Last Updated:
By-Elections: ಅಕ್ಟೋಬರ್ 6ರಂದು ಉಪಚುನಾವಣೆ ನಡೆಯಲಿದೆ ಎಂದು ಘೋಷಿಸಿತು. ಸೆಪ್ಟೆಂಬರ್ 16 ರವರೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯಲಿದ್ದು, ಅಕ್ಟೋಬರ್ 9 ರಂದು ಮತ ಎಣಿಕೆ ನಡೆಯಲಿದೆ. ಅಕ್ಟೋಬರ್ 11 ರೊಳಗೆ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಆಯೋಗ ತಿಳಿಸಿದೆ.
ದೆಹಲಿ: ವಿವಿಧ ರಾಜ್ಯಗಳ 5 ವಿಧಾನಸಭಾ ಕ್ಷೇತ್ರ (assembly constituency) ಹಾಗೂ 1 ಲೋಕಸಭಾ ಕ್ಷೇತ್ರಗಳಿಗೆ (Lok Sabha constituency) ಉಪ ಚುನಾವಣೆಗೆ (Ey-Elections) ಮುಹೂರ್ತ ಫಿಕ್ಸ್ ಆಗಿದೆ. ಚುನಾವಣಾ ಆಯೋಗವು (Election Commission) ಪಶ್ಚಿಮ ಬಂಗಾಳ, ತಮಿಳುನಾಡು ಮತ್ತು ಪುದುಚೇರಿಯ ಐದು ವಿಧಾನಸಭಾ ಕ್ಷೇತ್ರಗಳು ಮತ್ತು ಅಸ್ಸಾಂನ ಒಂದು ಲೋಕಸಭಾ ಸ್ಥಾನಕ್ಕೆ ಅಕ್ಟೋಬರ್ 6ರಂದು ಉಪಚುನಾವಣೆ ನಡೆಯಲಿದೆ ಎಂದು ಘೋಷಿಸಿತು. ಸೆಪ್ಟೆಂಬರ್ 16 ರವರೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯಲಿದ್ದು, ಅಕ್ಟೋಬರ್ 9 ರಂದು ಮತ ಎಣಿಕೆ (Vote Counting) ನಡೆಯಲಿದೆ. ಅಕ್ಟೋಬರ್ 11 ರೊಳಗೆ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಆಯೋಗ ತಿಳಿಸಿದೆ.














