Last Updated:
ದರ್ಶನ್ ನ ನ್ಯಾಯಾಲಯಕ್ಕೆ ನೇರವಾಗಿ ಹಾಜರುಪಡಿಸುವ ವಿಚಾರಕ್ಕೆ SPP ಪ್ರಸನ್ನ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ದರ್ಶನ್ ಖುದ್ದು ಹಾಜರಾತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನ ಹಿಂದಿನ ಆದೇಶವೊಂದನ್ನು ಅವರು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ(Renukaswamy case) ನಟ ದರ್ಶನ್(Darshan) ಕಾನೂನು ಹೋರಾಟ ಮುಂದುವರಿದಿದ್ದು, ಇದೀಗ ದರ್ಶನ್ ಖುದ್ದು ನ್ಯಾಯಾಲಯದ ಹಾಜರಾತಿ ವಿಚಾರ ಮತ್ತೊಂದು ಪ್ರಮುಖ ಹಂತ ತಲುಪಿದೆ. ಮಾಫಿ ಸಾಕ್ಷಿ ಅರ್ಜಿಗೆ ಸಂಬಂಧಿಸಿದ ವಿಚಾರಣೆಯಲ್ಲಿ ತಮ್ಮ ವಾದ ಮಂಡಿಸಲು ಅವಕಾಶ ನೀಡಬೇಕು ಎಂಬ ದರ್ಶನ್ ಪರ ವಕೀಲರ ಮನವಿಯ ಜೊತೆಗೆ, ದರ್ಶನ್ ನ ಖುದ್ದು ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರವೂ ಹೈಕೋರ್ಟ್ ಮುಂದೆ ಬಂದಿದೆ. ಈ ಬಗ್ಗೆ ಪ್ರಾಸಿಕ್ಯೂಷನ್ ಪರ ವಾದವನ್ನು ಆಲಿಸಿರುವ ನ್ಯಾಯಾಲಯ, ಪ್ರಕರಣದ ಸಂಪೂರ್ಣ ವರದಿ ಸಲ್ಲಿಸುವಂತೆ ಸೂಚಿಸಿದ್ದು, ಸೋಮವಾರ ಆದೇಶ ಪ್ರಕಟಿಸುವುದಾಗಿ ತಿಳಿಸಿದೆ.














