Last Updated:
ಫುಕೆಟ್ ನಿಂದ ದೆಹಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ದೊಡ್ಡ ದುರಂತ ಸಂಭವಿಸಿದೆ. ವಿಮಾನ ಇದ್ದಕ್ಕಿದ್ದಂತೆ 300 ಅಡಿಗಳಷ್ಟು ಪ್ರಕ್ಷುಬ್ಧ ಸ್ಥಿತಿಯಲ್ಲಿ ಕುಸಿದಿದೆ. ಇದನ್ನು ಕಂಡು ಪ್ರಯಾಣಿಕರು ಗಾಬರಿಯಾಗಿದ್ದು, ಕೆಲವರಿಗೆ ಆರೋಗ್ಯ ಸಮಸ್ಯೆ ಎದುರಾಗಿದೆ.
ಆಗಸ್ಟ್ 4ರಂದು ಫುಕೆಟ್‌ನಿಂದ ದೆಹಲಿಗೆ ಹಾರುತ್ತಿದ್ದ ಏರ್ ಇಂಡಿಯಾ (Air India) ವಿಮಾನ AI2379 ತೀವ್ರ ಪ್ರಕ್ಷುಬ್ಧತೆಯನ್ನು ಎದುರಿಸಿತ್ತು. ಗಾಳಿಯ ಮಧ್ಯದಲ್ಲಿ ವಿಮಾನ ಇದ್ದಕ್ಕಿದ್ದಂತೆ ಸುಮಾರು 300 ಅಡಿ ಕೆಳಗೆ ದಿಢೀರ್ ಇಳಿದಿದೆ. ಈ ಘಟನೆಯಿಂದ ಪ್ರಯಾಣಿಕರು ಮತ್ತು ಸಿಬ್ಬಂದಿ ಆತಂಕಗೊಂಡಿದ್ದು, ಅಲ್ಲದೇ ಅವರು ಆರೋಗ್ಯ ಸಮಸ್ಯೆಗೂ (Health Issue) ತುತ್ತಾಗಿದ್ದರು. ಈ ವಿಮಾನ ದೆಹಲಿಯಲ್ಲಿ ಇಳಿದ ನಂತರ ಪೈಲಟ್‌ನ ಡೋಪ್ ಪರೀಕ್ಷೆ ನಡೆಸಲಾಯಿತು. ಆದರೆ ಇದು ಪ್ರಯಾಣಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ.














