Last Updated:
ರಾಜ್ಯ ವಿಧಾನಸಭಾ ಚುನಾವಣೆಗೆ 6 ತಿಂಗಳು ಬಾಕಿ ಇರುವಂತೆಯೇ ಪಂಜಾಬ್ನಲ್ಲಿ ಪಕ್ಷದ ವ್ಯವಹಾರಗಳನ್ನು ಸರಿಪಡಿಸಲು ಕಾಂಗ್ರೆಸ್ ಮುಂದಾಗಿರುವ ಬೆನ್ನಲ್ಲೇ, ಅಮರಿಂದರ್ ಸಿಂಗ್ ಅವರು ಅಂತಿಮವಾಗಿ ತಮ್ಮ ಸ್ಥಾನದಿಂದ ಕೆಳಗಿಳಿದಿದ್ದಾರೆ.
ಪಂಜಾಬ್ (ಅ.01): ಮುಂದಿನ ವರ್ಷ ಪಂಜಾಬ್ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಭರ್ಜರಿ ತಯಾರಿ ನಡೆಸಿದೆ. ಇದರ ನಡುವೆ ಪಂಜಾಬ್ ಕಾಂಗ್ರೆಸ್ ಸಂಘಟನೆಯಲ್ಲಿ ಅಲ್ಲೋಲ-ಕಲ್ಲೋಲವಾಗಿದ್ದು, ಪಂಜಾಬ್ ಕಾಂಗ್ರೆಸ್ (Congress) ಅಧ್ಯಕ್ಷ ಸ್ಥಾನಕ್ಕೆ ಅಮರಿಂದರ್ ಸಿಂಗ್ ರಾಜಾ ವಾರಿಂಗ್ (Amarinder Singh Raja Warring) ರಾಜೀನಾಮೆ ನೀಡಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆಗೆ 6 ತಿಂಗಳು ಬಾಕಿ ಇರುವಂತೆಯೇ ಪಂಜಾಬ್ನಲ್ಲಿ ಪಕ್ಷದ ವ್ಯವಹಾರಗಳನ್ನು ಸರಿಪಡಿಸಲು ಕಾಂಗ್ರೆಸ್ ಮುಂದಾಗಿರುವ ಬೆನ್ನಲ್ಲೇ, ಅಮರಿಂದರ್ ಸಿಂಗ್ ಅವರು ಅಂತಿಮವಾಗಿ ತಮ್ಮ ಸ್ಥಾನದಿಂದ ಕೆಳಗಿಳಿದಿದ್ದಾರೆ. ಮುಂದಿನ 24 ರಿಂದ 48 ಗಂಟೆಗಳಲ್ಲಿ ಪಕ್ಷವು ಅವರ ಉತ್ತರಾಧಿಕಾರಿಯನ್ನು ಘೋಷಿಸುವ ನಿರೀಕ್ಷೆಯಿದೆ. ಮಾಜಿ ಸಚಿವ ವಿಜಯ್ ಇಂದರ್ ಸಿಂಗ್ಲಾ ಈ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಲ್ಲಿ ಬದಲಾವಣೆಗೆ ಕಾಂಗ್ರೆಸ್ ಹೈಕಮಾಂಡ್ ಪ್ಲಾನ್ ಮಾಡಿತ್ತು ಎಂದು ಮೂಲಗಳು ತಿಳಿಸಿದೆ. ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಬದಲಿಗೆ ಪಕ್ಷವು ವಿಜಯ್ ಇಂದರ್ ಸಿಂಗ್ಲಾ ಅವರನ್ನು ಪಂಜಾಬ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಿಸಬಹುದು. ಕಳೆದ ಕೆಲವು ತಿಂಗಳುಗಳಿಂದ ಪಂಜಾಬ್ ಕಾಂಗ್ರೆಸ್ನಲ್ಲಿ ನಿರಂತರ ಕಲಹ ನಡೆಯುತ್ತಿದ್ದು, ಹೀಗಾಗಿ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಅವರು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ತಮ್ಮ ರಾಜೀನಾಮೆಯನ್ನು ಹೈಕಮಾಂಡ್ಗೆ ಸಲ್ಲಿಸಿದ್ದಾರೆ. ಪಂಜಾಬ್ ಕಾಂಗ್ರೆಸ್ನೊಳಗಿನ ಪರಿಸ್ಥಿತಿಯ ಕುರಿತು ಚರ್ಚಿಸಲು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ರಾಜಾ ವಾರಿಂಗ್ ಅವರಿಗೆ ಬುಲಾವ್ ನೀಡಿದ್ದಾರೆ. ಪ್ರಕಾರ, ಪಂಜಾಬ್ ಕಾಂಗ್ರೆಸ್ ಘಟಕದೊಳಗಿನ ದೀರ್ಘಕಾಲದ ಆಂತರಿಕ ಸಂಘರ್ಷದ ಮಧ್ಯೆ ರಾಜಾ ವಾರಿಂಗ್ ಬುಧವಾರ ರಾಜೀನಾಮೆ ನೀಡಲು ನಿರ್ಧರಿಸಿದ್ರು. ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಅವರ ರಾಜೀನಾಮೆಯು ಹಲವಾರು ರಾಜ್ಯ ಕಾಂಗ್ರೆಸ್ ಸಮಿತಿಗಳಲ್ಲಿ ಪ್ರಕ್ಷುಬ್ಧತೆಗೆ ಕಾರಣವಾಗಬಹುದು ಎಂದು ಹೇಳಲಾಗ್ತಿದೆ.
ಅಕ್ಟೋಬರ್ 2 ರಂದು ಗಾಂಧಿ ಜಯಂತಿಯಂದು, ಕಾಂಗ್ರೆಸ್ ತನ್ನ ಪಂಜಾಬ್ ಘಟಕದ ಹೊಸ ರಾಜ್ಯ ಅಧ್ಯಕ್ಷರ ಹೆಸರನ್ನು ಘೋಷಿಸಬಹುದು. ಅಖಿಲ ಭಾರತ ಕಾಂಗ್ರೆಸ್ನ ಸಹ-ಖಜಾಂಚಿ ವಿಜಯ್ ಇಂದರ್ ಸಿಂಗ್ಲಾ, ಅವರು ಅಧ್ಯಕ್ಷ ಹುದ್ದೆಗೆ ಸ್ಪರ್ಧೆಯಲ್ಲಿ ಮುಂಚೂಣಿಯಲ್ಲಿದ್ದಾರೆ.














