Cricketer Arrest: ಡೆಲ್ಲಿ ಕ್ಯಾಪಿಟಲ್ಸ್​​ ಸ್ಟಾರ್ ಕ್ರಿಕೆಟಿಗನನ್ನ ಬಂಧಿಸಲು ಕೋಲ್ಕತ್ತಾ ಹೈಕೋರ್ಟ್ ಆದೇಶ! ಕಾರಣವೇನು? | ಕ್ರೀಡಾ ಸುದ್ದಿ | ACTPnews

ಡೆಲ್ಲಿ ಕ್ಯಾಪಿಟಲ್ಸ್


Last Updated:

ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಭಾಗವಾಗಿರುವ ಸ್ಟಾರ್ ಆಟಗಾರನನ್ನು ತಕ್ಷಣ ಬಂಧಿಸುವಂತೆ ಕೋಲ್ಕತ್ತಾ ಹೈಕೋರ್ಟ್ ಪೊಲೀಸರಿಗೆ ಆದೇಶಿಸಿದೆ.

ಡೆಲ್ಲಿ ಕ್ಯಾಪಿಟಲ್ಸ್
ಡೆಲ್ಲಿ ಕ್ಯಾಪಿಟಲ್ಸ್

ಭಾರತೀಯ ಕ್ರಿಕೆಟ್ (Cricket) ಜಗತ್ತನ್ನೇ ಬೆಚ್ಚಿಬೀಳಿಸುವ ಮತ್ತೊಂದು ಸುದ್ದಿ ಹೊರ ಬಂದಿದೆ. ಐಪಿಎಲ್‌(IPL)ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡಕ್ಕಾಗಿ ಆಡುತ್ತಿರುವ ಪಶ್ಚಿಮಬಂಗಾಳದ ಯುವ ಆರಂಭಿಕ ಆಟಗಾರ ಅಭಿಷೇಕ್ ಪೋರೆಲ್ (Abhishek Porel) ಮೇಲೆ ಗಂಭೀರ ಆರೋಪ ಕೇಳಿ ಬಂದಿದೆ. ಮದುವೆಯ ಭರವಸೆ ನೀಡಿ ಮೋಸ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಈ ಪ್ರಕರಣದಲ್ಲಿ 23 ವರ್ಷದ ಸ್ಟಾರ್ ಕ್ರಿಕೆಟಿಗನನ್ನು ತಕ್ಷಣ ಬಂಧಿಸುವಂತೆ ಕೋಲ್ಕತ್ತಾ ಹೈಕೋರ್ಟ್ (Kolkata High Court) ಭಾನುವಾರ ಪೊಲೀಸರಿಗೆ ಆದೇಶಿಸಿದೆ.

ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಮಾಗ್ರಾ ಪೊಲೀಸ್ ಠಾಣೆಯಲ್ಲಿ ಅಭಿಷೇಕ್ ಪೋರೆಲ್ ವಿರುದ್ಧ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ದೂರು ನೀಡಿದ್ದರು. ಈ ದೂರಿನಲ್ಲಿ ಸ್ಟಾರ್ ಆಟಗಾರನ ವಿರುದ್ಧ ಅತ್ಯಾಚಾರ, ಬೆದರಿಕೆ ಮತ್ತು ಇತರ ಗಂಭೀರ ಅಪರಾಧಗಳ ಆರೋಪ ಮಾಡಿದ್ದರು. ಈ ದೂರಿನ ಮೇಲೆ ದಾಖಲಾದ ಕ್ರಿಮಿನಲ್ ಕೇಸ್‌ನಲ್ಲಿ, ಅಭಿಷೇಕ್ ಪೊರೆಲ್ ಮತ್ತು ಇನ್ನೊಬ್ಬ ಆರೋಪಿಯನ್ನು ತಕ್ಷಣ ಬಂಧಿಸುವಂತೆ ಕೋಲ್ಕತಾ ಹೈಕೋರ್ಟ್ ಬಂಗಾಳ ಪೊಲೀಸರಿಗೆ ಆದೇಶ ನೀಡಿದೆ.

ಹೈಕೋರ್ಟ್ ಗಂಭೀರ, ತಕ್ಷಣ ಬಂಧಿಸಲು ಆದೇಶ

ಸಂತ್ರಸ್ತ ವಿದ್ಯಾರ್ಥಿನಿ ನ್ಯಾಯಕ್ಕಾಗಿ ಕೋಲ್ಕತ್ತಾ ಹೈಕೋರ್ಟ್‌ಗೆ ಮನವಿ ಮಾಡಿದ್ದರು. ನ್ಯಾಯಾಲಯವು ಈ ಪ್ರಕರಣವನ್ನು ತುಂಬಾ ಗಂಭೀರವಾಗಿ ತೆಗೆದುಕೊಂಡಿದೆ. ಈ ಪ್ರಕರಣದಲ್ಲಿ ಸ್ಟಾರ್ ಆಟಗಾರ ಅಭಿಷೇಕ್ ಪೊರೆಲ್ ಮೇಲೆ ಅತ್ಯಾಚಾರ ಮತ್ತು ಕ್ರಿಮಿನಲ್ ಬೆದರಿಕೆಯ ಗಂಭೀರ ಆರೋಪಗಳನ್ನು ದಾಖಲಿಸಲಾಗಿದೆ.

ಹೈಕೋರ್ಟ್ ಫುಲ್ ಆಲರ್ಟ್!

ನ್ಯಾಯಾಲಯವು ಸಂತ್ರಸ್ತೆಯ ಖಾಸಗಿ ಜೀವನವನ್ನು ರಕ್ಷಿಸುವುದು ಬಹಳ ಮುಖ್ಯ ಎಂದು ಸ್ಪಷ್ಟಪಡಿಸಿದೆ. ಯುವತಿಗೆ ಸಂಬಂಧಿಸಿದ ಯಾವುದೇ ಕೆಟ್ಟ ಅಥವಾ ಅಸಭ್ಯ ಮಾಹಿತಿ ಹೊರಗೆ ಬರದಂತೆ ನೋಡಿಕೊಳ್ಳಬೇಕು ಎಂದು ಒತ್ತಿ ಹೇಳಿದೆ. ಇದಕ್ಕಾಗಿ, ಅಭಿಷೇಕ್ ಪೊರೆಲ್ ಅವರ ಮೊಬೈಲ್ ಫೋನ್‌ಗಳು, ಲ್ಯಾಪ್‌ಟಾಪ್‌ಗಳು ಮತ್ತು ಇತರ ಎಲ್ಲಾ ಸಾಧನಗಳನ್ನು ತಕ್ಷಣವೇ ವಶಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಆದೇಶಿಸಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಆಗಸ್ಟ್ 11ಕ್ಕೆ ಮುಂದೂಡಲಾಗಿದೆ.



Source link

Leave a Reply

Your email address will not be published. Required fields are marked *

Search the Archives

Access over the years of investigative journalism and breaking reports