Last Updated:
ಖ್ಯಾತ ನಟಿ ಹಾಗೂ ಮಾಡೆಲ್ ಲೋಪಮುದ್ರ ರಾವತ್ (Lopamudra Rawat) ಮನೆಯಲ್ಲಿ ನಡೆದ ಭಾರೀ ಕಳ್ಳತನ ಪ್ರಕರಣಕ್ಕೆ ಪೊಲೀಸರು ಕೊನೆಗೂ ಬ್ರೇಕ್ ಹಾಕಿದ್ದಾರೆ.
ಖ್ಯಾತ ನಟಿ ಹಾಗೂ ಮಾಡೆಲ್ ಲೋಪಮುದ್ರ ರಾವತ್ (Lopamudra Rawat) ಮನೆಯಲ್ಲಿ ನಡೆದ ಭಾರೀ ಕಳ್ಳತನ ಪ್ರಕರಣಕ್ಕೆ ಪೊಲೀಸರು ಕೊನೆಗೂ ಬ್ರೇಕ್ ಹಾಕಿದ್ದಾರೆ. ನಟಿಯ ಮನೆಯಿಂದ ಸುಮಾರು 1 ಕೋಟಿ ರೂಪಾಯಿ ಮೌಲ್ಯದ ಬೆಲೆಬಾಳುವ ವಸ್ತುಗಳನ್ನು ಕಳವು ಮಾಡಿದ್ದ ಆರೋಪದ ಮೇಲೆ ಬಿಹಾರ ಮೂಲದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಿನಿಮಾ ನಟಿಯ ಮನೆಗೆ ನುಗ್ಗಿ, ಯಾರಿಗೂ ಅನುಮಾನ ಬಾರದಂತೆ ಕಳ್ಳತನ ಮಾಡಿ ಪರಾರಿಯಾಗಿದ್ದ ಆರೋಪಿ ಕೊನೆಗೆ ಪೊಲೀಸರ ತನಿಖೆಯಿಂದ ಸಿಕ್ಕಿಬಿದ್ದಿದ್ದಾನೆ.














