Last Updated:
ಯಾಂತ್ರಿಕ ವೈಫಲ್ಯದ ನಂತರ ಚಾಲಕ ಬಸ್ಸಿನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿ ಅದರಲ್ಲಿದ್ದ ಎಲ್ಲಾ 20 ಪ್ರಯಾಣಿಕರಿಗೆ ಗಾಯಗಳಾಗಿವೆ ಎಂದು ಅಂಬೋರಾ ಪೊಲೀಸ್ ಠಾಣೆಯ ಸಹಾಯಕ ಇನ್ಸ್ಪೆಕ್ಟರ್ ವಿಕ್ರಾಂತ್ ಹಿಂಗೆ ತಿಳಿಸಿದ್ದಾರೆ.
ಬೀಡ್: ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ಗುರುವಾರ ಮುಂಜಾನೆ ತಾಂತ್ರಿಕ ದೋಷ ಕಾಣಿಸಿಕೊಂಡು ಖಾಸಗಿ ಬಸ್ ಪಲ್ಟಿಯಾಗಿ ಸುಮಾರು ಇಪ್ಪತ್ತು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು (Bus Accident) ಪೊಲೀಸರು ತಿಳಿಸಿದ್ದಾರೆ.
ಯಾಂತ್ರಿಕ ವೈಫಲ್ಯದ ನಂತರ ಚಾಲಕ ಬಸ್ಸಿನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿ ಅದರಲ್ಲಿದ್ದ ಎಲ್ಲಾ 20 ಪ್ರಯಾಣಿಕರಿಗೆ ಗಾಯಗಳಾಗಿವೆ ಎಂದು ಅಂಬೋರಾ ಪೊಲೀಸ್ ಠಾಣೆಯ ಸಹಾಯಕ ಇನ್ಸ್ಪೆಕ್ಟರ್ ವಿಕ್ರಾಂತ್ ಹಿಂಗೆ ತಿಳಿಸಿದ್ದಾರೆ.
ಮಾಹಿತಿ ಪಡೆದ ನಂತರ, ಪೊಲೀಸರು ಸ್ಥಳಕ್ಕೆ ತಲುಪಿ ಸ್ಥಳೀಯ ನಿವಾಸಿಗಳ ಸಹಾಯದಿಂದ ಪ್ರಯಾಣಿಕರನ್ನು ಬಸ್ನಿಂದ ರಕ್ಷಿಸಿದರು. “ಹೆಚ್ಚಿನ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅವರನ್ನು ಖಾಸಗಿ ಆಂಬ್ಯುಲೆನ್ಸ್ಗಳಲ್ಲಿ ಅಹಲ್ಯಾನಗರದ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು” ಎಂದು ಅಧಿಕಾರಿ ಹೇಳಿದರು, ಘಟನೆಯ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಹೇಳಿದರು.