜೀನಾಮೆ ಹೊರತು ಹೋರಾಟ ನಿಲ್ಲಲ್ಲ ಅಂತ ಪಟ್ಟು ಹಿಡಿದಿದ್ದಾರೆ. ಈ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ಬೆಂಬಲ ಸೂಚಿಸಲು ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ (Anna Hazare) ಅವರು ಗುರುವಾರ ಮಹಾರಾಷ್ಟ್ರದ (Maharashtra) ಅಹಲ್ಯಾನಗರದಲ್ಲಿ 2 ಗಂಟೆಗಳ ಕಾಲ ‘ಮೌನ ಪ್ರತಿಭಟನೆ’ ನಡೆಸಿದ್ದಾರೆ.

ನೀಟ್​​ ಅಕ್ರಮದ ಹೋರಾಟಕ್ಕೆ ಅಣ್ಣಾ ಹಜಾರೆ ಎಂಟ್ರಿ

2011ರಲ್ಲಿ ಜನ ಲೋಕಪಾಲ ಬಿಲ್​ ಜಾರಿಗೊಳಿಸಬೇಕೆಂದು ಆಗ್ರಹಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಅಣ್ಣಾ ಹಜಾರೆ ಅವರು ಉಪವಾಸ ಸತ್ಯಾಗ್ರಹ ನಡೆಸಿ ಇಡೀ ದೇಶದ ಗಮನ ಸೆಳೆದಿದ್ದರು. ಇದೀಗ ಅನಾರೋಗ್ಯದ ಹೊರತಾಗಿಯೂ, ಅಣ್ಣಾ ಹಜಾರೆ ವಿದ್ಯಾರ್ಥಿಗಳಿಗೆ ನೈತಿಕ ಬೆಂಬಲ ನೀಡಲು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ಅಣ್ಣಾ ಹಜಾರೆ ಅವರು ಇಂದು ಅಹಲ್ಯಾನಗರದ ಮಹಾತ್ಮ ಪ್ರತಿಮೆಯ ಬಳಿ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೂ ಮೌನ ಪ್ರತಿಭಟನೆ ನಡೆಸಿದರು ಎಂದು ಸುದ್ದಿ ಸಂಸ್ಥೆ ಐಎಎನ್‌ಎಸ್ ವರದಿ ಮಾಡಿದೆ.

ಪ್ರಧಾನಿ ಮೋದಿಗೆ ಅಣ್ಣಾ ಹಜಾರೆ ಪತ್ರ

ಮೌನ ಪ್ರತಿಭಟನೆಗೆ ಮುನ್ನ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಅವರು ನಿನ್ನೆ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದರು. ದೆಹಲಿಯಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆಯ ಸಂದರ್ಭದಲ್ಲಿ ನಡೆದ ಹಿಂಸಾಚಾರ ತೀವ್ರ ದುಃಖಕರ ಸಂಗತಿ, ಪ್ರಜಾಪ್ರಭುತ್ವದಲ್ಲಿ, ಸಂಘರ್ಷಕ್ಕಿಂತ ಸಂಭಾಷಣೆ ಯಾವಾಗಲೂ ಯೋಗ್ಯವಾಗಿದೆ. ಸಚಿವರ ರಾಜೀನಾಮೆಯನ್ನು ಅಂಗೀಕರಿಸುವುದರಿಂದ ಸರ್ಕಾರ ದುರ್ಬಲವಾಗುವುದಿಲ್ಲ, ಬದಲಾಗಿ ಇತರ ಸಚಿವರಿಗೆ ಹೊಣೆಗಾರಿಕೆಯ ಬಗ್ಗೆ ಸಂದೇಶ ರವಾನೆಯಾಗುತ್ತದೆ ಮತ್ತು ಆಡಳಿತವನ್ನು ಸುಧಾರಿಸುತ್ತದೆ ಎಂದು ಅಣ್ಣಾ ಹಜಾರೆ ಪತ್ರದಲ್ಲಿ ತಿಳಿಸಿದ್ದಾರೆ.
ಯುವಜನರ ಕ್ಷೇಮ ಮತ್ತು ಭವಿಷ್ಯಕ್ಕಿಂತ ಮುಖ್ಯವಾದುದು ಯಾವುದೂ ಇಲ್ಲ

ನೀಟ್​ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೆಹಲಿಯಲ್ಲಿ ವಿದ್ಯಾರ್ಥಿಗಳು ಭಾರೀ ಪ್ರತಿಭಟನೆ ಮಾಡುತ್ತಿದ್ದಾರೆ. ಈ ಕುರಿತು ಪ್ರಧಾನಿ ಮೋದಿ ಪ್ರತಿಕ್ರಿಯಿಸಿದ್ದಾರೆ. ನಮ್ಮ ಯುವಜನರ ಕ್ಷೇಮ ಮತ್ತು ಭವಿಷ್ಯಕ್ಕಿಂತ ಮುಖ್ಯವಾದುದು ಯಾವುದೂ ಇಲ್ಲ. ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಭಾಗಿಯಾದವರಿಗೆ ತ್ವರಿತ ಹಾಗೂ ಕಠಿಣ ಶಿಕ್ಷೆ ವಿಧಿಸಲು ತ್ವರಿತ ವಿಚಾರಣಾ ನ್ಯಾಯಾಲಯಗಳನ್ನು ಸ್ಥಾಪಿಸಲು ನಾವು ನಿರ್ಧರಿಸಿದ್ದೇವೆ. ನಮ್ಮ ಯುವಜನರ ಭವಿಷ್ಯಕ್ಕೆ ಹಾನಿ ಮಾಡಲು ಪ್ರಯತ್ನಿಸುವವರನ್ನು ಯಾವುದೇ ಕಾರಣಕ್ಕೂ ಸುಮ್ಮನೆ ಬಿಡುವುದಿಲ್ಲ ಅಂತ ಪ್ರಧಾನಿ ಎಕ್ಸ್‌ನಲ್ಲಿ ಸಂದೇಶ ರವಾನಿಸಿದ್ದಾರೆ.
ಫಾಸ್ಟ್‌ಟ್ರ್ಯಾಕ್‌ ಕೋರ್ಟ್‌ಗಳ ಸ್ಥಾಪನೆ

ಪ್ರಧಾನಿ ಮೋದಿ ಅವರ ಪೋಸ್ಟ್‌ ಬೆನ್ನಲ್ಲೇ ಫಾಸ್ಟ್‌ಟ್ರ್ಯಾಕ್‌ ಕೋರ್ಟ್‌ಗಳ ಸ್ಥಾಪನೆ ಆಗಿವೆ. 4 ರಾಜ್ಯಗಳಲ್ಲಿ 5 ಫಾಸ್ಟ್‌ಟ್ರ್ಯಾಕ್‌ ಕೋರ್ಟ್‌ ಪೀಠಗಳ ಸ್ಥಾಪನೆ ಆಗಿವೆ. ಬಾಂಬೆ ಹೈಕೋರ್ಟ್‌ನಲ್ಲಿ 2 ಪೀಠಗಳು, ಭೂಪಾಲ್‌, ಕೋಲ್ಕತ್ತಾ, ದೆಹಲಿ ಹೈಕೋರ್ಟ್‌ಗಳಲ್ಲಿ ತಲಾ ಒಂದು ಪೀಠ ರಚನೆ ಆಗಿದೆ. ಮುಂದಿನ ವಾರವೇ ಕೋರ್ಟ್‌ಗೆ ಸಿಬಿಐ ಚಾರ್ಜ್‌ಶೀಟ್ ಸಲ್ಲಿಸಲಿದೆ.



Source link

Leave a Reply

Your email address will not be published. Required fields are marked *

Search the Archives

Access over the years of investigative journalism and breaking reports