Last Updated:
ವಿಜಯಲಕ್ಷ್ಮಿ ಕನ್ನಡ ಚಿತ್ರರಂಗದಲ್ಲಿ ಹಲವು ಯಶಸ್ವಿ ಸಿನಿಮಾಗಳ ಮೂಲಕ ಜನಪ್ರಿಯತೆ ಗಳಿಸಿದ್ದರು. ವಿಶೇಷವಾಗಿ ನಾಗಮಂಡಲ ಚಿತ್ರದ ಮೂಲಕ ಅವರು ಮನೆಮಾತಾಗಿದ್ದರು.
ತಮ್ಮ ಸಹಜ ಸೌಂದರ್ಯ, ಸರಳ ಅಭಿನಯದ ಮೂಲಕ ಕನ್ನಡ ಸಿನಿಪ್ರೇಕ್ಷಕರ ಮನಗೆದ್ದ ನಟಿ ವಿಜಯಲಕ್ಷ್ಮಿ (Actress Vijayalakshmi), ಒಂದು ಕಾಲದಲ್ಲಿ ಸ್ಯಾಂಡಲ್ವುಡ್ನ (Sandalwood) ಬಹುಬೇಡಿಕೆಯ ನಟಿಯರಲ್ಲಿ ಒಬ್ಬರಾಗಿದ್ದರು. ಕನ್ನಡ ಮಾತ್ರವಲ್ಲದೆ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿಯೂ ತಮ್ಮದೇ ಆದ ಛಾಪು ಮೂಡಿಸಿರುವ ನಟಿ ವಿಜಯಲಕ್ಷ್ಮಿ, ಕಳೆದ ಕೆಲವು ವರ್ಷಗಳಿಂದ ಚಿತ್ರರಂಗದಿಂದ ದೂರ ಉಳಿದಿದ್ದಾರೆ. ಆದರೆ ಸಾಮಾಜಿಕ ಜಾಲತಾಣಗಳ (Social Media) ಮೂಲಕ ಸುದ್ದಿಯಲ್ಲಿರುವ ವಿಜಯಲಕ್ಷ್ಮಿ ಇದೀಗ ಮತ್ತೊಮ್ಮೆ ತಮ್ಮ ಜೀವನದ ನೋವಿನ ಕಥೆಯನ್ನು ಹಂಚಿಕೊಂಡಿದ್ದಾರೆ.
ವಿಜಯಲಕ್ಷ್ಮಿ ಕನ್ನಡ ಚಿತ್ರರಂಗದಲ್ಲಿ ಹಲವು ಯಶಸ್ವಿ ಸಿನಿಮಾಗಳ ಮೂಲಕ ಜನಪ್ರಿಯತೆ ಗಳಿಸಿದ್ದರು. ವಿಶೇಷವಾಗಿ ನಾಗಮಂಡಲ ಚಿತ್ರದ ಮೂಲಕ ಅವರು ಮನೆಮಾತಾಗಿದ್ದರು. ತಮ್ಮ ಅಭಿನಯದ ಮೂಲಕ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾಗಿದ್ದರು. ಕನ್ನಡದ ಖ್ಯಾತ ನಟರಾದ ವಿಷ್ಣುವರ್ಧನ್, ಜಗ್ಗೇಶ್, ರಾಮ್ ಕುಮಾರ್ ಸೇರಿದಂತೆ ಅನೇಕ ಪ್ರಮುಖ ಕಲಾವಿದರೊಂದಿಗೆ ತೆರೆ ಹಂಚಿಕೊಂಡು ಯಶಸ್ವಿ ನಾಯಕಿಯಾಗಿ ಗುರುತಿಸಿಕೊಂಡಿದ್ದರು.
ಕಳೆದ ಕೆಲವು ವರ್ಷಗಳಿಂದ ವಿಜಯಲಕ್ಷ್ಮಿ ಚಿತ್ರರಂಗದಲ್ಲಿ ಹೆಚ್ಚು ಕಾಣಿಸಿಕೊಂಡಿಲ್ಲ. ಸಿನಿಮಾಗಳ ಅವಕಾಶಗಳು ಕಡಿಮೆಯಾಗುತ್ತಿದ್ದಂತೆ ಅವರು ಸಾರ್ವಜನಿಕ ಜೀವನದಿಂದಲೂ ಸ್ವಲ್ಪ ದೂರ ಉಳಿದಿದ್ದರು. ಆದಾಗ್ಯೂ, ತಮ್ಮ ಜೀವನದಲ್ಲಿ ನಡೆಯುತ್ತಿರುವ ಘಟನೆಗಳು ಹಾಗೂ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸಾಮಾಜಿಕ ಜಾಲತಾಣಗಳ ಮೂಲಕ ಆಗಾಗ್ಗೆ ಮಾತನಾಡುತ್ತಾ ಸುದ್ದಿಯಾಗುತ್ತಿದ್ದರು.
ಈ ವೇಳೆ ಮಾತನಾಡಿದ ವಿಜಯಲಕ್ಷ್ಮಿ, ತಮ್ಮ ಜೀವನದಲ್ಲಿ ಎದುರಿಸಿರುವ ಕಷ್ಟಗಳು ಮತ್ತು ನೋವುಗಳ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ . ದೇವರಿಗೆ ನನ್ನನ್ನು ಕಂಡ್ರೆ ತುಂಬಾ ಇಷ್ಟವಿರಬೇಕು. ಅದಕ್ಕಾಗಿಯೇ ಇಷ್ಟೆಲ್ಲಾ ಕಷ್ಟಗಳ ನಡುವೆಯೂ ನನ್ನನ್ನು ಜೀವಂತವಾಗಿ ಇಟ್ಟಿದ್ದಾರೆ ಎಂದು ಹೇಳಿದ್ದಾರೆ. ಹಾಗೆಯೇ ನಾನು ಈಗಾಗಲೇ ಸತ್ತ ಶವದಂತಾಗಿದ್ದೇನೆ ನಟಿ ಹೇಳಿದ್ದಾರೆ.
ಅಕ್ಕನ ಆರೋಗ್ಯದ ಬಗ್ಗೆ ಮಾತನಾಡುವಾಗಲೂ ವಿಜಯಲಕ್ಷ್ಮಿ ಭಾವುಕರಾಗಿದ್ದು, ಕುಟುಂಬದ ಸದಸ್ಯರ ಬಗ್ಗೆ ಇರುವ ಕಾಳಜಿ ಮತ್ತು ಆತಂಕವನ್ನು ವ್ಯಕ್ತಪಡಿಸಿದ್ದಾರೆ. ಕುಟುಂಬದ ಬೆಂಬಲವೇ ತಮ್ಮ ಜೀವನದ ಪ್ರಮುಖ ಶಕ್ತಿಯಾಗಿದೆ ಎಂದು ವಿಜಯಲಕ್ಷ್ಮಿ ಹೇಳಿದ್ದಾರೆ.
ಹಾಗೆಯೆ ಒಂದು ಕಾಲದಲ್ಲಿ ಬೆಳ್ಳಿತೆರೆಯಲ್ಲಿ ಮಿಂಚಿದ್ದ ಈ ಪ್ರತಿಭಾವಂತ ನಟಿ ಮತ್ತೆ ಸಿನಿಮಾಗಳ ಮೂಲಕ ಪ್ರೇಕ್ಷಕರ ಮುಂದೆ ಬರಲಿ ಎಂಬ ಆಶಯವನ್ನು ಅನೇಕ ಅಭಿಮಾನಿಗಳು ವ್ಯಕ್ತಪಡಿಸಿದ್ದಾರೆ.
ವೃತ್ತಿಜೀವನದಲ್ಲಿ ಯಶಸ್ಸು ಕಂಡಿದ್ದರೂ ವೈಯಕ್ತಿಕ ಜೀವನದಲ್ಲಿ ಅನೇಕ ಸವಾಲುಗಳನ್ನು ಎದುರಿಸುತ್ತಿರುವ ವಿಜಯಲಕ್ಷ್ಮಿ, ತಮ್ಮ ನೋವುಗಳನ್ನು ಮುಕ್ತವಾಗಿ ಹಂಚಿಕೊಳ್ಳುವ ಮೂಲಕ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ.
Bangalore [Bangalore],Bangalore,Karnataka













