ಮುಂಬೈ, ಜೂನ್ 21: ಮುಂಬೈ ಮಹಾನಗರದ ಲೋವರ್ ಪರೇಲ್‌ನಲ್ಲಿರುವ ಟ್ರೇಡ್ ವರ್ಲ್ಡ್ ಕಟ್ಟಡ ಕುಸಿದ ಘಟನೆ ಬುಧವಾರ ನಡೆದಿದೆ. ಈ ಅವಘಡದಲ್ಲಿ ಸುಮಾರು 12 ಮಂದಿ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆ ಸ್ಥಳಾಂತರಿಸಲಾಗಿದೆ.
ಈ ಕುರಿತು ಅಧಿಕೃತ ಮಾಹಿತಿ ನೀಡಿರುವ ಬಿಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (BMC) ಅಧಿಕಾರಿಗಳು, ಟ್ರೇಡ್ ವರ್ಲ್ಡ್ ನ ಸಿ ವಿಂಗ್ ನಲ್ಲಿನ ನಾಲ್ಕನೇ ಮಹಡಿಯಿಂದ ಲಿಫ್ಟ್ ಕುಸಿದಿದೆ. ಈ ವೇಳೆ ಲಿಫ್ಟ್‌ನಲ್ಲಿದ್ದ ಹತ್ತಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಘಟನೆ ವೇಳೆ ಲಿಫ್ಟ್‌ನಲ್ಲಿ ಸಿಲುಕಿದ್ದವರನ್ನು ಕಟ್ಟಡದಲ್ಲಿದ್ದ ಸಿಬ್ಬಂದಿ ರಕ್ಷಿಸಿದ್ದಾರೆ. ಸದ್ಯ ಒಟ್ಟು ಗಾಯಾಳುಗಳ ಪೈಕಿ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅವರಿಗೆ ಚಿಕಿತ್ಸೆ ಕಳುಹಿಸಲಾಗಿದೆ. ಅದರಲ್ಲಿ ಎಂಟು ಮಂದಿ ಯನ್ನು ಹತ್ತಿರ ಗ್ಲೋಬಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರತ್ಯೇಕವಾಗಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬೆಳಗ್ಗೆ 10.45ಕ್ಕೆ ಮುಂಬೈ ಫೈರ್ ಬಿಗ್ರೇಡ್ ಸಿಬ್ಬಂದಿ ಪರಿಶೀಲಿಸಿದರು. ಗಾಯಾಳಗಳ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ತಿಳಿದು ಬಂದಿದೆ.