Last Updated:
ರಾಮಾಯಣ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಸೀತೆಯ ಪಾತ್ರಕ್ಕೂ ವಿಶೇಷ ಮಹತ್ವವಿದೆ. ಈ ಪಾತ್ರದಲ್ಲಿ ಸಾಯಿ ಪಲ್ಲವಿ ಅಭಿನಯಿಸುತ್ತಿರುವುದು ಈಗಾಗಲೇ ಅಧಿಕೃತವಾಗಿದೆ. ಆದರೆ, ಈ ಪಾತ್ರಕ್ಕಾಗಿ ಕನ್ನಡದ ನಟಿ ಶ್ರೀನಿಧಿ ಶೆಟ್ಟಿಯೂ ಆಡಿಷನ್ ನೀಡಿದ್ದರು ಎಂಬ ವಿಚಾರ ಈಗ ಮತ್ತೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಸದ್ಯ ಭಾರತೀಯ ಚಿತ್ರರಂಗದಲ್ಲಿ ಅತೀ ಹೆಚ್ಚು ಚರ್ಚೆಯಾಗುತ್ತಿರುವ ಸಿನಿಮಾ ಯಾವುದೆಂದರೆ ಅದು ರಾಮಾಯಣ (Ramayana). ನಿರ್ದೇಶಕ ನಿತೇಶ್ ತಿವಾರಿ (Nitesh Tiwari) ಮಹತ್ವಾಕಾಂಕ್ಷೆಯ ಈ ಚಿತ್ರದಲ್ಲಿ ರಣಬೀರ್ ಕಪೂರ್ (Ranbir Kapoor) ರಾಮನಾಗಿ, ಯಶ್ (Yash) ರಾವಣನಾಗಿ ಮತ್ತು ಸಾಯಿ ಪಲ್ಲವಿ ಸೀತೆಯಾಗಿ ಕಾಣಿಸಿಕೊಳ್ಳುತ್ತಿರುವುದು ಈಗಾಗಲೇ ಭಾರೀ ಕುತೂಹಲ ಮೂಡಿಸಿದೆ. ಟ್ರೈಲರ್ ಬಿಡುಗಡೆಯಾದ ಬಳಿಕ ಚಿತ್ರದ ಪಾತ್ರಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆ, ಟೀಕೆ ಹಾಗೂ ಚರ್ಚೆಗಳು ಮುಂದುವರಿದಿವೆ. ಈ ನಡುವೆ ಸೀತೆಯ ಪಾತ್ರಕ್ಕೆ ಸಾಯಿ ಪಲ್ಲವಿ ಆಯ್ಕೆಯಾಗುವ ಮೊದಲು ಕನ್ನಡದ ನಟಿ ಶ್ರೀನಿಧಿ ಶೆಟ್ಟಿ ಆಡಿಷನ್ ನೀಡಿದ್ದರು ಎಂಬ ಮಾಹಿತಿ ಮತ್ತೆ ಸುದ್ದಿಯಲ್ಲಿದೆ.
ರಾಮಾಯಣ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಸೀತೆಯ ಪಾತ್ರಕ್ಕೂ ವಿಶೇಷ ಮಹತ್ವವಿದೆ. ಈ ಪಾತ್ರದಲ್ಲಿ ಸಾಯಿ ಪಲ್ಲವಿ ಅಭಿನಯಿಸುತ್ತಿರುವುದು ಈಗಾಗಲೇ ಅಧಿಕೃತವಾಗಿದೆ. ಆದರೆ, ಈ ಪಾತ್ರಕ್ಕಾಗಿ ಕನ್ನಡದ ನಟಿ ಶ್ರೀನಿಧಿ ಶೆಟ್ಟಿಯೂ ಆಡಿಷನ್ ನೀಡಿದ್ದರು ಎಂಬ ವಿಚಾರ ಈಗ ಮತ್ತೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಈ ವಿಷಯವನ್ನು ಶ್ರೀನಿಧಿ ಶೆಟ್ಟಿ ಈ ಹಿಂದೆ ಸಂದರ್ಶನವೊಂದರಲ್ಲಿ ಹಂಚಿಕೊಂಡಿದ್ದರು. ರಾಮಾಯಣ ಚಿತ್ರದ ಸೀತೆಯ ಪಾತ್ರಕ್ಕಾಗಿ ತಾವು ಆಡಿಷನ್ ನೀಡಿದ್ದಾಗಿ ಹೇಳಿಕೊಂಡಿದ್ದರು. ಆದರೆ ಅಂತಿಮವಾಗಿ ಆ ಪಾತ್ರ ಅವರಿಗೆ ಸಿಗದೇ, ಸಾಯಿ ಪಲ್ಲವಿ ಆಯ್ಕೆಯಾಗಿದ್ದರು.
ಕೆಜಿಎಫ್ ಚಿತ್ರದ ಮೂಲಕ ದೇಶಾದ್ಯಂತ ಜನಪ್ರಿಯತೆ ಗಳಿಸಿರುವ ಶ್ರೀನಿಧಿ ಶೆಟ್ಟಿ ತಮ್ಮ ಸೌಂದರ್ಯ ಮತ್ತು ಅಭಿನಯದಿಂದ ಈಗಾಗಲೇ ಪ್ರೇಕ್ಷಕರ ಮೆಚ್ಚುಗೆ ಪಡೆದಿದ್ದಾರೆ. ಹಾಗೆಯೇ ನಟಿ ಶ್ರೀನಿಧಿ ಶೆಟ್ಟಿ ಸೀತೆಯ ಪಾತ್ರಕ್ಕೂ ಹೊಂದಿಕೆಯಾಗುತ್ತಿತ್ತು ಎಂಬ ಅಭಿಪ್ರಾಯವನ್ನು ಅಭಿಮಾನಿಗಳು ವ್ಯಕ್ತಪಡಿಸುತ್ತಿದ್ದಾರೆ.
ರಾಮಾಯಣ ಚಿತ್ರದ ಟ್ರೈಲರ್ ಬಿಡುಗಡೆಯಾದ ಬಳಿಕ ಸಾಯಿ ಪಲ್ಲವಿ ಸೀತೆಯ ಪಾತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಇನ್ನೊಂದೆಡೆ, ಕೆಲವರು ಅವರ ಲುಕ್ ಬಗ್ಗೆ ಭಿನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಿಶೇಷವಾಗಿ ಅವರ ಗುಂಗುರು ಕೂದಲು ಮತ್ತು ಪಾತ್ರದ ವಿನ್ಯಾಸದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗಳು ನಡೆಯುತ್ತಿವೆ.
ಚಿತ್ರದಲ್ಲಿ ರಣಬೀರ್ ಕಪೂರ್ ರಾಮನಾಗಿ, ಯಶ್ ರಾವಣನಾಗಿ, ಸಾಯಿ ಪಲ್ಲವಿ ಸೀತೆಯಾಗಿ, ರಕುಲ್ ಪ್ರೀತ್ ಸಿಂಗ್ ಶೂರ್ಪಣಖಿಯಾಗಿ ಹಾಗೂ ಸನ್ನಿ ಡಿಯೋಲ್ ಹನುಮಂತನಾಗಿ ಅಭಿನಯಿಸುತ್ತಿದ್ದಾರೆ. ಸಂಗೀತವನ್ನು ಆಸ್ಕರ್ ಪ್ರಶಸ್ತಿ ವಿಜೇತ ಎ.ಆರ್. ರೆಹಮಾನ್ ಮತ್ತು ಹಾನ್ಸ್ ಜಿಮ್ಮರ್ ನೀಡಿದ್ದಾರೆ. ಚಿತ್ರವನ್ನು ದಂಗಲ್ ಖ್ಯಾತಿಯ ನಿತೇಶ್ ತಿವಾರಿ ನಿರ್ದೇಶಿಸುತ್ತಿದ್ದಾರೆ.
Bangalore [Bangalore],Bangalore,Karnataka














