Bus Plunges Into Gorge: ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಭಕ್ತರು ತುಂಬಿದ್ದ ಬಸ್! 23 ಮಂದಿಗೆ ಗಾಯ, ನಾಲ್ವರು ಗಂಭೀರ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

News18


Last Updated:

ಸಾಂಬಾದ ಗೋರನ್ ಮತ್ತು ಸುಂಬ್ ಗ್ರಾಮಗಳ ಯಾತ್ರಾರ್ಥಿಗಳು ಬಿಲ್ಲಾವರ್‌ನ ಮಾತಾ ಸುಕ್ರಲಾ ದೇವಿ ದೇವಸ್ಥಾನಕ್ಕೆ ಪ್ರಯಾಣಿಸುತ್ತಿದ್ದಾಗ ಧಾರ್ ರಸ್ತೆಯ ಡಿಂಗಿ ಸಿಂಬ್ಲಿ ಬಳಿ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ.

News18
News18

ಜಮ್ಮು ಕಾಶ್ಮೀರ: ಚಾಲಕನ ನಿಯಂತ್ರಣ ತಪ್ಪಿದ ಭಕ್ತರು ತುಂಬಿದ್ದ ಬಸ್ಸೊಂದು ಆಳವಾದ ಕಂದಕಕ್ಕೆ ಉರುಳಿಬಿದ್ದು (Bus Plunges Into Gorge in JK) 23 ಯಾತ್ರಿಕರು ಗಾಯಗೊಂಡಿರುವ ಘಟನೆ ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ನಡೆದಿದೆ.

ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಬುಧವಾರ ಬಸ್ಸೊಂದು ರಸ್ತೆಯಿಂದ ಜಾರಿ ಕಂದಕಕ್ಕೆ ಉರುಳಿಬಿದ್ದಿದ್ದು, ಇದರ ಪರಿಣಾಮ ಕನಿಷ್ಠ 23 ಯಾತ್ರಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆ ನಡೆದ ಬೆನ್ನಲ್ಲೇ, ಸ್ಥಳೀಯರು ಸ್ಥಳಕ್ಕೆ ಧಾವಿಸಿ ರಕ್ಷಣಾ ಪ್ರಯತ್ನಗಳನ್ನು ಪ್ರಾರಂಭಿಸಿದರು, ನಂತರ ಪೊಲೀಸ್ ತಂಡಗಳು ಕಾರ್ಯಾಚರಣೆಯಲ್ಲಿ ಸೇರಿಕೊಂಡವು. ಎಲ್ಲಾ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಗಾಯಗೊಂಡವರ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಿನಿ ಬಸ್ಸು ದೇವಾಲಯಕ್ಕೆ ತೆರಳುತ್ತಿದ್ದಾಗ ಸಿಂಬ್ಲಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ ಎಂದು ಅಧಿಕಾರಿಯೊಬ್ಬರು ಸ್ಥಳೀಯ ಸುದ್ದಿ ಸಂಸ್ಥೆ ಕಾಶ್ಮೀರ ನ್ಯೂಸ್ ಅಬ್ಸರ್ವರ್ (ಕೆಎನ್‌ಒ)ಗೆ ತಿಳಿಸಿದ್ದಾರೆ. ಅಪಘಾತದಲ್ಲಿ 23 ಪ್ರಯಾಣಿಕರು ಗಾಯಗೊಂಡಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಈತನ್ಮಧ್ಯೆ, ಪೊಲೀಸರು ಈ ಭೀಕರ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದು, ಅಪಘಾತದ ಕಾರಣವನ್ನು ಕಂಡುಹಿಡಿಯಲು ತನಿಖೆ ಆರಂಭಿಸಿದ್ದಾರೆ ಎಂದು ತಿಳಿದು ಬಂದಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed