Congress Protest: ದೆಹಲಿಯಲ್ಲಿ ಕಾಂಗ್ರೆಸ್ ದಿಢೀರ್ ಪ್ರತಿಭಟನೆ! ಪ್ರಧಾನಿ ನಿವಾಸದ ಮುಂದೆ ಸಿಎಂ ಡಿಕೆಶಿ ಸೇರಿದಂತೆ ಕೈ ನಾಯಕರು ಧರಣಿ! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

ಕಾಂಗ್ರೆಸ್​ ಪ್ರತಿಭಟನೆ


Last Updated:

ದೆಹಲಿ ಪೊಲೀಸರು ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ನಡೆಸಿರುವುದನ್ನು ಖಂಡಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ, ಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರು ಪ್ರಧಾನಿ ನಿವಾಸದ ಬಳಿ ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್​ ಪ್ರತಿಭಟನೆ
ಕಾಂಗ್ರೆಸ್​ ಪ್ರತಿಭಟನೆ

ದೆಹಲಿ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi), ಪ್ರಿಯಾಂಕಾ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆ ಶಿವಕುಮಾರ್ (CM DK Shivakumar) ​ ಸೇರಿದಂತೆ ಹಲವಾರು ಹಿರಿಯ ಕಾಂಗ್ರೆಸ್ ನಾಯಕರು ಪ್ರಧಾನಿ ನಿವಾಸದ ಬಳಿ ದಿಢೀರ್​ ಪ್ರತಿಭಟನೆ ನಡೆಸಿದ್ದಾರೆ. ಜಂತರ್​​ ಮಂತರ್​ನಲ್ಲಿ (Jantar Mantar) ನಡೆಯುತ್ತಿರುವ ಪ್ರತಿಭಟನೆ ಬೆನ್ನಲ್ಲೇ ಕಾಂಗ್ರೆಸ್ (Congress)​ ಪ್ರಧಾನಿ ಮೋದಿ (PM Modi) ಅವರ ನಿವಾಸದ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ವಿರೋಧಿಸಿ ನಿನ್ನೆ ಸೋಮವಾರ ಸಿಜೆಪಿ ಪಾರ್ಟಿ ನಡೆಸಿದ ಸಂಸತ್ ಮೆರವಣಿಗೆಯ ಸಂದರ್ಭದಲ್ಲಿ ದೆಹಲಿ ಪೊಲೀಸರು ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ನಡೆಸಿರುವುದನ್ನು ಖಂಡಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ, ಸಿಎಂ ಡಿಕೆ ಶಿವಕುಮಾರ್​ ಸೇರಿದಂತೆ ಕಾಂಗ್ರೆಸ್ ನಾಯಕರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸಕ್ಕೆ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಇದನ್ನೂ ಓದಿ: Abhijeet Dipke: ಲಾಠಿಚಾರ್ಜ್ ನಡೆದ ಮರುದಿನವೇ ಸಿಜೆಪಿ ಮುಖ್ಯಸ್ಥ ಅಭಿಜಿತ್ ದೀಪ್ಕೆ ಕ್ಷಮೆಯಾಚನೆ! ಯಾರಿಗೆ?

ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ವಿರುದ್ಧ ಪೊಲೀಸ್ ಕ್ರಮವನ್ನು ವಿರೋಧಿಸಿ , ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಸಿಎಂ ಡಿಕೆ ಶಿವಕುಮಾರ್​ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ, ಕೆ.ಸಿ. ವೇಣುಗೋಪಾಲ್ ಮತ್ತು ಪವನ್ ಖೇರಾ ಸೇರಿದಂತೆ ಹಲವಾರು ಪ್ರಮುಖ ನಾಯಕರು ದೆಹಲಿಯ ಲೋಕ ಕಲ್ಯಾಣ್ ಮಾರ್ಗದಲ್ಲಿರುವ ಪ್ರಧಾನಿ ನಿವಾಸದ ಬಳಿ ಪ್ರತಿಭಟನೆ ನಡೆಸಿದರು. ಅಲ್ಲದೇ ಘೋಷಣೆಗಳನ್ನು ಕೂಗಿ ರಾಜೀನಾಮೆಗೆ ಒತ್ತಾಯಿಸಿದರು. ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರ ಪ್ರತಿಭಟನೆ ಬೆನ್ನಲ್ಲೇ ಪ್ರಧಾನಿ ನಿವಾಸದ ಹೊರಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಇನ್ನು, ಪ್ರತಿಭಟನೆ ಬಗ್ಗೆ ಲೋಕಸಭೆ ವಿಪಕ್ಷ ನಾಯಕ ರಾಹುಲ್​ ಗಾಂಧಿ ತಮ್ಮ ಎಕ್ಸ್​ ಖಾತೆಯಲ್ಲಿ ಪೋಸ್ಟ್​ ಮಾಡಿದ್ದಾರೆ. ‘ನಿನ್ನೆ ಯುವ ವಿದ್ಯಾರ್ಥಿಗಳ ಮೇಲೆ ನಡೆದ ದೌರ್ಜನ್ಯಕ್ಕೆ ಪ್ರಧಾನಿ ಮೋದಿಯವರಿಂದ ಉತ್ತರವನ್ನು ಆಗ್ರಹಿಸಿ ನಾವು ಅವರ ಮನೆ ಬಳಿ ಪ್ರತಿಭಟನೆ ನಡೆಸಿದ್ದೇವೆ. ಸರ್ಕಾರವು ಯಾವುದೇ ಹೊಣೆಗಾರಿಕೆಯನ್ನು ತೆಗೆದುಕೊಳ್ಳಲು ಬಯಸುತ್ತಿಲ್ಲ, ಅಥವಾ ಈ ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಸಲು ಇಷ್ಟಪಡುತ್ತಿಲ್ಲ. ಭಾರತದ ಯುವಜನತೆಯ ಭವಿಷ್ಯವನ್ನು ಹಾಳುಗೆಡವಿದ್ದಕ್ಕಾಗಿ ಪ್ರಧಾನಿ ಮತ್ತು ಗೃಹಸಚಿವರು ತಕ್ಷಣ ರಾಜೀನಾಮೆ ನೀಡಬೇಕು’ ಎಂದು ರಾಹುಲ್​ ಗಾಂಧಿ ಆಗ್ರಹಿಸಿದ್ದಾರೆ.
ನೀಟ್​ ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಮೋದಿ ಮಹತ್ವದ ಸಂದೇಶ!

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದದ ಮಧ್ಯೆ ಪ್ರಧಾನಿ ನರೇಂದ್ರ ಮೋದಿ NDA ಸಂಸದೀಯ ಪಕ್ಷದ ‘ಮಂಗಲ್ ಮಿಲನ್’ ಸಭೆಯಲ್ಲಿ ಮಹತ್ವದ ಸಂದೇಶ ನೀಡಿದ್ದಾರೆ. ಮಂಗಲ್ ಮಿಲನ್ ಎಂದು ಕರೆಯಲ್ಪಡುವ ಎನ್‌ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ ಭಾಗವಹಿಸಿದ್ದ ಮೋದಿ, ವಿದ್ಯಾರ್ಥಿಗಳನ್ನು ಪ್ರಚೋದಿಸುವ ಬದಲು ಸರಿಯಾದ ಮಾರ್ಗದಲ್ಲಿ ಮಾರ್ಗದರ್ಶನ ನೀಡುವಂತೆ ಮನವಿ ಮಾಡಿದರು. ಅಲ್ಲದೇ ಮಕ್ಕಳನ್ನು ಕೆರಳಿಸಬೇಡಿ ಎಂದು ಕರೆ ಕೊಟ್ಟಿದ್ದಾರೆ.

ಪ್ರಧಾನಿ ಮೋದಿ ಹೇಳಿದ್ದೇನು?

ವಿದ್ಯಾರ್ಥಿಗಳನ್ನು ಪ್ರಚೋದಿಸುವ ಬದಲು ಸರಿಯಾದ ಮಾರ್ಗದಲ್ಲಿ ಮಾರ್ಗದರ್ಶನ ನೀಡುವಂತೆ ಎನ್‌ಡಿಎ ಸಂಸದರಿಗೆ ಪ್ರಧಾನಿ ಮೋದಿ ಮನವಿ ಮಾಡಿದರು. ‘ತಪ್ಪು ಹಾದಿಯಲ್ಲಿ ಹೋಗುವುದು ಸುಲಭ, ಆದರೆ ಸರಿಯಾದ ಹಾದಿಗೆ ಹಿಂತಿರುಗುವುದು ಕಷ್ಟ. ನಾವು ಅವರನ್ನು ಸರಿಯಾದ ಹಾದಿಗೆ ತರಬೇಕು. ಇದು ನಮ್ಮ ಜವಾಬ್ದಾರಿ’ ಎಂದು ಹೇಳಿದರು. ಯುವಕರನ್ನು ದಾರಿ ತಪ್ಪಿಸಲಾಗುತ್ತಿದೆ ಎಂದು ಪ್ರಧಾನಿ ಆತಂಕ ವ್ಯಕ್ತಪಡಿಸಿದರು. ಅವರನ್ನು ಪ್ರಚೋದಿಸಬೇಡಿ, ಸರಿಯಾದ ಮಾರ್ಗ ತೋರಿಸಿ ಎಂದು ಸಂಸದರಿಗೆ ಸಲಹೆ ನೀಡಿದರು. ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಯ ನಂತರ ಪ್ರಧಾನಿ ಈ ಹೇಳಿಕೆ ನೀಡಿದ್ದಾರೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed