Last Updated:
ಇಂಗ್ಲೆಂಡ್ ವಿರುದ್ಧದ ಸರಣಿಗೆ ಬಿಸಿಸಿಐ ಶಾಕಿಂಗ್ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಸಾಲಿಡ್ ಫಾರ್ಮ್ನಲ್ಲಿರುವ ಆಟಗಾರನನ್ನು ಕೈಬಿಟ್ಟಿದೆ.
ಇಂಗ್ಲೆಂಡ್ (England) ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಬಿಸಿಸಿಐ (BCCI) ಶನಿವಾರ ಟೀಮ್ ಇಂಡಿಯಾ (Team India) ತಂಡವನ್ನು ಪ್ರಕಟಿಸಿದೆ. ಭಾರತ ತಂಡವು ಜುಲೈ 14, 16 ಮತ್ತು 19 ರಂದು ತವರಿನಲ್ಲಿ ಇಂಗ್ಲೆಂಡ್ ವಿರುದ್ಧ ಮೂರು ಏಕದಿನ ಪಂದ್ಯಗಳನ್ನು ಆಡಲಿದೆ. ಆದ್ರೆ, ಇಂಗ್ಲೆಂಡ್ ವಿರುದ್ಧದ ಸರಣಿಗೆ ಬಿಸಿಸಿಐ ಶಾಕಿಂಗ್ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಫಾರ್ಮ್ನಲ್ಲಿರುವ ಆಟಗಾರರನ್ನು ಕೈಬಿಟ್ಟಿದೆ. ಶನಿವಾರ ಅಫ್ಘಾನಿಸ್ಥಾನ ವಿರುದ್ಧ ಶತಕ ಬಾರಿಸಿದ್ದ ಯಶಸ್ವಿ ಜೈಸ್ವಾಲ್ (Yashasvi Jaiswal) ಅವರನ್ನು 15 ಸದಸ್ಯರ ತಂಡದಿಂದ ಹೊರಗಿಡಲಾಗಿದೆ. ಈ ನಿರ್ಧಾರ ಎಲ್ಲರನ್ನೂ ಅಚ್ಚರಿಗೊಳಿಸಿದೆ.
ತಂಡವನ್ನು ಘೋಷಿಸುವ ಒಂದು ದಿನ ಮೊದಲು ಅಫ್ಘಾನಿಸ್ತಾನ (Afghanistan) ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಪಂದ್ಯ ಭರ್ಜರಿ ಬ್ಯಾಟಿಂಗ್ ಮಾಡಿದ್ದರು. ಶತಕ (Century) ಸಿಡಿಸುವ ಮೂಲಕ ಪಂದ್ಯವನ್ನು ಗೆಲ್ಲಿಸಿಕೊಟ್ಟಿದ್ದರು. ಚೆಪಾಕ್ನಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ, ಜೈಸ್ವಾಲ್ 86 ಎಸೆತಗಳಲ್ಲಿ 14 ಬೌಂಡರಿ ಮತ್ತು ಮೂರು ಸಿಕ್ಸರ್ಗಳೊಂದಿಗೆ 110 ರನ್ ಗಳಿಸಿದ್ದರು. ಮರುದಿನ, ಅಂದ್ರೆ ಭಾನುವಾರ, ಯಶಸ್ವಿ ಜೈಸ್ವಾಲ್ ಅವರನ್ನು ಭಾರತದ ಏಕದಿನ ತಂಡದಿಂದ ಕೈಬಿಡಲಾಯಿತು.
ಅಫ್ಘಾನಿಸ್ತಾನ ಏಕದಿನ ಸರಣಿ ಮತ್ತು ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಟೀಮ್ ಇಂಡಿಯಾದಲ್ಲಿ ಕೆಲವೇ ಬದಲಾವಣೆಗಳನ್ನು ಮಾಡಲಾಗಿದೆ. ಹರ್ಷ್ ದುಬೆ (Harsh Dube) ಬದಲಿಗೆ ಅಕ್ಷರ್ ಪಟೇಲ್ (Akshar Patel) ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಿನ್ಸ್ ಯಾದವ್ (Prince Yadav) ಬದಲಿಗೆ ಜಸ್ಪ್ರೀತ್ ಬುಮ್ರಾ (Jasprit Bumrah) ಮರಳಿದ್ದಾರೆ. ಯಶಸ್ವಿ ಜೈಸ್ವಾಲ್ ಬದಲಿಗೆ ವಿರಾಟ್ ಕೊಹ್ಲಿ ಅವರನ್ನು ಆಯ್ಕೆ ಮಾಡಲಾಗಿದೆ. ಆದ್ರೆ, ಜೈಸ್ವಾಲ್ ಅವರನ್ನು ತಂಡದಿಂದ ಕೈಬಿಟ್ಟಿರೋದು ಎಲ್ಲರಿಗೂ ಅಚ್ಚರಿಯನ್ನುಂಟು ಮಾಡಿದ್ದು, ಬಿಸಿಸಿಐ ನಿರ್ಧಾರದ ವಿರುದ್ಧ ಕ್ರಿಕೆಟ್ ಅಭಿಮಾನಿಗಳು (Cricket Fans) ಬೇಸರ ಹೊರಹಾಕಿದ್ದಾರೆ.
ಐಪಿಎಲ್ 2026ರ ಫೈನಲ್ನಲ್ಲಿ ಆರ್ಸಿಬಿಯನ್ನು ಗೆಲುವಿನತ್ತ ಕೊಂಡೊಯ್ದ ನಂತರ ವಿರಾಟ್ ಕೊಹ್ಲಿ ಮಂಡಿರಜ್ಜು ಗಾಯದಿಂದ ಬಳಲುತ್ತಿದ್ದರು. ಇದರಿಂದಾಗಿ ಅವರು ಅಫ್ಘಾನಿಸ್ತಾನ ವಿರುದ್ಧದ ಸರಣಿಯನ್ನು ಮಿಸ್ ಮಾಡಿಕೊಂಡಿದ್ದರು. ಇಂಗ್ಲೆಂಡ್ ಪ್ರವಾಸದಲ್ಲಿ ಆಡುವ ಮೊದಲು ವಿರಾಟ್ ಬಿಸಿಸಿಐನ ಸೆಂಟರ್ ಆಫ್ ಎಕ್ಸಲೆನ್ಸ್ (ಸಿಒಇ) ನಲ್ಲಿ ಫಿಟ್ನೆಸ್ ಪರೀಕ್ಷೆಗೆ ಒಳಗಾಗಬೇಕಾಗುತ್ತದೆ ಎಂದು ಬಿಸಿಸಿಐ ತಿಳಿಸಿದೆ.
ಶುಭ್ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಹರ್ಷಿತ್ ರಾಣಾ, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ, ಅರ್ಷದೀಪ್ ಸಿಂಗ್, ಗುರ್ನೂರ್ ಬ್ರಾರ್













