Actor Anantnag: ‘ದಾದಾಸಾಹೇಬ್’ ಅನಂತ್‌ನಾಗ್‌ಗೆ ‘ಫಾಲ್ಕೆ ಪ್ರಶಸ್ತಿ’ಯ ಗರಿ! ರಾಷ್ಟ್ರಪತಿಗಳಿಂದ ಹಿರಿಯ ನಟನಿಗೆ ಗೌರವ ಪ್ರದಾನ | | ACTPnews

News18


Last Updated:

ಗುಜರಾತ್‌ನ ಏಕತಾ ನಗರದಲ್ಲಿ ನಡೆದ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅನಂತ್ ನಾಗ್ ಅವರಿಗೆ ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವಗಳಲ್ಲಿ ಒಂದಾದ ದಾದಾಸಾಹೇಬ್ ಫಾಲ್ಕೆ (Dadasaheb Phalke) ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

News18
News18

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ (Actor Anantnag) ಅವರ ಐದು ದಶಕಗಳಿಗೂ ಮೀರಿದ ಸುದೀರ್ಘ ಸಿನಿಪಯಣಕ್ಕೆ ಇಂದು ಮತ್ತೊಂದು ಐತಿಹಾಸಿಕ ಗೌರವ ದೊರೆತಿದೆ. ಗುಜರಾತ್‌ನ ಏಕತಾ ನಗರದಲ್ಲಿ ನಡೆದ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅನಂತ್ ನಾಗ್ ಅವರಿಗೆ ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವಗಳಲ್ಲಿ ಒಂದಾದ ದಾದಾಸಾಹೇಬ್ ಫಾಲ್ಕೆ (Dadasaheb Phalke) ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಅನಂತ್ ನಾಗ್‌ಗೆ ಫಾಲ್ಕೆ ಪ್ರಶಸ್ತಿ ಪ್ರದಾನ

ಭಾರತೀಯ ಚಿತ್ರರಂಗಕ್ಕೆ ಐದು ದಶಕಗಳಿಗೂ ಹೆಚ್ಚು ಕಾಲ ನೀಡಿದ ಕೊಡುಗೆಯನ್ನು ಪರಿಗಣಿಸಿ ಅನಂತ್ ನಾಗ್ ಅವರನ್ನು 2024ನೇ ಸಾಲಿನ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು. ಕೇಂದ್ರ ಸರ್ಕಾರದ ಪ್ರಕಟಣೆಯ ಪ್ರಕಾರ, ಅವರ ಸುದೀರ್ಘ ಹಾಗೂ ಮಹತ್ವದ ಸಿನಿಪಯಣವನ್ನು ಗುರುತಿಸಿ ಈ ಗೌರವ ನೀಡಲಾಗಿದೆ. ಇಂದು ನಡೆದ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಶಸ್ತಿ ಪ್ರದಾನ ಮಾಡಿದರು.

ಕನ್ನಡ ಚಿತ್ರರಂಗದ ಮೇರು ನಟನಿಗೆ ಈ ಗೌರವ ಸಿಕ್ಕಿರುವುದು ಅವರ ಅಭಿಮಾನಿಗಳಲ್ಲಿ ಸಂಭ್ರಮ ಮೂಡಿಸಿದೆ. ಐದು ದಶಕಗಳಿಗೂ ಹೆಚ್ಚಿನ ವೃತ್ತಿಜೀವನದಲ್ಲಿ ಅನಂತ್ ನಾಗ್ ಕನ್ನಡ ಮಾತ್ರವಲ್ಲದೆ ಹಲವು ಭಾರತೀಯ ಭಾಷೆಗಳ ಸಿನಿಮಾಗಳಲ್ಲೂ ನಟಿಸಿದ್ದಾರೆ. 300ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿರುವ ಅವರು ರಂಗಭೂಮಿಯಲ್ಲೂ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.

ಇದನ್ನೂ ಓದಿ: Adah Sharma: ರಾಮರಸ ಚಿತ್ರದ ಅದಾ ಶರ್ಮ ಲುಕ್ ಔಟ್, ದೇವಿ ರೂಪದಲ್ಲಿ ಪುನೀತ್ ಹೀರೋಯಿನ್

ಅನಂತ್ ನಾಗ್ ಅವರಿಗೆ ಫಾಲ್ಕೆ ಪ್ರಶಸ್ತಿ ದೊರೆತ ದಿನವೇ ಕನ್ನಡ ಚಿತ್ರರಂಗದ ಮತ್ತಷ್ಟು ಸಾಧಕರಿಗೂ ರಾಷ್ಟ್ರೀಯ ಮಟ್ಟದಲ್ಲಿ ಗೌರವ ಸಿಕ್ಕಿದೆ. 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ಸುವಂತ್ ಭಟ್ ನಿರ್ದೇಶನದ ಮಿಥ್ಯ ಅತ್ಯುತ್ತಮ ಕನ್ನಡ ಚಿತ್ರ ಪ್ರಶಸ್ತಿ ಪಡೆದಿದೆ. ಈ ಸಿನಿಮಾದ ಅಭಿನಯಕ್ಕಾಗಿ ಅತೀಶ್ ಶೆಟ್ಟಿ ಅತ್ಯುತ್ತಮ ಬಾಲ ಕಲಾವಿದ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ರೂಪಶ್ರೀ ವರ್ಕಾಡಿ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ ಪಡೆದಿದ್ದಾರೆ.

ಕರ್ನಾಟಕದ ಕರಾವಳಿ ಭಾಗದ ಭಾಷೆ ಮತ್ತು ಸಂಸ್ಕೃತಿಯನ್ನು ಪ್ರತಿಬಿಂಬಿಸುವ ತುಳು ಚಿತ್ರರಂಗಕ್ಕೂ ಈ ಬಾರಿ ರಾಷ್ಟ್ರೀಯ ಮಟ್ಟದಲ್ಲಿ ಗೌರವ ಸಿಕ್ಕಿದೆ. ಶಿವಧ್ವಜ್ ಶೆಟ್ಟಿ ನಿರ್ದೇಶನದ ಇಂಬು ಅತ್ಯುತ್ತಮ ತುಳು ಚಿತ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed