Bengaluru
oi-Shankrappa Parangi
ಬೆಂಗಳೂರು, ಜೂನ್ 28: ಕಾಂಗ್ರೆಸ್ ನವರು ಹತ್ತು ಕೆಜಿ ಅಕ್ಕಿ ಕೊಡುವುದಾಗಿ ಭರವಸೆ ನಿಡಿದ್ದರು. ಈಗ ಅಕ್ಕಿ ಬದಲು 34 ರೂ. ಕೊಡುವುದಾಗಿ ಹೇಳುತ್ತಿದ್ದಾರೆ. ಇವರು ಕೊಡುವ ಹಣಕ್ಕೆ ಮಾರುಕಟ್ಟೆಯಲ್ಲಿ ಎರಡೂವರೆ ಕೆಜಿ ಅಕ್ಕಿ ಮಾತ್ರ ಬರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೇವಡಿ ಮಾಡಿದ್ದಾರೆ.
ಕಾಂಗ್ರೆಸ್ ಸರ್ಕಾರ ಐದು ಕೇಜಿ ಅಕ್ಕಿಗೆ ಬದಲಾಗಿ ಹಣ ಕೊಡುವುದಾಗಿ ಬುಧವಾರ ತಿಳಿಸಿದೆ. ಇದರ ಬೆನ್ನಲ್ಲೆ ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಬೊಮ್ಮಾಯಿ ಅವರು, ಚುನಾವಣೆ ಸಂದರ್ಭದಲ್ಲಿ ಹತ್ತು ಕೆಜಿ ಅಕ್ಕಿ ಕೊಡುವುದಾಗಿ ಹೇಳಿದ್ದರು. ಈಗ ಐದು ಕೆಜಿ ಕೊಡುವುದಾಗಿ ಹೇಳುತ್ತಿದ್ದಾರೆ. ಅವರು ಮಾತಿಗೆ ತಪ್ಪುತ್ತಿದ್ದಾರೆ ಎಂದು ದೂರಿದರು.
ಕಾಂಗ್ರೆಸ್ ನಾಯಕರು ಎಷ್ಟಾದರೂ ಆಗಲಿ ನಾವು ಅಕ್ಕಿಯನ್ನೇ ಕೊಡುತ್ತೇವೆ ಅಂತ ಹೇಳಿದ್ದರು. ಈಗ ಹಣ ಹಾಕುತ್ತೇವೆ ಅಂತ ಹೇಳುತ್ತಿದ್ದಾರೆ. ಇವರು ಮತ್ತೆ ಮಾತಿಗೆ ತಪ್ಪಿದ್ದಾರೆ ಎಂದು ಅವರು ಆರೊಪಿಸಿದರು.
ವಿದೇಶದಲ್ಲಿಯೂ ಭಾರತದ ಮಾನ ಹರಾಜು ಹಾಕಿ ಬಂದ ಪ್ರಧಾನಿ ಮೋದಿ: ಕಾಂಗ್ರೆಸ್ ಕಿಡಿ
ಪ್ರಸ್ತುತದಲ್ಲಿ ಮಾರುಕಟ್ಟೆಯಲ್ಲಿ ಪ್ರತಿ ಕೇಜಿ ಅಕ್ಕಿಗೆ ಬೆಲೆ 50-60 ರೂಪಾಯಿ ಇದೆ. ಆದರೆ ಕಾಂಗ್ರೆಸ್ ಸರ್ಕಾರ ಐದು ಕೇಜಿ ಅಕ್ಕಿಗೆ ಒಟ್ಟು 170 ರೂಪಾಯಿ ಕೊಡುವುದಾಗಿ ಹೇಳಿದ್ದಾರೆ. ಅಷ್ಟು ಹಣಕ್ಕೆ ಎರಡುವರೆ ಕೇಜಿ ಅಕ್ಕಿ ಮಾತ್ರ ಬರುತ್ತದೆ.
ಕೇವಲ ಅನ್ನಭಾಗ್ಯ ವಿಚಾರದಲ್ಲಿ ಮಾತ್ರವಲ್ಲದೇ, ಗೃಹಜ್ಯೋತಿ ವಿಚಾರದಲ್ಲೂ ಕಾಂಗ್ರೆಸ ಸರ್ಕಾರ ಷರತ್ತು ವಿಧಿಸಿತ್ತು. ಇದೀಗ ಮತ್ತೆ ಅದೇ ಚಾಳಿ ಮುಂದುವರಿಸಿದ್ದಾರೆ. 10 ಕೇಜಿ ಅಕ್ಕಿಯನ್ನು ನರೇಂದ್ರ ಮೋದಿ ಸರ್ಕಾರ ಡಿಸೆಂಬರ್ ವರೆಗೂ ಕೊಟ್ಟಿದೆ ಹತ್ತು ಕೆಜಿ ಕೊಟ್ಟವರು ಇವರೇ ಮೊದಲಲ್ಲಾ. ಎಷ್ಟೇ ಖರ್ಚಾದರೂ ಅಕ್ಕಿ ಕೊಡುವುದಾಗಿ ಹೇಳಿದವರು ಈಗ ಮಾತಿಗೆ ತಪ್ಪಿ ಜನರಿಗೆ ಎರಡೂವರೆ ಕೆಜಿ ಮಾತ್ರ ದೊರೆಯುವಂತೆ ಮಾಡಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಸಂಪುಟ ನೀರ್ಧಾರವೇನು?
ಕಾಂಗ್ರಸ್‌ನ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿಗಳಲ್ಲಿ ಒಂದಾಗಿರುವ ಅನ್ನಭಾಗ್ಯ ಯೋಜನೆ ಜಾರಿಗೆ ಆರಂಭದಲ್ಲೇ ವಿಘ್ನ ಎದುರಾಗಿದೆ. ಕೇಂದ್ರ ಸರ್ಕಾರ ಅಕ್ಕಿ ವಿತರಣೆ ಮಾಡುತ್ತಿಲ್ಲ ಎಂದು ಹೇಳಿರುವ ರಾಜ್ಯ ಕಾಂಗ್ರೆಸ್ ಸರ್ಕಾರ 10 ಕೇಜಿ ಅಕ್ಕಿಗೆ ಬದಲಾಗಿ ಪಡಿತರಿಗೆ ಎಂದಿನಂತೆ 05 ಕೇಜಿ ಮಾತ್ರವೇ ನೀಡುತ್ತಿದೆ.
ಬಾಕಿ ಐದು ಕೇಜಿ ಅಕ್ಕಿಗೆ ಬದಲಾಗಿ ಪ್ರತಿ ಕೇಜಿ 34 ರೂಪಾಯಿಯಂತೆ ಒಟ್ಟು ತಲಾ ಒಬ್ಬರಿಗೆ 170 ರೂಪಾಯಿ ಬ್ಯಾಂಕ್ ಖಾತೆಗೆ ಹಾಕುವುದಾಗಿ ಬುಧವಾರ ನಡೆದ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಇದು ತಾತ್ಕಾಲಿಕ ಎಂದಿರುವ ಕಾಂಗ್ರೆಸ್ ಮುಂದಿನ ದಿನಗಳಲ್ಲಿ ಅಕ್ಕಿ ಲಭಿಸಿದರೆ ಅಂದುಕೊಂಡಂತೆ 10 ವಿತರಿಸಲಾಗುವುದು ಎಂದು ಸರ್ಕಾರ ತಿಳಿಸಿದೆ.
English summary
Basavaraj Bommai reacts about congress decided to given money alternative 5 kg rice.
Story first published: Wednesday, June 28, 2023, 18:38 [IST]