Bollywood: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬಳಿಕ ಬಾಲಿವುಡ್‌ನಲ್ಲಿ ಸಂಚಲನ; ಪ್ರಿಯಾಂಕಾ ಚೋಪ್ರಾ, ವಿಜಯ್ ವರ್ಮಾ ಪ್ರತಿಕ್ರಿಯೆ ವೈರಲ್ | | ACTPnews

ಧರ್ಮೇಂದ್ರ ಪ್ರಧಾನ್ ರಾಜೀನಾಮೆ


Last Updated:

ಹಲವು ವಾರಗಳಿಂದ ನಡೆಯುತ್ತಿದ್ದ ವಿದ್ಯಾರ್ಥಿಗಳ ಪ್ರತಿಭಟನೆ ಮತ್ತು ಪರೀಕ್ಷಾ ವಿವಾದಗಳ ನಡುವೆಯೇ ಈ ಬೆಳವಣಿಗೆ ನಡೆದಿರುವುದರಿಂದ ಸಾಮಾಜಿಕ ಜಾಲತಾಣಗಳಲ್ಲಿ (Social Media) ವಿವಿಧ ರೀತಿಯ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ಇದೇ ವೇಳೆ ಕೆಲ ಬಾಲಿವುಡ್ ಸೆಲೆಬ್ರಿಟಿಗಳು (Bollywood Celebrities) ತಮ್ಮ ಸಾಮಾಜಿಕ ಜಾಲತಾಣಗಳ ಮೂಲಕ ಪ್ರತಿಕ್ರಿಯಿಸಿರುವುದು ಗಮನ ಸೆಳೆದಿದೆ.

ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Minister Dharmendra Pradhan) ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ ಬಳಿಕ ದೇಶದಾದ್ಯಂತ ಈ ಬೆಳವಣಿಗೆ ಭಾರೀ ಚರ್ಚೆಗೆ ಕಾರಣವಾಗಿದೆ. ಹಲವು ವಾರಗಳಿಂದ ನಡೆಯುತ್ತಿದ್ದ ವಿದ್ಯಾರ್ಥಿಗಳ ಪ್ರತಿಭಟನೆ ಮತ್ತು ಪರೀಕ್ಷಾ ವಿವಾದಗಳ ನಡುವೆಯೇ ಈ ಬೆಳವಣಿಗೆ ನಡೆದಿರುವುದರಿಂದ ಸಾಮಾಜಿಕ ಜಾಲತಾಣಗಳಲ್ಲಿ (Social Media) ವಿವಿಧ ರೀತಿಯ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ಇದೇ ವೇಳೆ ಕೆಲ ಬಾಲಿವುಡ್ ಸೆಲೆಬ್ರಿಟಿಗಳು (Bollywood Celebrities) ತಮ್ಮ ಸಾಮಾಜಿಕ ಜಾಲತಾಣಗಳ ಮೂಲಕ ಪ್ರತಿಕ್ರಿಯಿಸಿರುವುದು ಗಮನ ಸೆಳೆದಿದೆ.

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಘೋಷಣೆ

ಧರ್ಮೇಂದ್ರ ಪ್ರಧಾನ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಎರಡು ಪುಟಗಳ ಹೇಳಿಕೆಯನ್ನು ಹಂಚಿಕೊಂಡು ರಾಜೀನಾಮೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ. ಈ ಘೋಷಣೆಯ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಸಂಬಂಧಿತ ವಿಷಯಗಳು ಟ್ರೆಂಡ್ ಆಗಿದ್ದು, ವಿದ್ಯಾರ್ಥಿಗಳು, ಸಾರ್ವಜನಿಕರು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ.

ವಿಜಯ್ ವರ್ಮಾ ಪೋಸ್ಟ್ ವೈರಲ್

ಬಾಲಿವುಡ್ ನಟ ವಿಜಯ್ ವರ್ಮಾ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಧರ್ಮೇಂದ್ರ ಪ್ರಧಾನ್ ಅವರ ಫೋಟೋ ಹಂಚಿಕೊಂಡು, ‘ಸರಿ, ನಾನು ಹೋಗುತ್ತಿದ್ದೇನೆ… ನಿಮ್ಮ ಪ್ರಾರ್ಥನೆಯಲ್ಲಿ ನನ್ನನ್ನು ನೆನಪಿಡಿ’ ಎಂಬ ತಮಾಷೆಯಾಗಿ  ಬರೆದುಕೊಂಡಿದ್ದಾರೆ. ಈ ಪೋಸ್ಟ್ ಕೆಲವೇ ಸಮಯದಲ್ಲಿ ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.

ಸೆಲೆಬ್ರಿಟಿಗಳ ಪ್ರತಿಕ್ರಿಯೆ

ವಿಜಯ್ ವರ್ಮಾ ಅವರ ಪೋಸ್ಟ್‌ಗೆ ನಟಿಯರಾದ ಫಾತಿಮಾ ಸನಾ ಶೇಖ್ ಮತ್ತು ಅಹಾನಾ ಕುಮ್ರಾ ಸೇರಿದಂತೆ ಹಲವು ಕಲಾವಿದರು ನಗುವ ಎಮೋಜಿಗಳನ್ನು ಹಂಚಿಕೊಂಡಿದ್ದಾರೆ ಎನ್ನಲಾಗಿದೆ. ಇದೇ ವೇಳೆ, ಕೆಲ ಸಾಮಾಜಿಕ ಜಾಲತಾಣ ಬಳಕೆದಾರರು ಧರ್ಮೇಂದ್ರ ಪ್ರಧಾನ್ ಹೋಗಿದ್ದಾರೆ ಹಾಗೂ ನಾವು ಗೆದ್ದಿದ್ದೇವೆ ಎಂಬ ರೀತಿಯ ಕಾಮೆಂಟ್‌ಗಳನ್ನು ಮಾಡಿದ್ದಾರೆ. ಈ ಪ್ರತಿಕ್ರಿಯೆಗಳು ಸಹ ವೈರಲ್ ಆಗಿವೆ.

ಪ್ರಿಯಾಂಕಾ ಚೋಪ್ರಾ ಪ್ರತಿಕ್ರಿಯೆ

ಪತ್ರಕರ್ತೆ ಫಾಯೆ ಡಿಸೋಜಾ ಹಂಚಿಕೊಂಡ ರಾಜೀನಾಮೆ ಕುರಿತ ಪೋಸ್ಟ್‌ಗೆ ನಟಿ ಪ್ರಿಯಾಂಕಾ ಚೋಪ್ರಾ ಪ್ರತಿಕ್ರಿಯಿಸಿರುವುದು ಸಹ ಗಮನ ಸೆಳೆದಿದೆ. ನಟಿ ಈ ಪೋಸ್ಟ್ ಗೆ ಚಪ್ಪಾಳೆ ಮತ್ತು ಕೈ ಎತ್ತಿರುವ ಎಮೋಜಿಗಳನ್ನು ಕಾಮೆಂಟ್ ವಿಭಾಗದಲ್ಲಿ ಹಂಚಿಕೊಂಡಿದ್ದಾರೆ ಎನ್ನಲಾಗಿದೆ.

ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ವೀರ್ ದಾಸ್

ಹಾಸ್ಯನಟ ವೀರ್ ದಾಸ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ವಿದ್ಯಾರ್ಥಿಗಳನ್ನು ಅಭಿನಂದಿಸುವ ಸಂದೇಶ ಹಂಚಿಕೊಂಡಿದ್ದಾರೆ. ವಿದ್ಯಾರ್ಥಿಗಳು ತಮ್ಮ ಧ್ವನಿಯನ್ನು ಪ್ರಜಾಪ್ರಭುತ್ವದ ಮೂಲಕ ವ್ಯಕ್ತಪಡಿಸಿದ್ದು, ಅವರ ಹೋರಾಟ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ ಎಂದು ಅವರು ತಮ್ಮ ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಘೋಷಣೆಯ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಅನೇಕ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಕೆಲವರು ಇದನ್ನು ವಿದ್ಯಾರ್ಥಿಗಳ ಹೋರಾಟದ ಫಲ ಎಂದು ಬಣ್ಣಿಸಿದರೆ, ಮತ್ತೂ ಕೆಲವರು ರಾಜಕೀಯ ಬೆಳವಣಿಗೆಯಾಗಿ ವಿಶ್ಲೇಷಿಸುತ್ತಿದ್ದಾರೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed