Last Updated:
ಆಗಸ್ಟ್ 14ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಅವರಾಪನ್ 2, ಆರಂಭದಿಂದಲೇ ಬಾಕ್ಸ್ ಆಫೀಸ್ನಲ್ಲಿ ಉತ್ತಮ ಓಟ ಕಂಡಿದೆ. ಇದೀಗ ಚಿತ್ರದ ನಿರ್ಮಾಪಕರು ಅಧಿಕೃತವಾಗಿ ಕಲೆಕ್ಷನ್ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಬಾಲಿವುಡ್ ನಟ ಇಮ್ರಾನ್ ಹಶ್ಮಿ (Emraan Hashmi) ಅಭಿನಯದ ಅವರಾಪನ್ 2 (Avarappan 2) ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಸದ್ದು ಮಾಡುತ್ತಿದೆ. ವಿಮರ್ಶಕರಿಂದ ಮಿಶ್ರ ಪ್ರತಿಕ್ರಿಯೆ ಪಡೆದಿದ್ದರೂ, ವಾಣಿಜ್ಯ ವಿಚಾರದಲ್ಲಿ ಮಾತ್ರ ಸಿನಿಮಾ ಉತ್ತಮ ಪ್ರದರ್ಶನ ನೀಡಿದೆ. ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಜಾಗತಿಕ ಬಾಕ್ಸ್ ಆಫೀಸ್ನಲ್ಲಿ 200 ಕೋಟಿ ರೂಪಾಯಿ ಗಡಿ ದಾಟಿರುವ ಈ ಸಿನಿಮಾ, 2026ರಲ್ಲಿ ಅತಿ ಹೆಚ್ಚು ಗಳಿಕೆ ಮಾಡಿದ ಹಿಂದಿ ಚಿತ್ರಗಳ ಪಟ್ಟಿಯಲ್ಲೂ ಸ್ಥಾನ ಪಡೆದಿದೆ.














