Bengaluru
oi-Shankrappa Parangi

ಬೆಂಗಳೂರು, ಜೂನ್ 21: ಟೆಂಡರ್ ಸ್ಥಗಿತಗೊಳಿಸಿರುವ ಬಗ್ಗೆ ಬಿಜೆಪಿ ನಾಯಕರ ಟೀಕೆಸಿದ್ದಾರೆ. ಅವರಿಗೆ ಜೋರಾಗಿ ಟೀಕೆ ಮಾಡಲು ಹೇಳಿ, ನಾನು ಎಲ್ಲರನ್ನು ಬಯಲು ಮಾಡುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು.
ಬ್ರಾಂಡ್ ಬೆಂಗಳೂರು ಕುರಿತು ಬುಧವಾರ ವಿಕಾಸಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸುದ್ದಿಗಾರರ ನಾನಾ ಪ್ರಶ್ನೆಗಳಿಗೆ ಅವರು ಉತ್ತರಿಸಿದರು. ಈ ವೇಳೆ ಬಿಜೆಪಿ ಟೀಕೆ ಬಗ್ಗೆ ಮಾತನಾಡಿ, ಬಿಜೆಪಿಯವರು ಜೋರಾಗಿ ಟೀಕೆ ಮಾಡಲು ಹೇಳಿ. ಈಗಾಗಲೇ ರಾಜರಾಜೇಶ್ವರಿನಗರದಲ್ಲಿ ಯಾವುದೇ ಕೆಲಸ ಮಾಡದೇ 123 ಕೋಟಿ ಬಿಲ್ ಪಡೆದಿರುವ ಬಗ್ಗೆ ಲೋಕಾಯುಕ್ತ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ಬಿಡಿಎ ನಲ್ಲೂ ಎಸ್ಐಟಿ ನಿರ್ಮಾಣ ಮಾಡುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಪಾಲಿಕೆಯಲ್ಲೂ ಆಗಲಿದೆ. ಈ ಬಗ್ಗೆ ಚರ್ಚೆ ಮಾಡೋಣ ಎಂದು ಅವರು ಎಚ್ಚರಿಸಿದರು.

ನಿನ್ನೆಯವೆರೂ ಕೇವಲ ಬಡವರ ಮೇಲೆ ಮಾತ್ರ ರಾಜಕಾಲುವೆ ತೆರವು ಮಾಡುತ್ತಿದ್ದೀರಿ ಎಂದು ನೀವು ನನ್ನ ವಿರುದ್ಧ ವಾಗ್ದಾಳಿ ಮಾಡುತ್ತಿದ್ದಿರಿ. ನಿನ್ನೆ ಕೆಲವು ರೆಸಾರ್ಟ್ ಹಾಗೂ ಇತರ ಪ್ರದೇಶಗಳಲ್ಲಿ ರಾಜಕಾಲುವೆ ತೆರವು ಮಾಡಿದ್ದೇವೆ ಎಂದು ಡಿಕೆ ಶಿವಕುಮಾರ್ ಬೆಂಗಳೂರಿನಲ್ಲಿ ಮಳೆಗಾದಲ್ಲಿ ಈ ಸಲವು ಪ್ರವಾಹ ಪರಿಸ್ಥಿತಿ ನಿರ್ಮಾಣ ಬಗ್ಗೆ ಕೇಳಿದ ಪ್ರಶ್ನೆಗೆ ಅವರು ಹೀಗೆ ಪ್ರತಿಕ್ರಿಯಿಸಿದರು.
ಅಧಿಕಾರಿಗಳಿಗೆ ಸಂಪೂರ್ಣ ಅಧಿಕಾರ
ಒತ್ತುವರಿ ತೆರವುಗಳ ಪ್ರದೇಶವನ್ನು ನಾನು ಹೋಗಿ ಗುರುತು ಮಾಡಿರಲಿಲ್ಲ. ಕಂದಾಯ ಅಧಿಕಾರಿಗಳು ಗುರುತು ಮಾಡಿದ್ದರು. ಅದರ ಆಧಾರದ ಮೇಲೆ ರಾಜಕಾಲುವೆ ತೆರವು ಮಾಡುತ್ತಿದ್ದಾರೆ. ಅಧಿಕಾರಿಗಳಿಗೆ ಈ ವಿಚಾರದಲ್ಲಿ ಕೆಲಸ ಮಾಡಲು ಸಂಪೂರ್ಣ ಅಧಿಕಾರ ನೀಡಲಾಗಿದೆ. ನಿನ್ನೆ ಅತಿಯಾದ ಮಳೆಯಿಂದಾಗಿ ತಾತ್ಕಾಲಿಕವಾಗಿ ಅದನ್ನು ನಿಲ್ಲಿಸಲಾಗಿದೆ.
ಇನ್ನೂ ಈ ವಿಚಾರದಲ್ಲಿ ಸರ್ಕಾರ ಎರಡು ವಿಚಾರವಾಗಿ ನಿರ್ಧಾರ ಕೈಗೊಳ್ಳಬೇಕು. ಸಿಡಿಪಿ ಹಾಗೂ ಕಂದಾಯ ಇಲಾಖೆ ಒಂದಾಗಿ ಕೆಲಸ ಮಾಡಬೇಕು. ಇರಡು ಇಲಾಖೆಗಳು ಪ್ರತ್ಯೇಕವಾಗಿ ಕೆಲಸ ಮಾಡಲು ಸಾಧ್ಯವಿಲ್ಲ. ಈ ವಿಚಾರದಲ್ಲಿ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಅವರು ತಿಳಿಸಿದರು.

ಬ್ರಾಂಡ್ ಬೆಂಗಳೂರು ಮಾಸ್ಟರ್ ಪ್ಲಾನ್ ಯಾವಾಗ?, ಒಂದೇ ದಿನದಲ್ಲಿ ಎಲ್ಲವನ್ನು ಜೀರ್ಣಿಸಿಕೊಳ್ಳಲು ಆಗುವುದಿಲ್ಲ. ಹಂತ ಹಂತವಾಗಿ ಆ ಕುರಿತು ಕೆಲಸ ಮಾಡಲಾಗುವುದು.
ಕೇಬಲ್‌ಗಳ ರಾಶಿಗೆ ಮುಕ್ತಿ ಯಾವಾಗ?
ಬೆಂಗಳೂರಿನ ಅನೇಕ ಕಡೆಗಳಲ್ಲಿ ಕೆಬಲ್ ಗಳ ರಾಶಿ ಇದೆ, ಅದನ್ನು ನಾನು ಇಂಧನ ಸಚಿವನಾಗಿದ್ದಾಗಲೂ ಕಂಡಿದ್ದೇನೆ. ತಮ್ಮನ್ನು ಯಾರೂ ಮುಟ್ಟಲು ಆಗುವುದಿಲ್ಲ ಎಂದು ಅವರು ಭಾವಿಸಿದಂತಿದೆ. ಈ ಬಗ್ಗೆ ಸರ್ಕಾರ ಆಲೋಚನೆ ಮಾಡಿದೆ. ಮಾಧ್ಯಮಗಳು ಸಹಕಾರ ನೀಡಿದರೆ ಎಲ್ಲ ಕೇಬಲ್ ಕಟ್ ಮಾಡಿಸುತ್ತೇನೆ ಎಂದು ಗುಡುಗಿದರು.
ರಾಜಕಾಲುವೆ ತೆರವು ವಿಚಾರದಲ್ಲಿ ಸರ್ಕಾರದ ಅಧಿಕಾರಿಗಳೇ ಒತ್ತುವರಿಗೆ ಅನುಮತಿ ನೀಡಿದ್ದಾರೆಯೇ? ಎಂಬ ಪ್ರಶ್ನೆಗೆ ಡಿಕೆಶಿ ಅವರು, ಅಂತಹ ಪ್ರಕರಣಗಳ ಬಗ್ಗೆ ದೂರು ಬಂದರೆ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು. ಈ ರೀತಿ ಅನುಮತಿ ನೀಡಿದ ಅನೇಕ ಅಧಿಕಾರಿಗಳು ನಿವೃತ್ತಿ ಹೊಂದಿರುತ್ತಾರೆ. ಅನೇಕ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿವೆ ಎಂದು ವಿವರಿಸಿದರು.
ತೆರಿಗೆ ಹೆಚ್ಚಳ ಹಾಗೂ ಕಸ ಸಂಗ್ರಹ ಮತ್ತು ತೆರಿಗೆ ಪಾವತಿ ವಿಚಾರದಲ್ಲಿ ಒಂದೊಂದು ರಾಜ್ಯಗಳಲ್ಲಿ ಒಂದೊಂದು ಮಾದರಿ ಅಳವಡಿಕೆ ಆಗಿದೆ. ಬಹಳ ಜನ ನಮ್ಮ ಬಳಿ ಹಣ ಪಡೆದರೂ ಸರಿ, ಕಸ ವಿಲೇವಾರಿ ಸರಿಯಾಗಿ ನಿರ್ವಹಣೆ ಮಾಡಿ ಎಂದು ಕೇಳುತ್ತಿದ್ದಾರೆ.
ವಾರ್ಡ್ ವಿಂಗಡನೆಗೆ ಸಮಿತಿ ರಚನೆ
ಅಪಾರ್ಟ್ ಮೆಂಟ್ ಗಳಲ್ಲಿ ನಿರ್ವಹಣೆಗಾಗಿ ಪ್ರತ್ಯೆಕ ಹಣ ಸಂಗ್ರಹಿಸಲಾಗುತ್ತಿದೆ. ಸಾರಿಗೆ ಇಲಾಖೆಯಲ್ಲಿ ಇಂಧನ ಬೆಲೆ ಏರಿಕೆಯಾದಂತೆ ದರ ಏರಿಕೆಗೆ ಅಧಿಕಾರ ನೀಡಲಾಗಿದೆ. ಆದರೆ ನೀರು ಹಾಗೂ ಆಸ್ತಿ ತೆರಿಗೆ ವಿಚಾರವಾಗಿ ಆ ಅಧಿಕಾರ ನೀಡಿಲ್ಲ ಎಂದು ಪ್ರಶ್ನೆಯೊಂದಕ್ಕೆ ಡಿಕೆಶಿ ಪ್ರತಿಕ್ರಿಯಿಸಿದರು.
ಬಿಬಿಎಂಪಿ ವ್ಯಾಪ್ತಿಯ ವಾರ್ಡ್ ಗಳ ಮರುವಿಂಗಡಣೆ ವಿಚಾರ, ಅದಕ್ಕಾಗಿ ನಾವು ಸಮಿತಿ ರಚನೆ ಮಾಡಿದ್ದೇವೆ. ಈ ವಿಚಾರವಾಗಿ ಮುಂದೆ ಮಾಹಿತಿ ನೀಡುತ್ತೇನೆ. ಬ್ರ್ಯಾಂಡ್ ಬೆಂಗಳೂರಿನಲ್ಲಿ ಹಸಿರು ನಗರವಾಗಿ ಪರಿವರ್ತಿಸಲು ನಿಮ್ಮ ಬಳಿ ಯಾವುದಾದರೂ ಉತ್ತಮ ಸಲಹೆ ಇದ್ದರೆ ನೀಡಿ. ನಾವು ಅದನ್ನು ಸ್ವಾಗತಿಸುತ್ತೇವೆ. ಹಸಿರು ಬೆಂಗಳೂರು ನಿರ್ಮಾಣಕ್ಕೂ ನಾವು ಸಾರ್ವಜನಿಕರ ಅಭಿಪ್ರಾಯ ಕೇಳಿದ್ದೇವೆ. ವಿಪಕ್ಷದವರನ್ನು ಕೇಳಿದ್ದೇವೆ, ಬೆಂಗಳೂರನ್ನು ಮತ್ತೆ ಹಸಿರು ನಗರವನ್ನಾಗಿ ಮಾಡಬೇಕು ಎಂದು ಅವರು ಹೇಳಿದರು.
ನಗರದಲ್ಲಿ ನಡೆಯುತ್ತಿರುವ ಎಲ್ಲ ಕಾಮಗಾರಿ ಯೋಜನೆಗಳನ್ನು ಡಬಲ್ ಚೆಕ್ ಮಾಡಿಸುತ್ತೇನೆ. ಕಾಮಗಾರಿ ಅಂದಾಜು ಪರಿಶೀಲನೆ ಮಾಡಿಸುತ್ತೇನೆ. ಎಲ್ಲವೂ ಸರಿಯಾಗಿದ್ದರೆ ಮಾತ್ರ ಪುನರಾರಂಭ ಆಗುತ್ತವೆ. ಈ ವಿಚಾರವಾಗಿ ನಾನು ಚುನಾವಣೆಗೂ ಆರು ತಿಂಗಳು ಮುಂಚಿತವಾಗಿ ಎಚ್ಚರಿಕೆ ನೀಡಿದ್ದೆ. ಯಾರು ಎಷ್ಟಾದರೂ ಕೂಗಿಕೊಳ್ಳಲಿ ನಾವು ನಮ್ಮ ನಿರ್ಧಾರಕ್ಕೆ ಬದ್ಧವಾಗಿದ್ದೇವೆ. ಇನ್ನೂ ಇಲಾಖೆಗಳಲ್ಲಿ ವರ್ಗಾವಣೆ ದಂಧೆಗೆ ರೇಟ್ ಫಿಕ್ಸ್ ಆಗಿದ್ದರೆ ಲೋಕಾಯುಕ್ತಕ್ಕೆ ದೂರು ನೀಡಲಿ ಎಂದರು.
English summary
DCM DK Shivakumar what is said about Bengaluru all issues in Brand Bengaluru Press meet.
Story first published: Wednesday, June 21, 2023, 21:59 [IST]