Last Updated:
ಜನಪ್ರಿಯ ನಟಿ ಕಾಶ್ಮೀರಾ ಇರಾನಿ (Kashmira Irani) ತಮ್ಮ ಅಭಿಮಾನಿಗಳೊಂದಿಗೆ ಸಿಹಿ ಸುದ್ದಿಯೊಂದನ್ನು ಹಂಚಿಕೊಂಡಿದ್ದಾರೆ. 40ನೇ ವಯಸ್ಸಿನಲ್ಲಿ ತಾಯಿಯಾಗುವ ಸಂಭ್ರಮದಲ್ಲಿರುವ ನಟಿ, ಶೀಘ್ರದಲ್ಲೇ ತಮ್ಮ ಮೊದಲ ಮಗುವನ್ನು ಸ್ವಾಗತಿಸಲಿದ್ದಾರೆ.
ಕಿರುತೆರೆ ಲೋಕದ ಜನಪ್ರಿಯ ನಟಿ ಕಾಶ್ಮೀರಾ ಇರಾನಿ (Kashmira Irani) ತಮ್ಮ ಅಭಿಮಾನಿಗಳೊಂದಿಗೆ ಸಿಹಿ ಸುದ್ದಿಯೊಂದನ್ನು ಹಂಚಿಕೊಂಡಿದ್ದಾರೆ. 40ನೇ ವಯಸ್ಸಿನಲ್ಲಿ ತಾಯಿಯಾಗುವ ಸಂಭ್ರಮದಲ್ಲಿರುವ ನಟಿ, ಶೀಘ್ರದಲ್ಲೇ ತಮ್ಮ ಮೊದಲ ಮಗುವನ್ನು ಸ್ವಾಗತಿಸಲಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ (Social Media) ಹಂಚಿಕೊಂಡಿರುವ ವಿಶೇಷ ಪೋಸ್ಟ್ ಇದೀಗ ಅಭಿಮಾನಿಗಳ ಗಮನ ಸೆಳೆಯುತ್ತಿದ್ದು, ಸ್ನೇಹಿತರು ಹಾಗೂ ಸಹನಟರಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.














