Darshan: ದರ್ಶನ್‌ಗೆ ಬಿಗ್ ಶಾಕ್! ಪ್ರದೋಷ್‌ಗೆ ಮಾಫಿ ಸಾಕ್ಷಿಗಿಲ್ಲ ತಡೆ, ವಕೀಲರ ಕೊನೇ ಕ್ಷಣದ ಪ್ಲ್ಯಾನ್‌ಗೆ ಕೋರ್ಟ್ ಬ್ರೇಕ್! | | ACTPnews

News18


Last Updated:

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Case) ನಟ ದರ್ಶನ್ (Actor Darshan) ಪರ ವಕೀಲರು ಸಲ್ಲಿಸಿದ್ದ ಮಹತ್ವದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

News18
News18

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Case) ನಟ ದರ್ಶನ್ (Actor Darshan) ಪರ ವಕೀಲರು ಸಲ್ಲಿಸಿದ್ದ ಮಹತ್ವದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಪ್ರಕರಣದ ಆರೋಪಿ ಪ್ರದೋಷ್ ನ ಮಾಫಿ ಸಾಕ್ಷಿಯಾಗಿ ಪರಿಗಣಿಸಿರುವ ಹಿನ್ನೆಲೆಯಲ್ಲಿ, ಪ್ರದೋಷ್ ಹೇಳಿಕೆ ದಾಖಲಿಸುವ ಪ್ರಕ್ರಿಯೆಯನ್ನು ಒಂದು ವಾರ ಮುಂದೂಡುವಂತೆ ದರ್ಶನ್ ಪರ ವಕೀಲರು ಕೊನೆಯ ಕ್ಷಣದಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಇದೀಗ 59ನೇ ಸಿಸಿಹೆಚ್ ನ್ಯಾಯಾಲಯ ಆ ಅರ್ಜಿಯನ್ನು ತಿರಸ್ಕರಿಸಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಷ್ ನ ಮಾಫಿ ಸಾಕ್ಷಿಯಾಗಿ ಪರಿಗಣಿಸುವ ವಿಚಾರ ಈಗಾಗಲೇ ಪ್ರಕರಣದಲ್ಲಿ ಪ್ರಮುಖ ಬೆಳವಣಿಗೆಯಾಗಿತ್ತು. ಮಾಫಿ ಸಾಕ್ಷಿಯಾಗಿ ಹೇಳಿಕೆ ದಾಖಲಿಸುವ ದಿನಾಂಕವನ್ನು ನ್ಯಾಯಾಲಯ ನಿಗದಿಪಡಿಸಿತ್ತು. ಆದರೆ ಹೇಳಿಕೆ ದಾಖಲಾಗಲು ಕೇವಲ ಒಂದು ದಿನ ಬಾಕಿ ಇರುವಾಗ ದರ್ಶನ್ ಪರ ವಕೀಲರು ಹೊಸ ಅರ್ಜಿಯೊಂದಿಗೆ ನ್ಯಾಯಾಲಯದ ಮೊರೆ ಹೋಗಿದ್ದರು.

ಪ್ರದೋಷ್ ಮಾಫಿ ಸಾಕ್ಷಿ ಹೇಳಿಕೆಯನ್ನು ಒಂದು ವಾರ ಮುಂದೂಡಬೇಕು ಎಂಬುದು ಅರ್ಜಿಯಲ್ಲಿನ ಪ್ರಮುಖ ಮನವಿಯಾಗಿತ್ತು. ಈ ಬೆಳವಣಿಗೆ ಪ್ರಕರಣದ ವಿಚಾರಣೆಯ ನಡುವೆ ಕುತೂಹಲ ಮೂಡಿಸಿತ್ತು.

ಸೋಮವಾರ ಪ್ರದೋಷ್ ಹೇಳಿಕೆ ದಾಖಲು

ನ್ಯಾಯಾಲಯದ ಆದೇಶದಂತೆ ಪ್ರದೋಷ್ ಮಾಫಿ ಸಾಕ್ಷಿ ಹೇಳಿಕೆ ದಾಖಲಿಸುವ ಪ್ರಕ್ರಿಯೆಯನ್ನು ಸೋಮವಾರ ನಡೆಸಲು ನಿಗದಿಯಾಗಿದೆ. ಹೀಗಾಗಿ ದರ್ಶನ್ ಪರ ವಕೀಲರು ಸಲ್ಲಿಸಿದ್ದ ಒಂದು ವಾರದ ಮುಂದೂಡಿಕೆ ಮನವಿ ಇದೀಗ ವಜಾಗೊಂಡಿರುವ ಹಿನ್ನೆಲೆಯಲ್ಲಿ ನಿಗದಿತ ಪ್ರಕ್ರಿಯೆ ಮುಂದುವರಿಯಲಿದೆ.

(ವರದಿ: ಗಂಗಾಧರ ವಗಾಟ, ನ್ಯೂಸ್ 18 ಕನ್ನಡ, ಬೆಂಗಳೂರು)



Source link

Leave a Reply

Your email address will not be published. Required fields are marked *

Search the Archives

Access over the years of investigative journalism and breaking reports