BJP vs BJP: ಯಾರ ತ್ಯಾಗದಿಂದ ಸರ್ಕಾರ ಬಂತು? ಕೆ ಎಸ್‌ ಈಶ್ವರಪ್ಪ ವಿರುದ್ದ ಸಿಡಿದೆದ್ದ ವಲಸಿಗ ಬಿಜೆಪಿಗರು | BJP Leaders MTB Nagaraj And H Vishwanath Slams Former Minister KS Eshwarappa

Karnataka

oi-Reshma P

|

Google Oneindia Kannada News

ಬೆಂಗಳೂರು, ಜುಲೈ 01: ರಾಜ್ಯ ವಿಧಾನಸಭಾ ಚುನಾವಣೆಯ ಸೋಲಿನ ಬಳಿಕ ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ಜೋರಾಗಿದೆ. ಸೋಲಿನ ಕಾರಣದ ಕುರಿತು ವಿವಿಧ ಕಾರಣಗಳನ್ನ ನೀಡಿ ಬಿಜೆಪಿ ನಾಯಕರಲ್ಲಿಯೇ ಆರೋಪ ಪ್ರತ್ಯಾರೋಪ ಜೋರಾಗಿದ್ದು, ಕಾಂಗ್ರೆಸ್‌ನಿಂದ ವಲಸೆ ಬಂದವರಿಂದ ಬಿಜೆಪಿಯಲ್ಲಿ ಅಶಿಸ್ತು ಬಂದಿದೆ ಎಂಬ ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರ ಹೇಳಿಕೆಗೆ ವಿರುದ್ದ ವಲಸಿಗ ಬಿಜೆಪಿಗರು ಕಿಡಿಕಾರಿದ್ದಾರೆ.

ಹೌದು, ಬಿಜೆಪಿಯಿಂದ ಕಾಂಗ್ರೆಸ್‌ ಗೆ ವಲಸೆ ಬಂದವರಿಂದ ಬಿಜೆಪಿಯಲ್ಲಿ ಸ್ವಲ್ಪ ಮಟ್ಟಿನ ಅಶಿಸ್ತು ಬಂದಿದೆ ಎಂಬ ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರ ಹೇಳಿಕೆಗೆ ಮಾಜಿ ಸಚಿವರಾದ ಶಿವರಾಮ್‌ ಹೆಬ್ಬಾರ್‌, ಎಂಟಿಬಿ ನಾಗರಾಜ್‌ ಮತ್ತು ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ತೀವ್ರ ಕಿಡಿಕಾರಿದ್ದಾರೆ.

BJP Leaders MTB Nagaraj And H Vishwanath Slams Former Minister KS Eshwarappa

ಪಕ್ಷದ ಹಿರಿಯ ನಾಯಕರು ಹಾಗೂ ಮಾಜಿ ಸಚಿವರಾದ ಕೆ ಎಸ್‌ ಈಶ್ವರಪ್ಪನವರು ಈ ರೀತಿಯ ಹೇಳಿಕೆ ನೀಡಿದ್ದು ಸರಿಯಲ್ಲ, ವಲಸಿಗರಿಂದಲೇ ಬಿಜೆಪಿ ಅಧಿಕಾರಕ್ಕೆ ಬಂದಿತ್ತು ಎಂಬುದನ್ನು ಅವರು ಮರೆಯಬಾರದು ಎಂದು ಅಸಮಾಧಾನ ಹೊರಹಾಕಿದ್ದಾರೆ.

ಈಶ್ವರಪ್ಪ ಹೇಳಿಕೆ ಕುರಿತು ಶಿರಸಿಯಲ್ಲಿ ಶುಕ್ರವಾರ ಮಾಧ್ಯಮಗಳ ಪ್ರಶ್ನೆಗೆ ಮಾಜಿ ಸಚಿವ ಶಿವರಾಮ್‌ ಹೆಬ್ಬಾರ್‌ ಉತ್ತರಿಸಿ, ಈಶ್ವರಪ್ಪ ಅವರಿಗೆ ಟಿಕೆಟ್‌ ತಪ್ಪಲು ನಾವು ಕಾರಣರಲ್ಲ. ಯಾರ ತ್ಯಾಗದಿಂದ ಸರ್ಕಾರ ಬಂತು? ಯಾರು ಮಂತ್ರಿಗಳಾದರು? ಎಂಬುದನ್ನು ಈಶ್ವರಪ್ಪ ತಿಳಿದುಕೊಳ್ಳಬೇಕು. ಬಾಲ ಕಟ್‌ ಮಾಡುವಂಥ ಕೆಲಸ ನಾವು ಮಾಡಿಲ್ಲ.ಕೆಲವರಿಗೆ ಮಾತನಾಡುವ ಚಟ ಇರುತ್ತದೆ. ಆದರೆ ಜವಾಬ್ದಾರಿ ಸ್ಥಾನದಲ್ಲಿರುವವರು ಶಬ್ದ ಬಳಸುವ ಮೊದಲು ಯೋಚನೆ ಮಾಡಬೇಕು ಈಶ್ವರಪ್ಪ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

BJP Leaders MTB Nagaraj And H Vishwanath Slams Former Minister KS Eshwarappa

ಇನ್ನೂ ಈ ವಿಚಾರವಾಗಿಯೇ ಮಾಜಿ ಸಚಿವ ಎಂಟಿಬಿ ನಾಗರಾಜ್‌ ಮಾತನಾಡಿ, ಬಿಜೆಪಿ ಅಧಿಕಾರಕ್ಕೆ ಬಂದದ್ದು ಮತ್ತು ಇಬ್ಬರು ಮುಖ್ಯಮಂತ್ರಿಗಳಾಗಿದ್ದು ವಲಸಿಗರಿಂದಲೇ ಎಂದು ಈಶ್ವರಪ್ಪ ಅವರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ವಲಸಿಗರು ಕಾರಣ. ಆದರೆ ಈಗ ನಮ್ಮಿಂದಲೇ ಅಧಿಕಾರ ಕಳೆದುಕೊಂಡೆವು, ಪಕ್ಷದಲ್ಲಿ ಶಿಸ್ತು ಹಾಳಾಯಿತು ಎನ್ನುವುದು ಸರಿಯಲ್ಲ. ಈಶ್ವರಪ್ಪನವರು ಪಕ್ಷದ ಹಿರಿಯ ನಾಯಕರು. ಯಾವ ಸಂದರ್ಭದಲ್ಲಿ ಈ ಹೇಳಿಕೆ ನೀಡಿದ್ದಾರೋ ಗೊತ್ತಿಲ್ಲ. ಆದರೂ ಈ ರೀತಿ ಮಾತನಾಡಬಾರದಿತ್ತು ಎಂದು ಹೇಳಿದ್ದಾರೆ.

ವಲಸಿಗರ ಬಗ್ಗೆ ಕೆ ಎಸ್‌ ಈಶ್ವರಪ್ಪ ಹೇಳಿದ್ದೇನು?

ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಆಪರೇಷನ್ ಕಮಲ ಮುಳುವಾಯ್ತು. ಕಾಂಗ್ರೆಸ್ ನಾಯಕರನ್ನು ಪಕ್ಷಕ್ಕೆ ಕರೆದುಕೊಂಡು ಬಂದಿರುವುದಕ್ಕೆ ಸಮಸ್ಯೆ ಅನುಭವಿಸುತ್ತಿದ್ದೇವೆ. ಕಾಂಗ್ರೆಸ್‌ನ ಗಾಳಿ ಸೋಕಿರುವುದರಿಂದ ಬಿಜೆಪಿಯಲ್ಲಿ ಅಲ್ಲಲ್ಲಿ ಶಿಸ್ತು ಕಳೆದು ಹೋಗಿದೆ ಎಂದು ಮಾಜಿ ಸಚಿವ ಕೆ ಎಸ್‌ ಈಶ್ವರಪ್ಪ ಹೇಳಿದರು.

ಬಿಜೆಪಿಯಲ್ಲಿ ಸದ್ಯ ಅಶಿಸ್ತು ಮೂಡಿದೆ, ಕಾಂಗ್ರೆಸ್ ಪಕ್ಷದಿಂದ ಬಿಜೆಪಿಗೆ ವಲಸಿಗರು ಬಂದ ನಂತರ ಪಕ್ಷದಲ್ಲಿ ಅಲ್ಪಸ್ವಲ್ಪ ಅಶಿಸ್ತು ಮೂಡಿದ್ದು, ಅದನ್ನು ಸರಿಪಡಿಸುವ ಕೆಲಸ ಮಾಡಲಾಗುವುದು ಎಂದು ಹೇಳಿದ್ದಾರೆ. ವಿಧಾನಸಭಾ ಚುನಾವಣಾ ಫಲಿತಾಂಶ ಕೆಟ್ಟ ಕನಸು. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿನ ನಂತರ ಕಾರ್ಯಕರ್ತರು ನಿರಾಶೆಯಲ್ಲಿದ್ದಾರೆ. ಹೀಗಾಗಿ ರಾಜ್ಯಾದ್ಯಂತ ಏಳು ತಂಡಗಳಲ್ಲಿ ಪ್ರವಾಸ ಕೈಗೊಂಡು ಕಾರ್ಯಕರ್ತರಲ್ಲಿ ಉತ್ಸಾಹ ತುಂಬುವ ಕೆಲಸ ಮಾಡಲಾಗುತ್ತಿದೆ. ಈ ಮೂಲಕ ಲೋಕಸಭೆ ಚುನಾವಣೆಗೆ ಬಿಜೆಪಿ ಸಕಲ ರೀತಿಯಲ್ಲಿ ಸಿದ್ದತೆ ನಡೆಸುತ್ತಿದೆ ಎಂದು ಹೇಳಿದರು.

English summary

We are not the reason why Eshwarappa missed the ticket Says Shivaram Hebbar

Source link