Last Updated:
ತಮಿಳು ಚಿತ್ರರಂಗದ ಹಿರಿಯ ನಟ ಶರತ್‌ಕುಮಾರ್ (Actor Sarathkumar) ಅವರಿಗೆ ಇದೀಗ ಕಾನೂನು ಸಂಕಷ್ಟ ಎದುರಾಗಿದೆ. 2 ಕೋಟಿ ರೂ. ವೈಯಕ್ತಿಕ ಸಾಲಕ್ಕೆ ಸಂಬಂಧಿಸಿದ ಚೆಕ್ ಬೌನ್ಸ್ ಪ್ರಕರಣವೊಂದು (Cheque Bounce Case) ಚೆನ್ನೈನ ಸೈದಾಪೇಟೆ ನ್ಯಾಯಾಲಯದ ಮೆಟ್ಟಿಲೇರಿದೆ.
ತಮಿಳು ಚಿತ್ರರಂಗದ ಹಿರಿಯ ನಟ ಶರತ್‌ಕುಮಾರ್ (Actor Sarathkumar) ಅವರಿಗೆ ಇದೀಗ ಕಾನೂನು ಸಂಕಷ್ಟ ಎದುರಾಗಿದೆ. 2 ಕೋಟಿ ರೂ. ವೈಯಕ್ತಿಕ ಸಾಲಕ್ಕೆ ಸಂಬಂಧಿಸಿದ ಚೆಕ್ ಬೌನ್ಸ್ ಪ್ರಕರಣವೊಂದು (Cheque Bounce Case) ಚೆನ್ನೈನ ಸೈದಾಪೇಟೆ ನ್ಯಾಯಾಲಯದ ಮೆಟ್ಟಿಲೇರಿದೆ. ಪ್ರಕರಣದ ವಿಚಾರಣೆ ನಡೆಸಿರುವ ನ್ಯಾಯಾಲಯವು ನಟ ಶರತ್‌ಕುಮಾರ್ ಅವರಿಗೆ ಸೆಪ್ಟೆಂಬರ್ 10ರಂದು ಖುದ್ದಾಗಿ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ. ಈ ಬೆಳವಣಿಗೆ ಇದೀಗ ತಮಿಳು ಚಿತ್ರರಂಗ ಹಾಗೂ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.














