Last Updated:
ಪಲ್ವಾಲ್ನಲ್ಲಿರುವ ಕೆಎಂಪಿ ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ನಿಂತಿದ್ದ ಟ್ರಕ್ಗೆ ಪಿಕಪ್ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಆರು ಭಕ್ತರು ಸಾವನ್ನಪ್ಪಿದ್ದಾರೆ. ಅಲ್ಲದೇ ಈ ಅಪಘಾತದಲ್ಲಿ ಅಪಘಾತದಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಹದಿನಾರು ಜನರು ಗಾಯಗೊಂಡಿದ್ದಾರೆ.
ಯಾತ್ರಾ ಸ್ಥಳದಿಂದ ವಾಪಾಸ್ ಆಗುತ್ತಿದ್ದ ಭಕ್ತರ ಬಾಳಲ್ಲಿ ದುರಂತ ಸಂಭವಿಸಿದೆ. ಹರಿಯಾಣದ (Haryana) ಪಲ್ವಾಲ್ನಲ್ಲಿರುವ ಕೆಎಂಪಿ ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘಾತ (Accident) ಸಂಭವಿಸಿದೆ. ಈ ಅಪಘಾತದಿಂದ ಆರು ಯಾತ್ರಿಕರು ಸಾವನ್ನಪ್ಪಿದ್ದಾರೆ ಮತ್ತು 16 ಮಂದಿ ಗಾಯಗೊಂಡಿದ್ದಾರೆ. ಈ ಪ್ರಮುಖ ಘಟನೆ ಇಂದು ಮುಂಜಾನೆ ಸಂಭವಿಸಿದೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ಯಾದವ್ಪುರ ಗ್ರಾಮದ ಬಳಿ ನಿಂತಿದ್ದ ಟ್ರಕ್ಗೆ ಪಿಕಪ್ ಟ್ರಕ್ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ.














