CJP Protest: ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಎಕೆ-47 ಬಳಸಿದ್ದ ಆರೋಪದ ಮೇಲೆ ಕಾನ್‌ಸ್ಟೆಬಲ್ ಅಮಾನತು | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

News18


Last Updated:

ಎಕೆ-47 ರೈಫಲ್ ಬಳಸುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಜಿಲ್ಲಾ ಗುಪ್ತಚರ ಘಟಕ (ಡಿಐಯು)ದಲ್ಲಿ ನೇಮಕಗೊಂಡಿದ್ದ ಕಾನ್‌ಸ್ಟೆಬಲ್ ಅನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ.

News18
News18

ಪಾಟ್ನಾ: ಜುಲೈ 25 ರಂದು ಬಿಹಾರದ ಸಿವಾನ್ ಜಿಲ್ಲೆಯಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಂದರ್ಭದಲ್ಲಿ ಎಕೆ -47 ರೈಫಲ್ (AK-47 Rifle) ಬಳಸುತ್ತಿರುವುದನ್ನು ತೋರಿಸುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಈ ವೀಡಿಯೊದ ಸತ್ಯಾಸತ್ಯತೆಯನ್ನು ಸ್ವತಂತ್ರವಾಗಿ ಪರಿಶೀಲಿಸಲು ಸಾಧ್ಯವಾಗಲಿಲ್ಲ ಎಂದು ಪಿಟಿಐ ವರದಿ ಮಾಡಿದೆ. ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಸಿವಾನ್ ಎಸ್‌ಪಿ ಪೂರಣ್ ಕುಮಾರ್ ಝಾ, ‘ವಿದ್ಯಾರ್ಥಿಗಳ ಪ್ರತಿಭಟನೆಯ ಸಂದರ್ಭದಲ್ಲಿ ಎಕೆ-47 ರೈಫಲ್ ಬಳಸುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಜಿಲ್ಲಾ ಗುಪ್ತಚರ ಘಟಕ (ಡಿಐಯು)ದಲ್ಲಿ ನೇಮಕಗೊಂಡಿದ್ದ ಕಾನ್‌ಸ್ಟೆಬಲ್ ಅನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ. ಅವರ ವಿರುದ್ಧ ಇಲಾಖಾ ಕ್ರಮಗಳನ್ನು ಸಹ ಪ್ರಾರಂಭಿಸಲಾಗಿದೆ’ ಎಂದು ತಿಳಿಸಿದ್ದಾರೆ.

ಜುಲೈ 25 ರಂದು, ನೀಟ್ ಪತ್ರಿಕೆ ಸೋರಿಕೆ ಮತ್ತು ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸ್ ಕ್ರಮವನ್ನು ವಿರೋಧಿಸಿ ಬಿಹಾರ ಬಂದ್‌ಗೆ ಬೆಂಬಲವಾಗಿ ಎಡಪಂಥೀಯ ವಿದ್ಯಾರ್ಥಿ ಸಂಘಟನೆಗಳ ಸದಸ್ಯರು ಹಲವಾರು ಜಿಲ್ಲೆಗಳಲ್ಲಿ ಪ್ರತಿಭಟನೆಗಳನ್ನು ನಡೆಸಿದರು, ಆಗ ಪೊಲೀಸರೊಂದಿಗೆ ಘರ್ಷಣೆ ನಡೆಯಿತು ಎಂದು ವರದಿಯಾಗಿದೆ.

ಇದನ್ನೂ ಓದಿ: Pralhad Joshi: ನೂತನ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಅವರ ವಿದ್ಯಾಭ್ಯಾಸ ಎಷ್ಟು? ಅವರ ಶೈಕ್ಷಣಿಕ ಅರ್ಹತೆಗಳು ಯಾವುವು?

ಪಾಟ್ನಾ, ಸರನ್, ಸಿವಾನ್, ಔರಂಗಾಬಾದ್, ಭಾಗಲ್ಪುರ್, ಸಿತಾಮರ್ಹಿ, ಪೂರ್ಣಿಯಾ ಮತ್ತು ಭೋಜ್‌ಪುರದಲ್ಲಿ ಬಂದ್ ಹಿಂಸಾಚಾರಕ್ಕೆ ತಿರುಗಿದರೆ, ಸಮಸ್ತಿಪುರ್, ನಾವಡಾ, ನಲಂದಾ, ಮಧುಬನಿ ಮತ್ತು ಶೇಖ್‌ಪುರದಲ್ಲಿ ಶಾಂತ ರೀತಿಯಲ್ಲಿ ಪ್ರತಿಭಟನೆಗಳು ನಡೆದವು.

ಪಾಟ್ನಾದ ಡಾಕ್ ಬಂಗಲೆ ಕ್ರಾಸಿಂಗ್‌ನಲ್ಲಿ ಪೊಲೀಸ್ ಸಿಬ್ಬಂದಿ ಮೇಲೆ ಪ್ರತಿಭಟನಾಕಾರರು ಕಲ್ಲು ಮತ್ತು ಇಟ್ಟಿಗೆಗಳನ್ನು ತೂರಿದರು, ನಂತರ ಹಲವಾರು ವಿದ್ಯಾರ್ಥಿಗಳನ್ನು ಬಂಧಿಸಲಾಯಿತು. ಬಿಹಾರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಕೂಡ ಈ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಸಿವಾನ್‌ನಲ್ಲಿ ಬಿಹಾರ ಬಂದ್ ಪ್ರತಿಭಟನೆಯ ಸಂದರ್ಭದಲ್ಲಿ ಪೊಲೀಸರು ವಿದ್ಯಾರ್ಥಿಗಳ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಆರೋಪಿಸಿದರು.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed