Last Updated:
‘ಕುಕ್ ವಿತ್ ಕೋಮಲಿ’ ಕಾರ್ಯಕ್ರಮದ ಮೂಲಕ ಜನಪ್ರಿಯರಾಗಿರುವ ಅನ್ಸರ್, ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗಲು ಪ್ರಯತ್ನಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬಿಗ್ ಬಾಸ್ (Bigg Boss) ಸೀಸನ್ಗಳ ಆರಂಭದ ದಿನಗಳಲ್ಲೇ ಮನರಂಜನೆ, ಜಗಳ, ಭಿನ್ನಾಭಿಪ್ರಾಯ ಮತ್ತು ಕುತೂಹಲಕಾರಿ ಘಟನೆಗಳು ನಡೆಯುವುದು ಸಾಮಾನ್ಯ. ಈ ಬಾರಿ ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಸೇರಿದಂತೆ ಹಲವು ಭಾಷೆಗಳಲ್ಲಿ ಬಿಗ್ ಬಾಸ್ ಸೀಸನ್ಗಳು ಆರಂಭವಾಗಿವೆ. ಕಾರ್ಯಕ್ರಮ ಆರಂಭವಾದ ಕೆಲವೇ ದಿನಗಳಲ್ಲಿ ತಮಿಳು ಬಿಗ್ ಬಾಸ್ ಮನೆಯಲ್ಲಿ ನಡೆದಿರುವ ವಿಚಿತ್ರ ಘಟನೆಯೊಂದು ಇದೀಗ ಗಮನ ಸೆಳೆಯುತ್ತಿದೆ. ‘ಕುಕ್ ವಿತ್ ಕೋಮಲಿ’ ಕಾರ್ಯಕ್ರಮದ ಮೂಲಕ ಜನಪ್ರಿಯರಾಗಿರುವ ಅನ್ಸರ್, ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗಲು ಪ್ರಯತ್ನಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.














