Last Updated:
ದೆಹಲಿ ಪೊಲೀಸರು ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ನಡೆಸಿರುವುದನ್ನು ಖಂಡಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ, ಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರು ಪ್ರಧಾನಿ ನಿವಾಸದ ಬಳಿ ಪ್ರತಿಭಟನೆ ನಡೆಸಿದರು.
ದೆಹಲಿ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi), ಪ್ರಿಯಾಂಕಾ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆ ಶಿವಕುಮಾರ್ (CM DK Shivakumar) ಸೇರಿದಂತೆ ಹಲವಾರು ಹಿರಿಯ ಕಾಂಗ್ರೆಸ್ ನಾಯಕರು ಪ್ರಧಾನಿ ನಿವಾಸದ ಬಳಿ ದಿಢೀರ್ ಪ್ರತಿಭಟನೆ ನಡೆಸಿದ್ದಾರೆ. ಜಂತರ್ ಮಂತರ್‌ನಲ್ಲಿ (Jantar Mantar) ನಡೆಯುತ್ತಿರುವ ಪ್ರತಿಭಟನೆ ಬೆನ್ನಲ್ಲೇ ಕಾಂಗ್ರೆಸ್ (Congress) ಪ್ರಧಾನಿ ಮೋದಿ (PM Modi) ಅವರ ನಿವಾಸದ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ವಿರೋಧಿಸಿ ನಿನ್ನೆ ಸೋಮವಾರ ಸಿಜೆಪಿ ಪಾರ್ಟಿ ನಡೆಸಿದ ಸಂಸತ್ ಮೆರವಣಿಗೆಯ ಸಂದರ್ಭದಲ್ಲಿ ದೆಹಲಿ ಪೊಲೀಸರು ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ನಡೆಸಿರುವುದನ್ನು ಖಂಡಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ, ಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸಕ್ಕೆ ಪ್ರತಿಭಟನಾ ಮೆರವಣಿಗೆ ನಡೆಸಿದರು.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದದ ಮಧ್ಯೆ ಪ್ರಧಾನಿ ನರೇಂದ್ರ ಮೋದಿ NDA ಸಂಸದೀಯ ಪಕ್ಷದ ‘ಮಂಗಲ್ ಮಿಲನ್’ ಸಭೆಯಲ್ಲಿ ಮಹತ್ವದ ಸಂದೇಶ ನೀಡಿದ್ದಾರೆ. ಮಂಗಲ್ ಮಿಲನ್ ಎಂದು ಕರೆಯಲ್ಪಡುವ ಎನ್‌ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ ಭಾಗವಹಿಸಿದ್ದ ಮೋದಿ, ವಿದ್ಯಾರ್ಥಿಗಳನ್ನು ಪ್ರಚೋದಿಸುವ ಬದಲು ಸರಿಯಾದ ಮಾರ್ಗದಲ್ಲಿ ಮಾರ್ಗದರ್ಶನ ನೀಡುವಂತೆ ಮನವಿ ಮಾಡಿದರು. ಅಲ್ಲದೇ ಮಕ್ಕಳನ್ನು ಕೆರಳಿಸಬೇಡಿ ಎಂದು ಕರೆ ಕೊಟ್ಟಿದ್ದಾರೆ.
ವಿದ್ಯಾರ್ಥಿಗಳನ್ನು ಪ್ರಚೋದಿಸುವ ಬದಲು ಸರಿಯಾದ ಮಾರ್ಗದಲ್ಲಿ ಮಾರ್ಗದರ್ಶನ ನೀಡುವಂತೆ ಎನ್‌ಡಿಎ ಸಂಸದರಿಗೆ ಪ್ರಧಾನಿ ಮೋದಿ ಮನವಿ ಮಾಡಿದರು. ‘ತಪ್ಪು ಹಾದಿಯಲ್ಲಿ ಹೋಗುವುದು ಸುಲಭ, ಆದರೆ ಸರಿಯಾದ ಹಾದಿಗೆ ಹಿಂತಿರುಗುವುದು ಕಷ್ಟ. ನಾವು ಅವರನ್ನು ಸರಿಯಾದ ಹಾದಿಗೆ ತರಬೇಕು. ಇದು ನಮ್ಮ ಜವಾಬ್ದಾರಿ’ ಎಂದು ಹೇಳಿದರು. ಯುವಕರನ್ನು ದಾರಿ ತಪ್ಪಿಸಲಾಗುತ್ತಿದೆ ಎಂದು ಪ್ರಧಾನಿ ಆತಂಕ ವ್ಯಕ್ತಪಡಿಸಿದರು. ಅವರನ್ನು ಪ್ರಚೋದಿಸಬೇಡಿ, ಸರಿಯಾದ ಮಾರ್ಗ ತೋರಿಸಿ ಎಂದು ಸಂಸದರಿಗೆ ಸಲಹೆ ನೀಡಿದರು. ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಯ ನಂತರ ಪ್ರಧಾನಿ ಈ ಹೇಳಿಕೆ ನೀಡಿದ್ದಾರೆ.














