Last Updated:
ಈ ಭೀಕರ ಅಪಘಾತಲ್ಲಿ ಐವರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಈ ಸಂಬಂಧ ಖಾಸಗಿ ಟ್ರಾವೆಲ್ ಬಸ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.
ತೆಲಂಗಾಣ (ಆ.26): ಬಸ್ ಅಪಘಾತಗಳ (Bus Accident) ಸಂಖ್ಯೆ ಹೆಚ್ಚುತ್ತಲೇ ಇದ್ದು, ಸೂರ್ಯಪೇಟೆ ಜಿಲ್ಲೆಯ ಕೊಡಡ ಮಂಡಲದ ದ್ವಾರಕುಂಟ ಬಳಿ ಭೀಕರ ರಸ್ತೆ ಅಪಘಾತ (Road) ಸಂಭವಿಸಿದೆ. ಹೈದರಾಬಾದ್ನಿಂದ (Hyderabad) ಎಲೂರಿಗೆ ಹೋಗುತ್ತಿದ್ದ ಖಾಸಗಿ ಟ್ರಾವೆಲ್ ಬಸ್ ಕಂಟೇನರ್ಗೆ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಐದು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಹಾಗೇ 20 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.














