Breaking: Nmma metro: ಪ್ರಯಾಣಿಕರೇ ಗಮನಿಸಿ, ಜುಲೈ 2 ಭಾನುವಾರ ನೇರಳೆ ಮಾರ್ಗದಲ್ಲಿ ಸಂಚಾರ ಸ್ಥಗಿತ, ಏಕೆ? | Namma metro: Trinity-Baiyappanahalli service not available Sunday 7am- 9am due Maintenance work

Bengaluru

oi-Shankrappa Parangi

|

Google Oneindia Kannada News

ಬೆಂಗಳೂರು, ಜೂನ್ 30: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅತ್ಯಧಿಕ ಜನರು ಓಡಾಡುವ ಮಹಾತ್ಮ ಗಾಂಧಿ ರಸ್ತೆ (ಎಂಜಿ ರಸ್ತೆ)ಯ ಮೆಟ್ರೋ ಸಂಚಾರವು ಭಾನುವಾರ ಜುಲೈ 02 ರಂದು ಕೆಲ ಕಾಲ ತಾತ್ಕಾಲಿಕವಾಗಿ ಬಂದ್ ಆಗಿರಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ತಿಳಿಸಿದೆ. ಮೆಟ್ರೋ ಸಂಚಾರ ಸ್ಥಗಿತ ಏಕೆ ಎಂಬ ಕಾರಣ ಇಲ್ಲಿ ತಿಳಿಯೋಣ.

ಬೆಂಗಳೂರು ಮೆಟ್ರೋ ರೈಲು ನಿಗಮದ ವತಿಯಿಂದ ಜುಲೈ 02 ರಂದು ಭಾನುವಾರ ನಗರದ ಟ್ರಿನಿಟಿ ಮೆಟ್ರೋ ನಿಲ್ದಾಣದಿಂದ ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣಗಳ ಮಧ್ಯದ ನೇರಳ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳುತ್ತಿದೆ.

Namma metro: Trinity-Baiyappanahalli service not available Sunday 7am- 9am due Maintenance work

ನಮ್ಮ ಮೆಟ್ರೋ ಅಧಿಕಾರಿಗಳು ಭಾನುವಾರ ಬೆಳಗ್ಗೆ 07 ಗಂಟೆಯಿಂದ 09 ಗಂಟೆಯವರೆಗೆ ತುರ್ತು ನಿರ್ವಹಣಾ ಕಾಮಗಾರಿ ನಡೆಸಲಿದ್ದಾರೆ. ಹೀಗಾಗಿ ಈ ಅವಧಿಯಲ್ಲಿ ಮಹಾತ್ಮ ಗಾಂಧಿ ರಸ್ತೆಯಿಂದ ಬೈಯಪ್ಪನಹಳ್ಳಿ ಮಟ್ರೋ ನಿಲ್ದಾಣವರೆಗೆ BMRCL ವಾಣಿಜ್ಯ ಸೇವೆಯನ್ನು ತಾತ್ಕಲಿಕವಾಗಿ ಸ್ಥಗಿತಗೊಳಿಸಿರುತ್ತದೆ.

ಇನ್ನೂ ಕೆಂಗೇರಿ ಮತ್ತು ಎಂಜಿ ರಸ್ತೆ, ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ, ಕೃಷ್ಣರಾಜಪುರ ಮತ್ತು ವೈಟ್ ಫಿಲ್ಡ್ (ಕಾಡುಗೋಡಿ) ವಿಭಾಗಗಳ ರೈಲುಗಳ ಸೇವೆಯು ಆಯಾ ಟರ್ಮಿನಲ್ ನಿಲ್ದಾಣಗಳಿಂದ ಭಾನುವಾರ ಬೆಳಗ್ಗೆ 07ಗಂಟೆಗೆ ಎಂದಿನಂತೆ ವೇಳಾಪಟ್ಟಿಯ ಪ್ರಕಾರ ಸಂಚರಿಸಲಿದೆ. ಈ ಮಾರ್ಗಗಳು ಮತ್ತು ರೈಲುಗಳಲ್ಲಿ ಯಾವುದೇ ವ್ಯತ್ಯಯ ಉಂಟಾಗುವುದಿಲ್ಲ ಎಂದು ನಮ್ಮ ಮೆಟ್ರೋ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

Namma metro: Trinity-Baiyappanahalli service not available Sunday 7am- 9am due Maintenance work

ನಮ್ಮ ಮೆಟ್ರೋ ಪ್ರಯಾಣಿಕರು ಸದರಿ ಸಂಚಾರ ಮಾರ್ಗದಲ್ಲಿ ಆಗಿರುವ ಬದಲಾವಣೆಯನ್ನು ಗಮನಿಸ ಬೇಕು. ಜೊತೆಗೆ ನಿಗಮಕ್ಕೆ ಸಹರಿಸಬೇಕು. ತುರ್ತು ನಿರ್ವಹಣೆಯಿಂದ ಪ್ರಯಾಣಿಕರಿಗೆ ಆಗುವ ಅನಾನುಕೂಲತೆಗೆ BMRCL ವಿಷಾಧ ವ್ಯಕ್ತಪಡಿಸಿದೆ ಎಂದು ಪ್ರಕಟಣೆಯಲ್ಲಿ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿಗಳು ತಿಳಿಸಿದ್ದಾರೆ.

English summary

Bengaluru Namma metro: Trinity to till Baiyappanahalli station Metro service will not available on July 2nd Sunday 7am to 9am due BMRCL Maintenance work.

Story first published: Friday, June 30, 2023, 14:05 [IST]

Source link