Crime News: ಮೇಕೆ ಮೇಯಿಸುತ್ತಿದ್ದಾಗ ಬಾಲಕಿಯ ಮೇಲೆ ಇಬ್ಬರು ಅಪ್ರಾಪ್ತರಿಂದ ಸಾಮೂಹಿಕ ಅತ್ಯಾಚಾರ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

News18


Last Updated:

ಮೇ 23 ರ ಸಂಜೆ ಗ್ರಾಮದ ಹೊರಗೆ ಮೇಕೆ ಮೇಯಿಸುತ್ತಿದ್ದಾಗ ಆರೋಪಿಯು ಬಾಲಕಿಗೆ ಲಂಚದ ಆಮಿಷವೊಡ್ಡಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಘಟನೆಯ ಸಮಯದಲ್ಲಿ ಆರೋಪಿಯು ಜಾತಿ ನಿಂದನೆಗಳನ್ನು ಬಳಸಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

News18
News18

ಬಲ್ಲಿಯಾ: ಒಂಬತ್ತು ವರ್ಷದ ದಲಿತ ಬಾಲಕಿಯ ಮೇಲೆ ಆಕೆಯ ಗ್ರಾಮದ ಇಬ್ಬರು ಅಪ್ರಾಪ್ತ ಬಾಲಕರು ಸಾಮೂಹಿಕ ಅತ್ಯಾಚಾರ (Gang Rape) ಎಸಗಿದ್ದಾರೆ ಎಂದು ಪೊಲೀಸರು ಮಂಗಳವಾರ (Crime News) ತಿಳಿಸಿದ್ದಾರೆ.

ಈ ಘಟನೆ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯ ಹಲ್ಡಿ ಪ್ರದೇಶದಲ್ಲಿ ನಡೆದಿದ್ದು, ಹಲ್ಡಿ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯ ನಿವಾಸಿ ಬಾಲಕಿಯ ತಂದೆ ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಬೈರಿಯಾ ಉಪ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಫಾಹಿಮ್ ಖುರೇಷಿ ಮಾತನಾಡಿ, ಆರೋಪಿ ಬಾಲಕರಿಬ್ಬರು 11 ರಿಂದ 12 ವರ್ಷ ವಯಸ್ಸಿನವರಾಗಿದ್ದು, ಬಾಲಕಿಗೆ ಪರಿಚಿತರಾಗಿದ್ದರು ಎಂದು ಹೇಳಿರುವುದಾಗಿ ಈಟಿವಿ ಭಾರತ್ ವರದಿ ಮಾಡಿದೆ.

ಇದನ್ನೂ ಓದಿ: Modi Govt @ 12 Years: 12 ವರ್ಷಗಳಲ್ಲಿ ಅತೀ ಹೆಚ್ಚು ಚರ್ಚೆಯಾದ ಮೋದಿ ಸರ್ಕಾರದ 12 ಪ್ರಮುಖ ನಿರ್ಧಾರಗಳು

ದೂರಿನ ಆಧಾರದ ಮೇಲೆ, ಸೋಮವಾರ ಇಬ್ಬರು ಹುಡುಗರ ವಿರುದ್ಧ ಸಾಮೂಹಿಕ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 70(2) ರ ಅಡಿಯಲ್ಲಿ, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ನಿಬಂಧನೆಗಳು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮಂಗಳವಾರ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಜಿಲ್ಲಾ ಮಹಿಳಾ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಅವರು ಹೇಳಿದರು. ಬಾಲಕಿಯ ಹೇಳಿಕೆಯನ್ನು ದಾಖಲಿಸುವ ಪ್ರಕ್ರಿಯೆಗಳು ನಡೆಯುತ್ತಿದ್ದು, ಪೊಲೀಸರು ಅಗತ್ಯ ಕಾನೂನು ಕ್ರಮ ಕೈಗೊಳ್ಳುತ್ತಿದ್ದಾರೆ ಎಂದು ಅವರು ಹೇಳಿದರು.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed