Bus Accident: ವಿದ್ಯಾರ್ಥಿಗಳಿದ್ದ ರಾಜ್ಯ ಸಾರಿಗೆ ಬಸ್ ಪಲ್ಟಿಯಾಗಿ ಏಳು ಮಂದಿಗೆ ಗಾಯ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

News18


Last Updated:

ಈ ಅಪಘಾತದ ಮಾಹಿತಿ ತಿಳಿದ ತಕ್ಷಣ, ಹೆಚ್ಚಿನ ಸಂಖ್ಯೆಯ ನಾಗರಿಕರು ಸ್ಥಳಕ್ಕೆ ಧಾವಿಸಿ ಮಕ್ಕಳನ್ನು ಸುರಕ್ಷಿತವಾಗಿ ಕರೆದೊಯ್ಯಲು ಮತ್ತು ಗಾಯಾಳುಗಳನ್ನು ರಕ್ಷಿಸಲು ಸಹಾಯ ಮಾಡಿದರು. ಪೊಲೀಸರು ಮತ್ತು ಸ್ಥಳೀಯ ನಾಗರಿಕರು ಗಾಯಗೊಂಡ ವಿದ್ಯಾರ್ಥಿಗಳನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದರು.

News18
News18

ದೌಂಡ್: ಬಾರಾಮತಿ ತಹಸಿಲ್‌ನ ಸುಪೆಯಲ್ಲಿರುವ ವಿದ್ಯಾ ಪ್ರತಿಷ್ಠಾನ ಶಾಲೆಯ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಉರುಳಿ ಬಿದ್ದು 7 ವಿದ್ಯಾರ್ಥಿಗಳು ಗಾಯಗೊಂಡಿರುವ (Bus Accident) ಘಟನೆ ವರದಿಯಾಗಿದೆ.

ಇಂದು ಬೆಳಿಗ್ಗೆ 8:15 ರ ಸುಮಾರಿಗೆ ದೌಂಡ್-ಸುಪೆ ಘಾಟ್‌ನಲ್ಲಿ ಈ ಬಸ್ ಉರುಳಿಬಿದ್ದ ಪರಿಣಾಮ ಕನಿಷ್ಠ ಏಳು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಒಬ್ಬ ವಿದ್ಯಾರ್ಥಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಲೋನಿ ಕಲ್ಭೋರ್‌ನಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಬಾರಾಮತಿ ವಿಭಾಗದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಗಣೇಶ್ ಬಿರಾದಾರ್ ಸೇರಿದಂತೆ ಪೊಲೀಸ್ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿದರು. ‘ಈ ಅಪಘಾತ ಪ್ರಕರಣದಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ’ ಎಂದು ಬಿರಾದಾರ್ ಹೇಳಿದರು.

ಈ ಅಪಘಾತದ ಮಾಹಿತಿ ತಿಳಿದ ತಕ್ಷಣ, ಹೆಚ್ಚಿನ ಸಂಖ್ಯೆಯ ನಾಗರಿಕರು ಸ್ಥಳಕ್ಕೆ ಧಾವಿಸಿ ಮಕ್ಕಳನ್ನು ಸುರಕ್ಷಿತವಾಗಿ ಕರೆದೊಯ್ಯಲು ಮತ್ತು ಗಾಯಾಳುಗಳನ್ನು ರಕ್ಷಿಸಲು ಸಹಾಯ ಮಾಡಿದರು. ಪೊಲೀಸರು ಮತ್ತು ಸ್ಥಳೀಯ ನಾಗರಿಕರು ಗಾಯಗೊಂಡ ವಿದ್ಯಾರ್ಥಿಗಳನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದರು.

‘ಬಸ್ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದಾಗ ಸುಪೆ ಘಾಟ್‌ನಲ್ಲಿ ಅಪಘಾತ ಸಂಭವಿಸಿದೆ. ವಿದ್ಯಾರ್ಥಿಗಳು ಗಾಯಗೊಂಡಿದ್ದು, ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿಗಳನ್ನು ಲೋನಿ ಕಲ್ಭೋರ್‌ನಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಣ್ಣಪುಟ್ಟ ಗಾಯಗಳಾಗಿರುವ ವಿದ್ಯಾರ್ಥಿಗಳನ್ನು ಚೌಫುಲಾದ ಹರ್ಷ್ ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಯುಗೇಂದ್ರ ಪವಾರ್ ಹೇಳಿದರು.

ಈ ಅಪಘಾತದ ನಂತರ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಪೊಲೀಸರು ಹಂಚಿಕೊಂಡ ಪ್ರಾಥಮಿಕ ಮಾಹಿತಿಯ ಪ್ರಕಾರ, ‘ಬಸ್ ಚಾಲಕ ಬೇಜವಾಬ್ದಾರಿಯಿಂದ ಬಸ್ ಓಡಿಸಿದ್ದಾನೆ. ಅವನು ಹ್ಯಾಂಡ್‌ಬ್ರೇಕ್ ಮತ್ತು ಆಕ್ಸಿಲರೇಟರ್ ಅನ್ನು ಸರಿಯಾಗಿ ಬಳಸಲಿಲ್ಲ’ ಎಂದು ತಿಳಿದು ಬಂದಿದೆ.



Source link

Leave a Reply

Your email address will not be published. Required fields are marked *

Search the Archives

Access over the years of investigative journalism and breaking reports