ಬಳ್ಳಾರಿ, ಜೂನ್ 24 : ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಅನುಭವಿಸಿದ್ದ ಬಿಜೆಪಿಯ ಸೋಲಿನ ನೈತಿಕ ಹೊಣೆ ಹೊತ್ತು ಈಗಾಗಲೇ ನನ್ನ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಈ ಕುರಿತು ಶನಿವಾರ ಬಳ್ಳಾರಿಯಲ್ಲಿ ನಡೆಯದ ಕಾರ್ಯಕ್ರಮದಲ್ಲಿ ನಳೀನ್ ಕುಮಾರ್ ಕಟೀಲ್ ಮಾತನಾಡಿ, ಈಗಾಗಲೇ ನಾನು ಲಿಖಿತ ಹಾಗೂ ಮೌಖಿಕವಾಗಿ ರಾಜೀನಾಮೆ ಸಲ್ಲಿಕೆ ಮಾಡಿದ್ದೇನೆ ಎಂದು ಹೇಳಿದರು. ಇನ್ನೂ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನನ್ನ ಎರಡು ವರ್ಷದ ಅವಧಿ ಮುಗಿದಿದೆ. ಅದರ ಬೆನ್ನಲ್ಲಿಯೇ ನಾನು ರಾಜೀನಾಮೆಯನ್ನೂ ನೀಡಿದ್ದೇನೆ ಎಂದು ಹೇಳಿದ್ದಾರೆ. ಈಗಾಗಲೇ ರಾಜೀನಾಮೆ ಪತ್ರವನ್ನು ಲಿಖಿತವಾಗಿಯೂ ಕಳಿಸಿದ್ದೇನೆ ಎಂದು ತಿಳಿಸಿದ್ದಾರೆ.