Anna Bhagya: ಅನ್ನಭಾಗ್ಯ ಯೋಜನೆಯ ಹಣ ಖಾತೆಗೆ ಬಂದಿದೆಯಾ? 5 ನಿಮಿಷದಲ್ಲಿ ನೀವೆ ಪರಿಶೀಲಿಸಬಹುದು | Anna Bhagya: Check Anna Bhagya Scheme Payment In Online

Karnataka

oi-Naveen Kumar N

|

Google Oneindia Kannada News

ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ 10 ಕೆ.ಜಿ. ಅಕ್ಕಿ ಕೊಡುವುದಾಗಿ ಕಾಂಗ್ರೆಸ್ ಭರವಸೆ ನೀಡಿತ್ತು. ಆದರೆ ಅಕ್ಕಿಯ ಪೂರೈಕೆ ಇಲ್ಲದ ಕಾರಣ 5 ಕೆ.ಜಿ. ಮತ್ತು ಉಳಿದ 5 ಕೆ.ಜಿ. ಅಕ್ಕಿಯ ಬದಲಾಗಿ ಹಣ ಹಾಕಲು ನಿರ್ಧರಿಸಿದ್ದು, ಅದರಂತೆ ಜುಲೈ 10ರಂದು ಹಣ ವರ್ಗಾವಣೆಗೆ ಸಿದ್ದರಾಮಯ್ಯ ಚಾಲನೆ ನೀಡಿದ್ದರು. ಅದರಂತೆ ಪ್ರತಿ ಕೆ.ಜಿ. ಅಕ್ಕಿಗೆ 34 ರೂಪಾಯಿಗಳಂತೆ 170 ರೂಪಾಯಿ ನೀಡಲಾಗುತ್ತಿದೆ.

ಮೊದಲ ಹಂತದಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಮೈಸೂರು, ಬಾಗಲಕೋಟೆ ಜಿಲ್ಲೆಗಳ ಬಿಪಿಎಲ್ ಕಾರ್ಡ್‌ದಾರರ ಖಾತೆಗಳು ಹಣ ವರ್ಗಾವಣೆ ಮಾಡಲಾಗಿತ್ತು. ಈ ಜಿಲ್ಲೆಗಳಲ್ಲಿ 20 ಲಕ್ಷ ಬಿಪಿಎಲ್ ಕಾರ್ಡ್‌ದಾರರ ಕುಟುಂಬಗಳ ಸದಸ್ಯರ ಬ್ಯಾಂಕ್ ಖಾತೆಗಳಿಗೆ 115 ಕೋಟಿ ರೂಪಾಯಿ ಹಣ ವರ್ಗಾವಣೆ ಮಾಡಲಾಗಿತ್ತು.

 Anna Bhagya: Check Anna Bhagya Scheme Payment In Online

ಜುಲೈ 14ರಂದು ಚಿತ್ರದುರ್ಗ, ಧಾರವಾಡ, ಯಾದಗಿರಿ, ದಾವಣಗೆರೆ, ಕೊಪ್ಪಳ ಜಿಲ್ಲೆಗಳ 13 ಲಕ್ಷ ಬಿಪಿಎಲ್ ಕಾರ್ಡ್‌ದಾರರ 49 ಲಕ್ಷ ಫಲಾನುಭವಿಗಳ ಖಾತೆಗೆ 80 ಕೋಟಿ ರೂಪಾಯಿ ಹಣವನ್ನು ಡಿಬಿಟಿ ಮೂಲಕ ಹಾಕಲಾಗುತ್ತಿದೆ. ಜುಲೈ 18ರ ವೇಳೆಗೆ ವಿಜಯಪುರ, ಬಳ್ಳಾರಿ, ಬೀದರ್, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಚಾಮರಾಜನಗರ, ರಾಮನಗರ, ಹಾಸನ, ಗದಗ, ಕಲಬುರ್ಗಿ, ಬೆಳಗಾವಿ ಮತ್ತು ರಾಯಚೂರು ಜಿಲ್ಲೆಗಳ ಬಿಪಿಎಲ್‌ ಕಾರ್ಡ್‌ದಾರರ ಖಾತೆಗಳಿಗೆ ಹಣ ಹಾಕಲಾಗುತ್ತದೆ. ಮಂಡ್ಯ, ಕೊಡಗು, ಉತ್ತರ ಕನ್ನಡ, ತುಮಕೂರು, ಚಿಕ್ಕಬಳ್ಳಾಪುರ, ಹಾವೇರಿ, ಉಡುಪಿ ಹಾಗೂ ವಿಜಯನಗರ ಜಿಲ್ಲೆಗಳ ಬಿಪಿಎಲ್‌ ಕಾರ್ಡ್‌ದಾರರಿಗೂ ಶೀಘ್ರದಲ್ಲೇ ಹಣ ಸಿಗಲಿದೆ.

ಹಣ ಬಂದಿದೆಯಾ ಎಂದು ತಿಳಿಯುವುದು ಹೇಗೆ?

ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕಾರ್ಡ್‌ದಾರರ ಕುಟುಂಬದ ಸದಸ್ಯರ ಖಾತೆಗೆ ಹಣ ಬಂದಿದೆಯಾ ಎಂದು ತಿಳಿಯುವುದು ಮುಖ್ಯವಾಗುತ್ತದೆ. ಕೇವಲ 5 ನಿಮಿಷದಲ್ಲಿ ಆನ್‌ಲೈನ್‌ನಲ್ಲಿ ನಿಮ್ಮ ಖಾತೆಗೆ ಹಣ ಬಂದಿದೆಯಾ ಎಂದು ನೋಡಬಹುದಾಗಿದೆ.

ಕರ್ನಾಟಕ ಆಹಾರ ಇಲಾಖೆಯ ಅಧಿಕೃತ ವೆಬ್‌ಸೈಟ್‌ https://ahara.kar.nic.in/lpg/ ಇದಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಬಹುದು.

 Anna Bhagya: Check Anna Bhagya Scheme Payment In Online

https://ahara.kar.nic.in/lpg/ ಈ ವೆಬ್‌ಸೈಟ್‌ಗೆ ತೆರಳಿದರೆ ಅಲ್ಲಿ ನಿಮ್ಮ ಜಿಲ್ಲೆ ಯಾವ ವಿಭಾಗಕ್ಕೆ ಒಳಪಟ್ಟಿದೆ ನೋಡಿ, ಆ ಆಯ್ಕೆ ಮೇಲೆ ಕ್ಲಿಕ್ ಮಾಡಿ. ಬೆಂಗಳೂರು(ನಗರ/ಗ್ರಾಮೀಣ/ನಗರ) ಜಿಲ್ಲೆಗಳಿಗೆ ಪ್ರತ್ಯೇಕ ಲಿಂಕ್ ಇದೆ.

ಬಳ್ಳಾರಿ, ಬೀದರ್, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕಲಬುರಗಿ, ಕೋಲಾರ, ಕೊಪ್ಪಳ, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಯಾದಗಿರಿ, ವಿಜಯನಗರ ಜಿಲ್ಲೆಗಳಿಗೆ ಮತ್ತೊಂದು ಪ್ರತ್ಯೇಕ ಲಿಂಕ್ ನೀಡಲಾಗಿದೆ.

ಬಾಗಲಕೋಟೆ, ಬೆಳಗಾವಿ, ಚಾಮರಾಜನಗರ, ಚಿಕ್ಕಮಗಳೂರು, ದಕ್ಷಿಣಕನ್ನಡ, ಧಾರವಾಡ, ಗದಗ, ಹಾಸನ, ಹಾವೇರಿ, ಕೊಡಗು, ಮಂಡ್ಯ, ಮೈಸೂರು, ಉಡುಪಿ, ಉತ್ತರಕನ್ನಡ, ವಿಜಯಪುರ ಜಿಲ್ಲೆಗಳಿಗೆ ಪ್ರತ್ಯೇಕ ಲಿಂಕ್ ಇದೆ. ನೀವು ಯಾವ ಜಿಲ್ಲೆಯವರು ನೋಡಿ ಆ ವಿಭಾಗದ (Division) ಲಿಂಕ್‌ ಮೇಲೆ ಕ್ಲಿಕ್ ಮಾಡಿ. ನಂತರ ಹೊಸ ವಿಂಡೋ ತೆರೆಯುತ್ತದೆ.

 Anna Bhagya: Check Anna Bhagya Scheme Payment In Online

ಅದರಲ್ಲಿ ಹಲವು ಆಯ್ಕೆಗಳಿದ್ದು, ಕೊನೆಯಲ್ಲಿ ನೇರನಗದು ವರ್ಗಾವಣೆಯ ಸ್ಥಿತಿ ( Status Of DBT) ಎನ್ನುವ ಆಯ್ಕೆ ಕಾಣಿಸುತ್ತದೆ. ಅದರ ಮೇಲೆ ಕ್ಲಿಕ್ ಮಾಡಿದರೆ ಮತ್ತೊಂದು ವಿಂಡೋ ಓಪನ್ ಆಗುತ್ತದೆ.

 Anna Bhagya: Check Anna Bhagya Scheme Payment In Online

ಅಲ್ಲಿ ನೀವು ವರ್ಷ, ತಿಂಗಳು, ಪಡಿತರ ಚೀಟಿ ಸಂಖ್ಯೆ (RC ಸಂಖ್ಯೆ), ಕ್ಯಾಪ್ಚಾವನ್ನು ನಮೂದಿಸಿ ಗೋ ಆಯ್ಕೆ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ನೇರ ನಗದು ವರ್ಗಾವಣೆ ಸ್ಥಿತಿ ಪರದೆ ಮೇಲೆ ಕಾಣಿಸಿಕೊಳ್ಳಲಿದೆ.

ಅನ್ನಭಾಗ್ಯ ಯೋಜನೆಯಡಿ ಹಣ ನಿಮ್ಮ ಅಕೌಂಟ್‌ಗೆ ಜಮೆಯಾದ ನಂತರ ಲಿಂಕ್ ಮಾಡಲಾದ ಮೊಬೈಲ್ ಸಂಖ್ಯೆಗೆ ಸಂದೇಶ ಬರಲಿದೆ. ಅನ್ನ ಭಾಗ್ಯ ಯೋಜನೆಯನ್ನು ಪಡೆಯಲು ಇ-ಕೆವೈಸಿ ಮತ್ತು ಪಡಿತರ ಚೀಟಿಗೆ ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡುವುದು ಕಡ್ಡಾಯವಾಗಿದೆ.

English summary

In cases where beneficiaries have not received their first installment under the Anna Bhagya Scheme, which was launched on July 10, you can utilize the following method to check the status of the scheme.

Source link