ಹಲವು ವರ್ಷಗಳಿಂದ ನಿರುದ್ಯೋಗಿಯಾಗಿರುವ ಯುವಕರಿಗೂ ಯುವನಿಧಿ ವಿಸ್ತರಿಸಿ: ಸಿಎಂಗೆ ಎಐಡಿವೈಒ ಮನವಿ | AIDYO delegation appeals to extend Yuva Nidhi to all unemployed youth

Karnataka

oi-Mamatha M

|

Google Oneindia Kannada News

ಬೆಂಗಳೂರು, ಜೂನ್. 27: ಐದು ಗ್ಯಾರಂಟಿಗಳನ್ನು ಜಾರಿ ಮಾಡಿರುವ ಕಾಂಗ್ರೆಸ್ ಸರ್ಕಾರಕ್ಕೆ ಆಲ್ ಇಂಡಿಯಾ ಡೆಮಾಕ್ರಟಿಕ್ ಯೂತ್ ಆರ್ಗನೈಸೇಶನ್ (ಎಐಡಿವೈಒ) ನಿಯೋಗ ಮತ್ತೊಂದು ಮನವಿ ಮಾಡಿದೆ. ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವ ನಿಧಿಯನ್ನು ರಾಜ್ಯದ ಎಲ್ಲಾ ನಿರುದ್ಯೋಗಿ ಯುವಕರಿಗೂ ವಿಸ್ತರಿಸಬೇಕು ಎಂದು ಒತ್ತಾಯಿಸಿದೆ.

ಜೂನ್ 26 ರಂದು ಎಐಡಿವೈಒ( AIDYO) ಸ್ಥಾಪನಾ ದಿನವಾಗಿದ್ದು, 58ನೇ ಸ್ಥಾಪನಾ ದಿನದ ಹಿನ್ನೆಲೆಯಲ್ಲಿ ಸಂಘಟನೆಯ ರಾಜ್ಯ ಸಮಿತಿಯ ನಿಯೋಗವೊಂದು ಅಖಿಲ ಭಾರತ ಉಪಾಧ್ಯಕ್ಷ ಡಾ. ಜಿ.ಶಶಿಕುಮಾರ್ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿ ಮಾಡಿದೆ. ಈ ವೇಳೆ ರಾಜ್ಯ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ನಿರುದ್ಯೋಗ ಭತ್ಯೆ ನೀಡಿಕೆ ಯೋಜನೆಯ ಜಾರಿಗಾಗಿ ಅಭಿನಂದನೆ ಸಲ್ಲಿಸಿ, ಈ ನೀತಿಯನ್ನು ಹಲವು ವರ್ಷಗಳಿಂದ ನಿರುದ್ಯೋಗದಿಂದ ಪರಿತಪಿಸುತ್ತಿರುವ ಎಲ್ಲ ನಿರುದ್ಯೋಗಿಗಳಿಗೂ ವಿಸ್ತರಿಸಬೇಕು ಎಂದು ಆಗ್ರಹಿಸಿದೆ.

AIDYO delegation appeals to extend Yuva Nidhi

ಯುವನಿಧಿ ಯೋಜನೆ ಅಡಿಯಲ್ಲಿ 2022- 23ನೇ ಸಾಲಿನಲ್ಲಿ ಉತ್ತೀರ್ಣರಾಗಿ 6 ತಿಂಗಳು ಉದ್ಯೋಗ ಸಿಗದೆ ಇರುವ ವೃತ್ತಿಪರ ಕೋರ್ಸ್‌ ಒಳಗೊಂಡು ಎಲ್ಲಾ ಪದವೀಧರರರಿಗೆ ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷಗಳ ಅವಧಿಗೆ ಪ್ರತಿ ತಿಂಗಳು 3,000 ರೂಪಾಯಿ ಸಿಗಲಿದೆ. ಹಾಗೆಯೇ ಡಿಪ್ಲೊಮಾ ಪದವೀಧರರಿಗೆ ಮಾಸಿಕ 1,500 ರೂಪಾಯಿ ನಿರುದ್ಯೋಗ ಭತ್ಯೆ ಸಿಗಲಿದೆ.

ಇನ್ನು, ಎಐಡಿವೈಒ ನಿಯೋಗವು ಇತ್ತೀಚೆಗೆ ಕರ್ನಾಟಕ ಪರೀಕ್ಷೆ ಪ್ರಾಧಿಕಾರವು ಐದು ನಿಗಮಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ 1,000 ರೂ. ದುಬಾರಿ ಅರ್ಜಿ ಶುಲ್ಕವನ್ನು ನಿಗದಿ ಮಾಡಿರುವುದನ್ನು ಮುಖ್ಯ ಮಂತ್ರಿಗಳ ಗಮನಕ್ಕೆ ತಂದಿದೆ. ಅದನ್ನು ವಾಪಸ್ಸು ಪಡೆಯುವಂತೆ ಮನವಿ ಸಲ್ಲಿಸಿದ್ದು, ಜೊತೆಯಲ್ಲಿ, ನೇಮಕಾತಿಗಾಗಿ ನಡೆಯುವ ಪ್ರವೇಶ ಪರೀಕ್ಷೆ ಬರೆಯಲು ಹೋಗುವ ನಿರುದ್ಯೋಗಿ ಯುವಕರಿಗೆ ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣ ಮಾಡಲು ಅವಕಾಶ ಮಾಡಿಕೊಡಬೇಕೆಂಬ ಬೇಡಿಕೆಯನ್ನು ಸರ್ಕಾರದ ಮುಂದಿಟ್ಟಿದೆ.

ರಾಜ್ಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು, ನೇಮಕಾತಿಯಲ್ಲಿನ ಭ್ರಷ್ಟಾಚಾರ ತಡೆಯಬೇಕು, ಯುವಜನರನ್ನು ದಾರಿ ತಪ್ಪಿಸುವ ಶಕ್ತಿಗಳನ್ನು ಮಟ್ಟಹಾಕಬೇಕು, ದ್ವೇಷದ ರಾಜಕಾರಣ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ನೇಮಕಾತಿಗಾಗಿನ ಎಲ್ಲಾ ತರಹದ ಅರ್ಜಿ ಶುಲ್ಕಗಳನ್ನು ಕೈಬಿಡಬೇಕು, ಯುವಜನತೆಯ ಸಾಂಸ್ಕೃತಿಕ ಅಧ:ಪತನಕ್ಕೆ ಕಾರಣವಾದ ಮಾಧ್ಯಮಗಳಲ್ಲಿನ ಅಶ್ಲೀಲತೆ, ಮಧ್ಯ ಮಾದಕ ವಸ್ತುಗಳಿಗೆ ಕಡಿವಾಣ ಹಾಕಬೇಕು ಎಂಬ ಹತ್ತು ಬೇಡಿಕೆಗಳ ಅಗ್ರಹ ಪತ್ರವನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗಿದೆ.

ಈ ನಿಯೋಗದಲ್ಲಿ ಸಂಘಟನೆಯ ರಾಜ್ಯ ಅಧ್ಯಕ್ಷರಾದ ಶರಣಪ್ಪ ಉದ್ಬಾಳ್, ರಾಜ್ಯ ಕಾರ್ಯದರ್ಶಿ ಸಿದ್ದಲಿಂಗ ಬಾಗೇವಾಡಿ, ರಾಜ್ಯ ಉಪಾಧ್ಯಕ್ಷ ಕೃಷ್ಣ, ರಾಜ್ಯ ಖಜಾಂಚಿ ಜಯಣ್ಣ, ರಾಜ್ಯ ಸಮಿತಿ ಸದಸ್ಯರಾದ ರಾಜಶೇಖರ, ಪೂರ್ಣಿಮ ಹಾಗೂ ಸದಸ್ಯರಾದ ಅರುಣಕುಮಾರ್ ಇದ್ದಾರೆ. ನಿಯೋಗದೊಂದಿಗೆ ಚರ್ಚೆ ನಡೆಸಿದ ಮುಖ್ಯಮಂತ್ರಿಗಳು, ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

ಕರ್ನಾಟಕದ ಚುನಾವಣಾ ಗ್ಯಾರಂಟಿಗಳು ಇತರ ರಾಜ್ಯಗಳಲ್ಲಿ ಪಕ್ಷಕ್ಕೆ ಮಾದರಿಯಾಗಬಹುದು: ಡಿಕೆ ಶಿವಕುಮಾರ್ಕರ್ನಾಟಕದ ಚುನಾವಣಾ ಗ್ಯಾರಂಟಿಗಳು ಇತರ ರಾಜ್ಯಗಳಲ್ಲಿ ಪಕ್ಷಕ್ಕೆ ಮಾದರಿಯಾಗಬಹುದು: ಡಿಕೆ ಶಿವಕುಮಾರ್

ಈ ಬಗ್ಗೆ “ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಜೇಷನ್ ಅಧ್ಯಕ್ಷ ಜಯಣ್ಣ ಅವರನ್ನೊಳಗೊಂಡ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂದು ಭೇಟಿಮಾಡಿ ಕೆಲವು ಪ್ರಮುಖ ಸಂಗತಿಗಳ ಕುರಿತು ಚರ್ಚಿಸಿದರು” ಎಂದು ಮುಖ್ಯಮಂತ್ರಿ ಅವರ ಅಧಿಕೃತ ಟ್ವಿಟರ್‌ ಪೇಜ್‌ ಟ್ವೀಟ್ ಮಾಡಿದೆ.

English summary

All India Democratic Youth Organisation (AIDYO) delegation appeals Chief Minister Siddaramaiah to extend Yuva Nidhi to all unemployed youth in karnataka. know more.

Story first published: Tuesday, June 27, 2023, 13:22 [IST]

Source link