Last Updated:
ಶುಕ್ರವಾರ ರಾತ್ರಿ 11.40ರ ಸುಮಾರಿಗೆ ಕೈಪಮಂಗಲಂ ಬಳಿಯ ಪಣಂಬಿಕ್ಕುನ್ನು ಎಂಬಲ್ಲಿ ಈ ದುರಂತ ಸಂಭವಿಸಿದ್ದು, ಅಪಘಾತದಲ್ಲಿ 8 ಮಂದಿ ಎಂಜಿನಿಯರ್ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.
ಕೇರಳ (ಸೆ.05): ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ಶುಕ್ರವಾರ ತಡರಾತ್ರಿ ಭೀಕರ ರಸ್ತೆ ಅಪಘಾತ (Accident) ಸಂಭವಿಸಿದೆ. ತಮಿಳುನಾಡಿನ ಎಂಟು ಎಂಜಿನಿಯರಿಂಗ್ ವಿದ್ಯಾರ್ಥಿಗಳು (Student) ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ ವಿದ್ಯಾರ್ಥಿಗಳ ಕಾರು ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಟ್ರಕ್ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ತೀವ್ರವಾಗಿ ಹಾನಿಗೊಳಗಾಗಿತ್ತು. ಅದರಲ್ಲಿದ್ದ ಎಲ್ಲಾ ಎಂಟು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.














