Last Updated:
ಜಂತರ್ ಮಂತರ್‌ನಲ್ಲಿ ಸಿಜೆಪಿ ನೇತೃತ್ವದ ಪ್ರತಿಭಟನೆಗಳು ನಿರಂತರವಾಗಿ ಮುಂದುವರೆದಿವೆ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ಪ್ರತಿಭಟನೆಗಳು ನಿಲ್ಲುವುದಿಲ್ಲ ಎಂದು ಕಾಕ್ರೋಚ್ ಜನತಾ ಪಕ್ಷ ಸ್ಪಷ್ಟಪಡಿಸಿದೆ. ಈ ಮಧ್ಯೆ ಒಂದು ಪ್ರತಿಭಟನಾಕಾರರಿಗೆ ಒಂದು ಶಾಕಿಂಗ್ ಸುದ್ದಿ ಹೊರಬಂದಿದೆ.
ದೆಹಲಿಯ ಜಂತರ್ ಮಂತರ್‌ನಲ್ಲಿ (Jantar Mantar Protest) ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ (NEET Exam Paper Leak) ವಿರುದ್ಧ ಕಾಕ್ರೋಚ್ ಜನತಾ ಪಾರ್ಟಿ (CJP) ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಇನ್ನೂ ಕೂಡ ಪ್ರತಿಭಟನೆ ಮುಂದುವರೆದಿದೆ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ (Dharmendra Pradhan Resignation) ನೀಡುವವರೆಗೂ ಪ್ರತಿಭಟನೆಗಳು ನಿಲ್ಲುವುದಿಲ್ಲ ಎಂದು ಕಾಕ್ರೋಚ್ ಜನತಾ ಪಕ್ಷ ಸ್ಪಷ್ಟಪಡಿಸಿದೆ. ಈ ಮಧ್ಯೆ ಪ್ರತಿಭಟನಾಕಾರರಿಗೆ ಒಂದು ಆಘಾತಕಾರಿ ಸುದ್ದಿ ಹೊರ ಬಿದ್ದಿದೆ.
ಹೌದು, ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯ ನಾಯಕ ಮತ್ತು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಅವರಿಗೆ ಟೈಫಾಯ್ಡ್ ಸೋಂಕು ತಗುಲಿರುವುದು ಪತ್ತೆಯಾಗಿದೆ. ವೈದ್ಯಕೀಯ ಪರೀಕ್ಷೆಯಲ್ಲಿ ಇದು ದೃಢಪಟ್ಟಿದೆ ಎಂದು ಅವರು ತಮ್ಮ ವಿಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ.
ಅಭಿಜಿತ್ ದೀಪ್ಕೆ ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ವಿಡಿಯೋ ಪೋಸ್ಟ್ ಮಾಡಿ ತಮ್ಮ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ. ‘ನಾನು ನಿಜವಾಗಿಯೂ ಅನಾರೋಗ್ಯಕ್ಕೆ ಒಳಗಾಗಿದ್ದೇನೆ. ಆದರೆ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ಮುಂದುವರಿಯುತ್ತದೆ’ ಎಂದು ಹೇಳಿದ್ದಾರೆ.
ಒಂದೆಡೆ ಅಭಿಜೀತ್ ದೀಪ್ಕೆ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ರೆ, ಮತ್ತೊಂದೆಡೆ ಸೋನಮ್ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು. ಆದರೆ ಇದೀಗ ಅವರು ಷರತ್ತುಗಳ ಮೇಲೆ ಉಪವಾಸ ಸತ್ಯಾಗ್ರಹ ಕೈಬಿಟ್ಟಿದ್ಆರೆ. ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಆಂಗ್ಮೋ ಅವರು ಈ ಬಗ್ಗೆ ಸಂದೇಶ ಕಳುಹಿಸಿದ್ದರು. ‘ಚಳುವಳಿಗಾಗಿ ತಮ್ಮ ಶಕ್ತಿಯನ್ನು ಉಳಿಸಿಕೊಳ್ಳಲು’ ಉಪವಾಸ ಕೊನೆಗೊಳಿಸುವಂತೆ ಸಲಹೆ ನೀಡಿದ್ದರು.
ಸಿಜೆಪಿ ನೇತೃತ್ವದ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ಮತ್ತು ಯುವಕರು ಜಂತರ್ ಮಂತರ್‌ನಲ್ಲಿ ಜಮಾಯಿಸಿ ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ, ನೀಟ್ ಸಂತ್ರಸ್ತ ಕುಟುಂಬಗಳಿಗೆ ತಲಾ ₹1 ಕೋಟಿ ಪರಿಹಾರ ಮತ್ತು ಪ್ರತಿಭಟನಾಕಾರರ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಳ್ಳಬಾರದು ಎಂಬುದು ಅವರ ಮುಖ್ಯ ಬೇಡಿಕೆಗಳಾಗಿವೆ. ಕೇಂದ್ರ ಸಚಿವರು ಜೆ.ಪಿ. ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರು ಸಿಜೆಪಿ ನಿಯೋಗವನ್ನು ಭೇಟಿ ಮಾಡಿ ಭರವಸೆ ನೀಡಿದ್ದಾರೆ. ಆದರೂ ಸಿಜೆಪಿ ತನ್ನ ಬೇಡಿಕೆಗಳಿಗೆ ದೃಢವಾಗಿ ನಿಂತಿದೆ. ಪರೀಕ್ಷಾ ವ್ಯವಸ್ಥೆಯಲ್ಲಿ ಹೊಣೆಗಾರಿಕೆ ಖಚಿತಪಡಿಸುವವರೆಗೂ ಹೋರಾಟ ಮುಂದುವರಿಯುತ್ತದೆ ಎಂದು ಅಭಿಜೀತ್ ದೀಪ್ಕೆ ಹೇಳಿದ್ದಾರೆ.
ಜುಲೈ 20ರಂದು ನಡೆದ ‘ಸಂಸತ್ ಚಲೋ’ ಮೆರವಣಿಗೆಯ ಸಮಯದಲ್ಲಿ ಹಿಂಸಾಚಾರ ನಡೆದಿತ್ತು. ಪೊಲೀಸರು ಲಾಠಿಚಾರ್ಜ್ ಮತ್ತು ಅಶ್ರುವಾಯು ಬಳಸಿದ್ದರು. ಈ ಹಿಂಸಾಚಾರದ ನಂತರ ಪ್ರತಿಭಟನೆ ತೀವ್ರಗೊಂಡಿತು. ದೆಹಲಿ ಪೊಲೀಸರು ಈಗ FRS (ಮುಖ ಗುರುತಿಸುವಿಕೆ ವ್ಯವಸ್ಥೆ) ಬಳಸಿ ಪ್ರತಿಭಟನಾ ಸ್ಥಳದಲ್ಲಿ ಕ್ರಿಮಿನಲ್ ಹಿನ್ನೆಲೆಯುಳ್ಳ ವ್ಯಕ್ತಿಗಳನ್ನು ಗುರುತಿಸುತ್ತಿದ್ದಾರೆ.
ಅಭಿಜೀತ್ ದೀಪ್ಕೆ ಅವರ ಅನಾರೋಗ್ಯದ ನಡುವೆಯೂ ಪ್ರತಿಭಟನೆ ಮುಂದುವರಿಯುತ್ತಿದೆ. ಟೈಫಾಯ್ಡ್ ಸೋಂಕಿನಿಂದ ತುಂಬಾ ದುರ್ಬಲರಾಗಿದ್ದರೂ ಅವರು ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ನೀಟ್ ಪತ್ರಿಕೆ ಸೋರಿಕೆಯು ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಪ್ರಶ್ನಿಸುತ್ತಿದೆ. ಇದಕ್ಕೆ ಪ್ರತಿಯಾಗಿ ಸಿಜೆಪಿ ನಡೆಸುತ್ತಿರುವ ಪ್ರತಿಭಟನೆ ದೇಶಾದ್ಯಂತ ಗಮನ ಸೆಳೆದಿದೆ. ವಿದ್ಯಾರ್ಥಿಗಳು ಶಿಕ್ಷಣ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ನ್ಯಾಯಕ್ಕಾಗಿ ಹೋರಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಈ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂಬುದು ಸಾರ್ವಜನಿಕರ ಅಪೇಕ್ಷೆಯಾಗಿದೆ. ಅಭಿಜೀತ್ ದೀಪ್ಕೆ ಅವರ ಅನಾರೋಗ್ಯದ ನಡುವೆಯೂ ಪ್ರತಿಭಟನೆ ಮುಂದುವರಿಯುತ್ತಿರುವುದು ಅವರ ದೃಢ ನಿಲುವನ್ನು ತೋರಿಸುತ್ತದೆ. ಸರ್ಕಾರ ಮತ್ತು ಪ್ರತಿಭಟನಾಕಾರರ ನಡುವಿನ ಮಾತುಕತೆಗಳು ಏನು ಫಲ ನೀಡುತ್ತವೆ ಎಂಬುದನ್ನು ಎಲ್ಲರೂ ಕುತೂಹಲದಿಂದ ನೋಡುತ್ತಿದ್ದಾರೆ.
Jul 25, 2026 11:02 AM IST














