Last Updated:
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ (Actor Darshan) ಸಂಕಷ್ಟಗಳು ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಎದುರಾಗಿದೆ. ಪ್ರಕರಣದ ಪ್ರಮುಖ ಆರೋಪಿ ಪ್ರದೂಶ್ ಮಾಫಿ ಸಾಕ್ಷಿಯಾಗಲು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಾಳೆ ನಡೆಯಲಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ (Actor Darshan) ಸಂಕಷ್ಟಗಳು ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಎದುರಾಗಿದೆ. ಪ್ರಕರಣದ ಪ್ರಮುಖ ಆರೋಪಿ ಪ್ರದೂಶ್ ಮಾಫಿ ಸಾಕ್ಷಿಯಾಗಲು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಾಳೆ ನಡೆಯಲಿದೆ. ಈ ಸಂಬಂಧ ಪ್ರದೂಶ್ ಈಗಾಗಲೇ ಪ್ರಾಥಮಿಕ ಹೇಳಿಕೆ ದಾಖಲಿಸಿಕೊಂಡಿದ್ದು, ಮಾಫಿ ಸಾಕ್ಷಿ ಆಗುವ ಕುರಿತು ಲಿಖಿತ ಅರ್ಜಿಗೆ ಸಹಿ ಮಾಡಿ ಕೋರ್ಟ್‌ಗೆ ಸಲ್ಲಿಸಿದ್ದಾನೆ ಎನ್ನಲಾಗಿದೆ. ಇದೀಗ ನ್ಯಾಯಾಲಯದ ಮುಂದೆ ಅಧಿಕೃತ ಹೇಳಿಕೆ ದಾಖಲಿಸುವ ಪ್ರಕ್ರಿಯೆ ನಡೆಯಲಿದ್ದು, ಈ ವಿಚಾರಣೆಯ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.














