Last Updated:
ನಟ ದರ್ಶನ್ ಗೆ ಮದುವೆ ಆಹ್ವಾನ ನೀಡದಿರುವ ವಿಚಾರ ಇದೀಗ ಹೆಚ್ಚು ಚರ್ಚೆಗೆ ಕಾರಣವಾಗಿದೆ. ಇದಕ್ಕೆ ಸ್ವತಃ ಚಿಕ್ಕಣ್ಣ ಸ್ಪಷ್ಟನೆ ನೀಡಿದ್ದಾರೆ.
ಸ್ಯಾಂಡಲ್‌ವುಡ್‌ನ ಜನಪ್ರಿಯ ಹಾಸ್ಯನಟ ಚಿಕ್ಕಣ್ಣ (Chikkanna) ಇದೀಗ ತಮ್ಮ ಜೀವನದ ಹೊಸ ಅಧ್ಯಾಯಕ್ಕೆ ಸಜ್ಜಾಗಿದ್ದಾರೆ. ಹಲವು ವರ್ಷಗಳಿಂದ ತಮ್ಮ ವಿಭಿನ್ನ ಹಾಸ್ಯ ಶೈಲಿಯ ಮೂಲಕ ಕನ್ನಡ ಸಿನಿಪ್ರೇಕ್ಷಕರ ಮನಗೆದ್ದಿರುವ ಚಿಕ್ಕಣ್ಣ ಆಗಸ್ಟ್ 29 ಮತ್ತು 30ರಂದು ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ಮೈಸೂರು ಮೂಲದ ಪಾವನಾ ಗೌಡ ಅವರೊಂದಿಗೆ ಚಿಕ್ಕಣ್ಣ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದು, ಮೈಸೂರಿನ ಸ್ಪೆಕ್ಟ್ರಮ್ ಹಾಲ್‌ನಲ್ಲಿ ಅದ್ದೂರಿಯಾಗಿ ಮದುವೆ ಕಾರ್ಯಕ್ರಮ ನಡೆಯಲಿದೆ. ಮದುವೆಗೆ ಚಿತ್ರರಂಗದ ಗಣ್ಯರು, ರಾಜಕೀಯ ಮುಖಂಡರು ಸೇರಿದಂತೆ ಹಲವು ಪ್ರಮುಖರಿಗೆ ಈಗಾಗಲೇ ಆಹ್ವಾನ ನೀಡಲಾಗಿದೆ. ಆದರೆ ನಟ ದರ್ಶನ್ ಗೆ ಮದುವೆ ಆಹ್ವಾನ ನೀಡದಿರುವ ವಿಚಾರ ಇದೀಗ ಹೆಚ್ಚು ಚರ್ಚೆಗೆ ಕಾರಣವಾಗಿದೆ. ಇದಕ್ಕೆ ಸ್ವತಃ ಚಿಕ್ಕಣ್ಣ ಸ್ಪಷ್ಟನೆ ನೀಡಿದ್ದಾರೆ.














