Last Updated:
ತೀರ್ಥಹಳ್ಳಿಯ ದಸರಾದಲ್ಲಿ ಹುಲಿವೇಷಕ್ಕೆ ಹೆಜ್ಜೆ ಹಾಕುತ್ತಿದ್ದ ಕಲಾವಿದ ರಾಕೇಶ್ ಆತ್ಮಹತ್ಯೆಗೆ ಶರಣಾಗಿದ್ದು, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಸೀಬಿನಕೆರೆಯಲ್ಲಿ ಈ ಘಟನೆ ನಡೆದಿದೆ.
ಶಿವಮೊಗ್ಗ (ಜು.22): ಡ್ಯಾನ್ಸ್ ಮಾಸ್ಟರ್ ಹಾಗೂ ಕಲಾವಿದ ರಾಕೇಶ್ ಮನೆಯಲ್ಲೇ ಆತ್ಮಹತ್ಯೆಗೆ (Suicide) ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. ಶಿವಮೊಗ್ಗ (Shivamogga) ಜಿಲ್ಲೆಯ ತೀರ್ಥಹಳ್ಳಿಯ ಸೀಬಿನಕೆರೆಯಲ್ಲಿ ಈ ಘಟನೆ ನಡೆದಿದ್ದು, ತೀರ್ಥಹಳ್ಳಿ (Tirthahalli) ದಸರಾ ಕಾರ್ಯಕ್ರಮದಲ್ಲಿ ಹುಲಿವೇಷ ಹಾಕಿ ಹೆಜ್ಜೆ ಹಾಕುತ್ತಿದ್ದ ಕಲಾವಿದ ರಾಕೇಶ್, ಶಿವಮೊಗ್ಗದ ಸುತ್ತ-ಮುತ್ತ ಜನಪ್ರಿಯವಾಗಿದ್ದರು.
ತೀರ್ಥಹಳ್ಳಿಯ ದಸರಾದಲ್ಲಿ ಹುಲಿವೇಷಕ್ಕೆ ಹೆಜ್ಜೆ ಹಾಕುತ್ತಿದ್ದ ಕಲಾವಿದ ರಾಕೇಶ್ ಆತ್ಮಹತ್ಯೆಗೆ ಶರಣಾಗಿದ್ದು, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಸೀಬಿನಕೆರೆಯಲ್ಲಿ ಈ ಘಟನೆ ನಡೆದಿದೆ. ತೀರ್ಥಹಳ್ಳಿ ದಸರಾ ಕಾರ್ಯಕ್ರಮದಲ್ಲಿ ಹುಲಿವೇಷದ ಬಣ್ಣ ಹಾಕಿ ಹೆಜ್ಜೆ ಹಾಕುತ್ತಿದ್ದ ಕಲಾವಿದ ಆತ್ಮಹತ್ಯೆಗೆ ಶರಣಾದ ಸುದ್ದಿ ಕೇಳಿ ಸುತ್ತ-ಮುತ್ತಲಿನ ಗ್ರಾಮಸ್ಥರು ಸೀಬಿನಕೆರೆಗೆ ಬರ್ತಿದ್ದಾರೆ.
29 ವರ್ಷದ ರಾಕೇಶ್ ದುಡುಕಿನ ನಿರ್ಧಾರ ತೆಗೆದುಕೊಂಡು ಸಾವಿಗೆ ಶರಣಾಗಿದ್ದಾರೆ. ಈತ ಉಡುಪಿಯಲ್ಲಿ ಡಾನ್ಸ್ ಮಾಸ್ಟರ್ ಆಗಿಯೂ ಕಾರ್ಯ ನಿರ್ವಹಿಸುತ್ತಿದ್ದರು. ಕಳೆದ ಮೂರ್ನಾಲ್ಕು ವರ್ಷದಿಂದ ದಸರಾ ಕಾರ್ಯಕ್ರಮದಲ್ಲಿ ಹುಲಿವೇಷ ಹಾಕಿ ಹೆಜ್ಜೆ ಹಾಕುತ್ತಿದ್ದ ರಾಕೇಶ್ ಎಂದೇ ಜನಪ್ರಿಯರಾಗಿದ್ರು.
ತೀರ್ಥಹಳ್ಳಿಯ ಸೀಬಿನಕೆರೆಯಲ್ಲಿರೋ ಮನೆಯಲ್ಲಿ ಯಾರೂ ಇಲ್ಲದ ವೇಳೆ ಡ್ಯಾನ್ಸ್ ಮಾಸ್ಟರ್ ರಾಕೇಶ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. ಆದ್ರೆ ಆತ್ಮಹತ್ಯೆ ಇಂದಿನ ಕಾರಣ ಇನ್ನೂ ತಿಳಿದು ಬಂದಿಲ್ಲ. ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Artist Rakesh: ಡ್ಯಾನ್ಸ್ ಮಾಸ್ಟರ್ ಹಾಗೂ ಕಲಾವಿದ ರಾಕೇಶ್ ಆತ್ಮಹತ್ಯೆ; ದಸರಾದಲ್ಲಿ ಹುಲಿವೇಷಕ್ಕೆ ಹೆಜ್ಜೆ ಹಾಕ್ತಿದ್ದವನ ಜೀವನ ಅಂತ್ಯ














