Last Updated:
ಹಾಡಹಗಲೇ ಬಿಜೆಪಿ ನಾಯಕನನ್ನು ಗುಂಡಿಕ್ಕಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.
ಬಿಹಾರ: ಭಾಗಲ್ಪುರದಲ್ಲಿ (Bhagalpur) ಹಾಡಹಗಲೇ ಬಿಜೆಪಿ (BJP) ನಾಯಕರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಬಬರಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ಕುತುಬ್ಗಂಜ್ (Qutubganj) ಪ್ರದೇಶದಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಮೃತರನ್ನು ಬಿಜೆಪಿಯಲ್ಲಿ ಮಂಡಲ ಅಧ್ಯಕ್ಷರಾಗಿದ್ದ ಉಮಾ ಭೂಷಣ್ ತಂತಿ ಎಂದು ಗುರುತಿಸಲಾಗಿದೆ. ತಲೆಗೆ ಗುಂಡಿಕ್ಕಿ ಹತ್ಯೆ ಮಾಡಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಘಟನೆ ಸಂಬಂಧ ಬಿಹಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.














