Last Updated:
ಕೇಂದ್ರ ಸರ್ಕಾರ ಭಾರತೀಯ ವಿಮಾನ ನಿಲ್ದಾಣಗಳಲ್ಲಿ ವಲಸೆ ಪ್ರಕ್ರಿಯೆಯನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸುವ ಮಹತ್ವದ ನಿರ್ಧಾರ ಕೈಗೊಂಡಿದೆ.
ಭಾರತದಿಂದ ವಿದೇಶಗಳಿಗೆ ಪ್ರಯಾಣಿಸುವ ಪ್ರಯಾಣಿಕರಿಗೆ ಕೇಂದ್ರ ಸರ್ಕಾರವು ಗುಡ್ನ್ಯೂಸ್ ಕೊಟ್ಟಿದೆ. ಇನ್ಮುಂದೆ ನೀವು ಅಂತಾರಾಷ್ಟ್ರೀಯ ವಿಮಾನ ಪ್ರಯಾಣ ಮಾಡುವಾಗ ಬೋರ್ಡಿಂಗ್ ಪಾಸ್‌ಗಾಗಿ ಕ್ಯೂ ನಿಲ್ಲುವ ಅಥವಾ ಕಾಗದದ ಪಾಸ್ ಕಳೆದುಹೋಗುವ ಆತಂಕ ಪಡಬೇಕಾಗೇ ಇಲ್ಲ. ಯಾಕಂದ್ರೆ, ಕೇಂದ್ರ ಸರ್ಕಾರ ಭಾರತೀಯ ವಿಮಾನ ನಿಲ್ದಾಣಗಳಲ್ಲಿ ವಲಸೆ (Immigration) ಪ್ರಕ್ರಿಯೆಯನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸುವ ಮಹತ್ವದ ನಿರ್ಧಾರ ಕೈಗೊಂಡಿದೆ. ಸೆಪ್ಟೆಂಬರ್ 1, 2026 ರಿಂದ ಜಾರಿಗೆ ಬರುವಂತೆ, ಇಮಿಗ್ರೇಷನ್ ಕೌಂಟರ್‌ಗಳಲ್ಲಿ ಭೌತಿಕ ಬೋರ್ಡಿಂಗ್ ಪಾಸ್‌ಗಳಿಗೆ ಮುದ್ರೆ (Stamping) ಹಾಕುವ ಹಳೆಯ ಪದ್ಧತಿಯನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗುತ್ತಿದೆ.














