Last Updated:
ದೃಢೀಕೃತ ಟಿಕೆಟ್ ಪಡೆಯಲು ಸಹಾಯ ಮಾಡುವುದಾಗಿ ಕಪಿಲೇಶ್ವರ ಭರವಸೆ ನೀಡಿ ವಾಲ್ವ್ ಕೋಣೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳೆ ತನ್ನ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ನಂತರ ಘಟನೆಯನ್ನು ಯಾರಿಗೂ ಹೇಳದಂತೆ ಬೆದರಿಕೆ ಹಾಕಿ 2,000 ರೂ. ಕೊಟ್ಟಿದ್ದಾನೆ.
ರೂರ್ಕೆಲಾ: ಒಡಿಶಾದ ರೂರ್ಕೆಲಾ ರೈಲು ನಿಲ್ದಾಣದ ಆವರಣದಲ್ಲಿ ಬೆಂಗಳೂರಿಗೆ ರೈಲು ಟಿಕೆಟ್ ವ್ಯವಸ್ಥೆ ಮಾಡುವುದಾಗಿ ಆಮಿಷ ಒಡ್ಡಿ ಮಹಿಳಾ ಪ್ರಯಾಣಿಕಳ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 54 ವರ್ಷದ ರೈಲ್ವೆ ಉದ್ಯೋಗಿಯನ್ನು ಗುರುವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.














