Last Updated:
ರಾಕಾ ಸಿನಿಮಾದಲ್ಲಿ ತಂದೆ ಮತ್ತು ಇಬ್ಬರು ಮಕ್ಕಳ ಕಥೆಯನ್ನು ಹೇಳಲಾಗುತ್ತದೆ ಎನ್ನಲಾಗಿದೆ. ಈ ಮೂರು ಪ್ರಮುಖ ಪಾತ್ರಗಳಲ್ಲೂ ಅಲ್ಲು ಅರ್ಜುನ್ ಅವರೇ ಕಾಣಿಸಿಕೊಳ್ಳಲಿದ್ದಾರೆ ಎಂಬ ವರದಿಗಳು ಕೇಳಿಬರುತ್ತಿವೆ.
ಅಲ್ಲು ಅರ್ಜುನ್ (Allu Arjun) ನಟನೆಯ ರಾಕಾ (Raaka) ಸಿನಿಮಾದ ಚಿತ್ರೀಕರಣ ಆರಂಭವಾಗಿದ್ದು, ಚಿತ್ರತಂಡದಿಂದ ಒಂದೊಂದೇ ಕುತೂಹಲಕಾರಿ ಮಾಹಿತಿ ಹೊರಬರುತ್ತಿದೆ. ಈಗಾಗಲೇ ವಿಭಿನ್ನ ಕಥಾಹಂದರ ಮತ್ತು ಫ್ಯಾಂಟಸಿ ಅಂಶಗಳಿಂದ ಗಮನ ಸೆಳೆದಿರುವ ಈ ಸಿನಿಮಾ, ಅಲ್ಲು ಅರ್ಜುನ್ ವೃತ್ತಿ ಜೀವನದಲ್ಲೇ ಹೊಸ ಪ್ರಯೋಗವಾಗುವ ಸಾಧ್ಯತೆ ಇದೆ. ಇದೀಗ ಸಿನಿಮಾದಲ್ಲಿ ಒಂದಲ್ಲ, ಮೂರು ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಅಭಿಮಾನಿಗಳ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ.














