Last Updated:
ಮಹಿಳಾ ಆರೋಗ್ಯದ ಬಗ್ಗೆ ನಡೆದ ಸಭೆಯಲ್ಲಿ ಭಾಗಿಯಾಗಿದ್ದ ನಟಿ ರಮ್ಯಾ ಅವರು, ಕಾವೇರಿ ನದಿ ನೀರಿನ ವಿಚಾರಕ್ಕೆ ಸಂಬಂಧಪಟ್ಟ ಪ್ರತಿಕ್ರಿಯೆ ನೀಡಿದ್ರು.
ಬೆಂಗಳೂರು: ತಮಿಳುನಾಡಿಗೆ (Tamil Nadu) ಕಾವೇರಿ (Cauvery River) ಹರಿಸಬೇಕು ಅನ್ನೋ ಆದೇಶ ಹೊರಬಿದ್ದ ಬೆನ್ನಲ್ಲೇ ರೈತರು (Farmer) ಅಕ್ಷರಶಃ ಕೆರಳಿ ಕೆಂಡವಾಗಿದ್ದರು. ಊರೂರಲ್ಲೂ ಹೋರಾಟ ಶುರು ಮಾಡಿದ್ರು. ಇನ್ನೊಂದೆಡೆ ಕರ್ನಾಟಕ ಬಂದ್‌ಗೂ (Karnataka Bandh) ಕರೆ ನೀಡಲಾಗಿದೆ. ಜೊತೆಗೆ ಸರ್ಕಾರ ಕೂಡ ಕಾನೂನು ಹೋರಾಟದ ಹಾದಿ ಹಿಡಿದಿದೆ. ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಕಾವೇರಿ ಕಿಚ್ಚು ಜೋರಾಗಿತ್ತು. ಮಂಡ್ಯ, ಬೆಂಗಳೂರು (Bengaluru) ಸೇರಿದಂತೆ ರೈತರು, ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ರು. CWRC ಆದೇಶದ ವಿರುದ್ಧ ಆಕ್ರೋಶ ಹೊರಹಾಕಿದ್ರು. ಇದೀಗ ಕಾವೇರಿ ನದಿ ನೀರಿನ ವಿಚಾರವಾಗಿ ನಟಿ ರಮ್ಯಾ ಅವರು ರಿಯಾಕ್ಟ್ ಮಾಡಿದ್ದಾರೆ.
ಇನ್ನು, ರಾಜ್ಯ ಸರ್ಕಾರ ಋತುತಾರೆ ಎಂಬ ಯೋಜನೆಯನ್ನು ಜಾರಿ ತಂದಿದ್ದು, ಈ ಯೋಜನೆಗೆ ನಟಿ ರಮ್ಯಾ ಅವರು ಅಂಬಾಸಿಡರ್ ಆಗಿ ನೇಮಕವಾಗಿದ್ದಾರೆ. ಈ ಕಾರ್ಯಕ್ರಮದಲ್ಲಿ ಮಾತನಾಡಿರುವ ನಟಿ ರಮ್ಯಾ, ಬೇರೆ ದೇಶಗಳಿಗೆ ಹೋಲಿಸಿದ್ರೆ ಭಾರತದಲ್ಲಿ ಮೆನೋಪಾಸ್ ಬೇಗ ಕಾಣಿಸಿಕೊಳ್ಳುತ್ತೆ. ಸಿಟಿಯಲ್ಲಿ ಅತಿ ಹೆಚ್ಚಿನ ಮಹಿಳೆಯರು ಮೆನೋಪಾಸ್ ಸಮಯದಲ್ಲಿ ಸಮಸ್ಯೆಯಿಂದ ಬಳಲುತ್ತಾರೆ. ಯಾವೆಲ್ಲಾ ಸಮಸ್ಯೆಗಳು ಕಾಣಿಸಿಕೊಳ್ಳುತ್ತೆ. ಟ್ರೀಟ್‌ಮೆಂಟ್ ಬಗ್ಗೆ ಸಿಟಿ ಭಾಗದವರಿಗೆ ಹೆಚ್ಚಾಗಿ ಗೊತ್ತಿಲ್ಲ, ಗ್ರಾಮೀಣ ಭಾಗದವರಿಗೆ ಇದರ ಬಗ್ಗೆ ಮಾಹಿತಿ ಅತಿ ಕಡಿಮೆ ಇದೆ. ಹೀಗಾಗಿ ಇದರ ಬಗ್ಗೆ ಗೃಹಾರೋಗ್ಯ ಪುಸ್ತಕದಲ್ಲಿ ಸೇರಿಸಿ ಅಂತ ಮನವಿ ಇಟ್ಟುಕೊಂಡು ಬಂದ್ವಿ, ಆದ್ರೆ ಈಗ ನನ್ನನ್ನೇ ಬ್ರ್ಯಾಂಡ್ ಅಂಬಾಸಿಡರ್ ಮಾಡಿದ್ದಾರೆ. ಖುಷಿ ಇದೆ ಎಂದು ಹೇಳಿದರು.
(ವರದಿ: ಹಂಸ ಶ್ಯಾಮಲ, ನ್ಯೂಸ್18 ಕನ್ನಡ, ಬೆಂಗಳೂರು)
Bangalore,Karnataka














