Last Updated:
ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾ (AAI) 2026ನೇ ಸಾಲಿನ ನೇಮಕಾತಿ ಅಧಿಸೂಚನೆ ಪ್ರಕಟಿಸಿದ್ದು, ಮ್ಯಾನೇಜರ್ ಹಾಗೂ ಜೂನಿಯರ್ ಎಕ್ಸಿಕ್ಯೂಟಿವ್ ಸೇರಿ 389 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಬೆಂಗಳೂರು ಸೇರಿದಂತೆ ದೇಶದ ವಿವಿಧ ವಿಮಾನ ನಿಲ್ದಾಣಗಳಲ್ಲಿ ಉದ್ಯೋಗ ಅವಕಾಶ ಲಭ್ಯವಿದೆ.
ಬೆಂಗಳೂರು: ಕೇಂದ್ರ ಸರ್ಕಾರಿ ಉದ್ಯೋಗದ (Central Government Job) ನಿರೀಕ್ಷೆಯಲ್ಲಿರುವ ಯುವಜನತೆಗೆ ಇಲ್ಲೊಂದು ಭರ್ಜರಿ ಸಿಹಿಸುದ್ದಿ ಇದೆ. ಉತ್ತಮ ವೇತನದೊಂದಿಗೆ ಪ್ರತಿಷ್ಠಿತ ವಿಮಾನ ನಿಲ್ದಾಣಗಳಲ್ಲಿ ಕೆಲಸ ಮಾಡುವ ನಿಮ್ಮ ಕನಸು ನನಸಾಗುವ ಸಮಯ ಬಂದಿದೆ. ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾ (AAI) 2026ನೇ ಸಾಲಿನ ನೇಮಕಾತಿಗಾಗಿ ಬೃಹತ್ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಭಾರತೀಯ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಯಾದವರು ಬೆಂಗಳೂರು ಸೇರಿದಂತೆ ದೇಶದ ವಿವಿಧ ವಿಮಾನ ನಿಲ್ದಾಣಗಳು ಹಾಗೂ AAI ಕಚೇರಿಗಳಲ್ಲಿ ಸೇವೆ ಸಲ್ಲಿಸಲು ಇದೊಂದು ಅತ್ಯುತ್ತಮ ಅವಕಾಶವಾಗಿದೆ.
ಸಂಸ್ಥೆಯು ಮ್ಯಾನೇಜರ್ ಹಾಗೂ ಜೂನಿಯರ್ ಎಕ್ಸಿಕ್ಯೂಟಿವ್ ಸೇರಿದಂತೆ ಒಟ್ಟು 389 ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಗಳಿಂದ ಪದವಿ, ಸ್ನಾತಕೋತ್ತರ ಪದವಿ, ಪಿಜಿಡಿಎಂ, ಡಿಪ್ಲೊಮಾ, ಬಿ.ಇ/ಬಿ.ಟೆಕ್, ಸಿಎ, ಎಲ್.ಎಲ್.ಬಿ, ಎಂ.ಬಿ.ಎ ಅಥವಾ ಎಂ.ಸಿ.ಎ ವಿದ್ಯಾರ್ಹತೆಯನ್ನು ಹೊಂದಿರಬೇಕು. ಅಭ್ಯರ್ಥಿಗಳ ವಿದ್ಯಾರ್ಹತೆಯು ತಾವು ಅರ್ಜಿ ಸಲ್ಲಿಸುತ್ತಿರುವ ನಿರ್ದಿಷ್ಟ ಹುದ್ದೆಗೆ ನಿಗದಿಪಡಿಸಿರುವ ಅರ್ಹತೆಗಳಿಗೆ ಕಡ್ಡಾಯವಾಗಿ ಹೊಂದಿಕೆಯಾಗಬೇಕಿರುತ್ತದೆ.
ಅಭ್ಯರ್ಥಿಗಳ ವಯೋಮಿತಿಯನ್ನು ಗಮನಿಸುವುದಾದರೆ, ಸೆಪ್ಟೆಂಬರ್ 7, 2026ರ ಅನ್ವಯ ಗರಿಷ್ಠ 32 ವರ್ಷ ಮೀರಿರಬಾರದು. ಆದಾಗ್ಯೂ, ಸರ್ಕಾರದ ನಿಯಮಗಳ ಪ್ರಕಾರ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯವಿದ್ದು, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಅಂಗವಿಕಲ (PwD) ಅಭ್ಯರ್ಥಿಗಳಿಗೆ 10 ವರ್ಷಗಳ ವಿನಾಯಿತಿ ಇರಲಿದೆ. ಇನ್ನು ವೇತನದ ವಿಚಾರಕ್ಕೆ ಬಂದರೆ, ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗೆ ಅನುಗುಣವಾಗಿ ತಿಂಗಳಿಗೆ ₹40,000 ದಿಂದ ₹1,80,000 ವರೆಗೆ ಆಕರ್ಷಕ ವೇತನ ದೊರೆಯಲಿದೆ. ವಿಶೇಷವಾಗಿ ಕೆಲವು ಮ್ಯಾನೇಜರ್ ಹುದ್ದೆಗಳಿಗೆ ₹60,000 ದಿಂದ ₹1,80,000 ವರೆಗಿನ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
Bangalore [Bangalore],Bangalore,Karnataka














