Congress: ಪ್ರತಿಭಟನೆಗೂ ಮುನ್ನವೇ ರಾಹುಲ್​ ಗಾಂಧಿಗೆ ಹಿನ್ನೆಡೆ! ವಿಪಕ್ಷಗಳ ಮನವಿ ತಿರಸ್ಕರಿಸಿದ ಮುಖ್ಯ ನ್ಯಾಯಮೂರ್ತಿ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

Image: ANI


Last Updated:

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ‘ಇಂಡಿಯಾ’ ಒಕ್ಕೂಟದ ಪ್ರಮುಖ ನಾಯಕರು ಮುಖ್ಯ ನ್ಯಾಯಮೂರ್ತಿ ಜಸ್ಟಿಸ್ ಸೂರ್ಯ ಕಾಂತ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲು ಸಮಯ ಕೋರಿದ್ದರು.

Image: ANI
Image: ANI

ದೆಹಲಿ: ಕಾಕ್ರೋಚ್​ ಜನತಾ ಪಾರ್ಟಿ (Cockroach Janata Party) ಬೆನ್ನಲ್ಲೇ ವಿಪಕ್ಷಗಳು ಕೂಡ ಹೋರಾಟಕ್ಕಿಳಿದಿವೆ. ಎಸ್‌ಐಆರ್ (SIR) ಮತದಾರರ ಪಟ್ಟಿ ಅಕ್ರಮ ಮತ್ತು ಚುನಾವಣಾ ಆಯೋಗದ ಮುಖ್ಯಸ್ಥರ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ರಾಹುಲ್ ಗಾಂಧಿ (Rahul Gandhi) ನೇತೃತ್ವದಲ್ಲಿ ಬೃಹತ್ ಪಾದಯಾತ್ರೆ ನಡೆಸಲು ಮುಂದಾಗಿದೆ. ಆದ್ರೆ, ಪ್ರತಿಭಟನೆ ಶುರುವಾಗುವ ಮುನ್ನವೇ ವಿಪಕ್ಷಗಳಿಗೆ ಹಿನ್ನೆಡೆಯಾಗಿದೆ.

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ‘ಇಂಡಿಯಾ’ ಒಕ್ಕೂಟದ ಪ್ರಮುಖ ನಾಯಕರು ಮುಖ್ಯ ನ್ಯಾಯಮೂರ್ತಿ ಜಸ್ಟಿಸ್ ಸೂರ್ಯ ಕಾಂತ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲು ಸಮಯ ಕೋರಿದ್ದರು. ಆದರೆ, ಸಿಜೆಐ ಅವರು ಈ ಮನವಿಯನ್ನು ಅಧಿಕೃತವಾಗಿ ತಿರಸ್ಕರಿಸಿದ್ದು, ಈ ಕುರಿತು ಇಮೇಲ್ ಮೂಲಕ ಸ್ಪಷ್ಟನೆ ನೀಡಿದ್ದಾರೆ ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ.

ವಿಪಕ್ಷಗಳ ಬೇಡಿಕೆಗಳೇನು?

  • SIR ಪ್ರಕ್ರಿಯೆಗೆ ತಕ್ಷಣದ ತಡೆ ನೀಡಬೇಕು.
  • ದೇಶಾದ್ಯಂತ ಮತಗಳ್ಳತನ ನಿಲ್ಲಬೇಕು.
  • ಚುನಾವಣಾ ಆಯೋಗ ಅಥವಾ ಸಂಬಂಧಿತ ಜವಾಬ್ದಾರಿಯಿಂದ ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಬೇಕು.
ಮತ್ತೊಂದೆಡೆ ದೆಹಲಿಯಲ್ಲಿ ಸಿಜೆಪಿ ಪ್ರತಿಭಟನೆ ಹಿನ್ನೆಲೆ ರೈಲು ಸಂಚಾರ ಹಾಗೂ ಇಂಟರ್ನೆಟ್ ಸ್ಥಗಿತದ ಬಗ್ಗೆ ಸಲ್ಲಿಕೆಯಾಗಿದ್ದ ನ್ಯಾಯಾಂಗ ನಿಂಧನೆ ಅರ್ಜಿ ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿ ನಡೀತು. ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ವಿ. ಮೋಹನ ಅವರಿದ್ದ ಕೋರ್ಟ್ ಪೀಠ, ಶಾಂತಿಯುತವಾಗಿ ಪ್ರತಿಭಟನೆ ನಡೆಸುವುದು ಸಂವಿಧಾನಬದ್ಧ ಹಕ್ಕು. ಬ್ಯಾರಿಕೇಡ್‌ಗಳು ಮತ್ತು ಇಂಟರ್ನೆಟ್ ನಿಷೇಧದಿಂದ ಜನರ ಸಂಚಾರ ಹಾಗೂ ಹಕ್ಕುಗಳನ್ನು ಮೊಟಕುಗೊಳಿಸಬಾರದು ಅಂತ ಅಭಿಪ್ರಾಯ ವ್ಯಕ್ತಪಡಿಸ್ತು. ಅಲ್ಲದೆ ಕೇಂದ್ರಕ್ಕೆ ನೋಟಿಸ್ ಜಾರಿ ಮಾಡಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed