Last Updated:
Bigg Boss: ತಮ್ಮ ಬಹುದಿನಗಳ ಕನಸನ್ನು ನನಸು ಮಾಡಿಕೊಳ್ಳುವ ಉದ್ದೇಶದಿಂದ ಲಕ್ಷಾಂತರ ಮಂದಿ ವಿಡಿಯೋಗಳನ್ನು ಕಳುಹಿಸಿ, ಆಯ್ಕೆಗಾಗಿ ಕಾತರದಿಂದ ಕಾಯುತ್ತಿದ್ದಾರೆ. ಇವರಲ್ಲಿ 60 ಸ್ಪರ್ಧಿಗಳನ್ನು ಆಯ್ಕೆ ಮಾಡಿ, ಇದೀಗ ಅವರನ್ನು ‘ಬಿಗ್ಬಾಸ್ ಅಗ್ನಿಪರೀಕ್ಷೆ’ಗೆ ಒಳಪಡಿಸಲಾಗುತ್ತಿದೆ.
ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ಬಾಸ್ ಕನ್ನಡ’ ಸೀಸನ್ 13ರ (Bigg Boss 13) ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಈ ಬಾರಿ ಸಾಮಾನ್ಯ ಜನರಿಗೂ ಬಿಗ್ಬಾಸ್ ಮನೆಯೊಳಗೆ ಪ್ರವೇಶಿಸುವ ಅವಕಾಶ ಕಲ್ಪಿಸಲಾಗಿದೆ. ಆ ಅವಕಾಶ ಯಾರಿಗೆ ಸಿಗಲಿದೆ ಎಂಬ ಕುತೂಹಲ ಹೆಚ್ಚಾಗಿದೆ. ಸಾಮಾನ್ಯ ಜನರ ಆಯ್ಕೆ ಪ್ರಕ್ರಿಯೆಗೆ ‘ಬಿಗ್ಬಾಸ್ ಅಗ್ನಿಪರೀಕ್ಷೆ’ ಎಂದು ಹೆಸರಿಡಲಾಗಿದ್ದು, ಆಗಸ್ಟ್ 16ರಿಂದ ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 9.30ಕ್ಕೆ ಕಾರ್ಯಕ್ರಮ ಪ್ರಸಾರವಾಗಲಿದೆ.














