Last Updated:
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಮತ್ತೊಂದು ವಿಷ್ಯ ಏನೆಂದರೆ ನಟ ದಳಪತಿ ವಿಜಯ್ ತಮ್ಮ ರಾಜಕೀಯ ಪಕ್ಷವನ್ನು ಆರಂಭಿಸಿದ ಮಾದರಿಯಲ್ಲೇ ಅಲ್ಲು ಅರ್ಜುನ್ ಕೂಡ ಹೊಸ ರಾಜಕೀಯ ಪಕ್ಷ ಸ್ಥಾಪಿಸುವ ಆಲೋಚನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಐಕಾನ್ ಸ್ಟಾರ್ ಅಲ್ಲು ಅರ್ಜುನ್ (Allu Arjun) ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಎಂಬ ಸುದ್ದಿ ಕಳೆದ ಎರಡು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ಹರಿದಾಡಿ ಅಭಿಮಾನಿಗಳ ಗಮನ ಸೆಳೆದಿದೆ. ಪುಷ್ಪ 2 ಚಿತ್ರದ ಭರ್ಜರಿ ಯಶಸ್ಸಿನ ಬಳಿಕ ವೃತ್ತಿಜೀವನದ ಉತ್ತುಂಗದಲ್ಲಿರುವ ಅಲ್ಲು ಅರ್ಜುನ್ ಇದೀಗ ರಾಜಕೀಯಕ್ಕೆ ಕಾಲಿಡಲಿದ್ದಾರೆಯೇ ಎಂಬ ಪ್ರಶ್ನೆ ಎಲ್ಲೆಡೆ ಚರ್ಚೆಗೆ ಗ್ರಾಸವಾಗಿದೆ.
ಅಲ್ಲು ಅರ್ಜುನ್ ರಾಜಕೀಯ ಪ್ರವೇಶದ ಕುರಿತ ಚರ್ಚೆ ಶುರುವಾಗಲು ತೆಲುಗು ರಾಜಕೀಯ ವೆಬ್ಸೈಟ್ ಪ್ರಕಟಿಸಿದ ವರದಿಯೇ ಕಾರಣವಾಗಿದೆ. ಆ ವರದಿಯಲ್ಲಿ ನಟ ಶೀಘ್ರದಲ್ಲೇ ರಾಜಕೀಯ ಪ್ರವೇಶ ಮಾಡುವ ಸಾಧ್ಯತೆ ಇದೆ ಹಾಗೂ ಅದರ ಸಿದ್ಧತೆಗಳು ಈಗಾಗಲೇ ಆರಂಭವಾಗಿವೆ ಎಂದು ಹೇಳಲಾಗಿತ್ತು. ಈ ಸುದ್ದಿ ಕೆಲವೇ ಗಂಟೆಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಸಾವಿರಾರು ಅಭಿಮಾನಿಗಳ ನಡುವೆ ಚರ್ಚೆಗೆ ಕಾರಣವಾಯಿತು.
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಮತ್ತೊಂದು ವಿಷ್ಯ ಏನೆಂದರೆ ನಟ ದಳಪತಿ ವಿಜಯ್ ತಮ್ಮ ರಾಜಕೀಯ ಪಕ್ಷವನ್ನು ಆರಂಭಿಸಿದ ಮಾದರಿಯಲ್ಲೇ ಅಲ್ಲು ಅರ್ಜುನ್ ಕೂಡ ಹೊಸ ರಾಜಕೀಯ ಪಕ್ಷ ಸ್ಥಾಪಿಸುವ ಆಲೋಚನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಕೆಲವು ವರದಿಗಳ ಪ್ರಕಾರ, ಪುಷ್ಪ 2 ಚಿತ್ರದ ಬಿಡುಗಡೆ ಸಮಯದಲ್ಲಿ ತೆಲಂಗಾಣ ಸರ್ಕಾರದೊಂದಿಗೆ ಉಂಟಾದ ವಿವಾದಗಳ ಹಿನ್ನೆಲೆಯಲ್ಲಿ ಅಲ್ಲು ಅರ್ಜುನ್ ತೆಲಂಗಾಣ ರಾಜಕೀಯದಲ್ಲಿ ಸಕ್ರಿಯರಾಗುವ ಸಾಧ್ಯತೆ ಇದೆ ಎಂಬ ಮಾತು ಕೇಳಿಬರುತ್ತಿದೆ.
ವಿಶೇಷವಾಗಿ ಮುಖ್ಯಮಂತ್ರಿ ರೇವಂತ್ ರೆಡ್ಡಿ ನೇತೃತ್ವದ ಸರ್ಕಾರದ ವಿರುದ್ಧ ರಾಜಕೀಯ ಅಂಗಳಕ್ಕೆ ಇಳಿಯಬಹುದು ಎಂಬ ವಾದವೂ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಹೈದರಾಬಾದ್, ನಿಜಾಮಾಬಾದ್, ಖಮ್ಮಂ ಸೇರಿದಂತೆ ಹಲವು ಪ್ರದೇಶಗಳಲ್ಲಿ ಅವರಿಗೆ ದೊಡ್ಡ ಅಭಿಮಾನಿ ಬಳಗವಿರುವುದರಿಂದ ಅದು ರಾಜಕೀಯವಾಗಿ ಅನುಕೂಲವಾಗಬಹುದು ಎಂದು ಕೆಲವರು ವಿಶ್ಲೇಷಿಸುತ್ತಿದ್ದಾರೆ.
ಆಂಧ್ರಪ್ರದೇಶದಲ್ಲಿ ಈಗಾಗಲೇ ನಟ ಹಾಗೂ ರಾಜಕಾರಣಿ ಪವನ್ ಕಲ್ಯಾಣ್ ಉಪಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದೇ ಕಾರಣದಿಂದ ಅಲ್ಲು ಅರ್ಜುನ್ ರಾಜಕೀಯ ಪ್ರವೇಶದ ಸಾಧ್ಯತೆ ಬಗ್ಗೆ ಹಲವರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.
ಇನ್ನು ಪುಷ್ಪ 2 ಚಿತ್ರದ ಯಶಸ್ಸಿನ ಬಳಿಕ ಹಲವು ದೊಡ್ಡ ಸಿನಿಮಾಗಳಲ್ಲಿ ಅಲ್ಲು ಅರ್ಜುನ್ ಬ್ಯುಸಿಯಾಗಿದ್ದು, ಸದ್ಯ ಅವರ ಗಮನ ಚಿತ್ರರಂಗದ ಮೇಲೆಯೇ ಇದೆ ಎನ್ನುವ ಮಾಹಿತಿಯೂ ಕೇಳಿಬರುತ್ತಿದೆ. ಹೀಗಾಗಿ ರಾಜಕೀಯ ಪ್ರವೇಶದ ಬಗ್ಗೆ ನಿಖರ ಮಾಹಿತಿ ತಿಳಿಯಲು ಅಧಿಕೃತ ಘೋಷಣೆಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ.
Bangalore [Bangalore],Bangalore,Karnataka














